Homeಮುಖಪುಟದಲಿತರನ್ನು ರಾಜಕೀಯ ಪಕ್ಷಗಳು 'ಗುಲಾಮರಂತೆ' ನಡೆಸಿಕೊಳ್ಳುತ್ತಿವೆ: ಬಿಜೆಪಿ ಶಾಸಕ ಮೇಘವಾಲ್

ದಲಿತರನ್ನು ರಾಜಕೀಯ ಪಕ್ಷಗಳು ‘ಗುಲಾಮರಂತೆ’ ನಡೆಸಿಕೊಳ್ಳುತ್ತಿವೆ: ಬಿಜೆಪಿ ಶಾಸಕ ಮೇಘವಾಲ್

- Advertisement -
- Advertisement -

ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಿದ್ದು, ಮುಕ್ತವಾಗಿ ಮಾತನಾಡಿದರೆ ಚುನಾವಣೆಗೆ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಶಾಸಕ ಕೈಲಾಶ್ ಮೇಘವಾಲ್ ಹೇಳಿದ್ದಾರೆ.

ಭಾನುವಾರ ಸಂಜೆ ಭಿಲ್ವಾರಾ ಜಿಲ್ಲೆಯ ಶಾಹ್ಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುವಾಗ ರಾಜಸ್ಥಾನದ ಮಾಜಿ ವಿಧಾನಸಭಾ ಸ್ಪೀಕರ್  ಮೇಘವಾಲ್ ಈ ರೀತಿಯಲ್ಲಿ ಟೀಕೆಗಳನ್ನು ಮಾಡಿದರು.

“ಇದು ನನ್ನ ಕ್ಷೇತ್ರ, ಈ ಕ್ಷೇತ್ರ ಹಿಂದುಳಿದಿತ್ತು ಮತ್ತು ಈಗಲೂ ಹಿಂದುಳಿದಿದೆ ಏಕೆಂದರೆ, 1952ರಿಂದ ಇದು ಮೀಸಲು ಕ್ಷೇತ್ರವಾಗಿದೆ” ಎಂದು ಶಹಾಪುರ ಶಾಸಕ ಮೇಘವಾಲ್ ಹೇಳಿದರು.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತರು ದೇವಾಲಯ ಪ್ರವೇಶಿಸಿದರೆಂದು ಹಿಂಸಾಚಾರ; 14 ಜನರಿಗೆ ಗಾಯ

”ಇಂದಿನ ರಾಜಕೀಯದಲ್ಲಿ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತವೆ ಎಂದು ಹೇಳಲು ನನಗೆ ಯಾವುದೇ ಹಿಂಜರಿಕೆಯಿಲ್ಲ. ಅವರಿಗೆ ಮುಕ್ತವಾಗಿ ಮಾತನಾಡುವ ಸ್ವಾತಂತ್ರ್ಯವಿಲ್ಲ. ಅವರು ಮುಕ್ತವಾಗಿ ಮಾತನಾಡಿದರೆ ಟಿಕೆಟ್ ನೀಡುವುದಿಲ್ಲ” ಎಂದರು.

ಈ ವಿಚಾರವಾಗಿ ಮೇಘವಾಲ್ ಅವರನ್ನು ಪಿಟಿಐ ಸಂಪರ್ಕಿಸಿದಾಗ ಅವರು, ”ನಾನು ಏನು ಹೇಳಲು ಬಯಸಿದ್ದೇನೋ ಅದನ್ನೆಲ್ಲ ಹೇಳಿದ್ದೇನೆ. ನಾನು ಅದರ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ, ನಾನು ಹೇಳಿರುವುದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಆದರೆ ಅದೇ ಸತ್ಯ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...