HomeಮುಖಪುಟIT, ED, CBI ಸಂಸ್ಥೆಗಳು 'ಮೋದಿ ಸರ್ಕಾರ'ದ ಕಿರುಕುಳದ ಸಾಧನಗಳು: ಜೈರಾಮ್ ರಮೇಶ್

IT, ED, CBI ಸಂಸ್ಥೆಗಳು ‘ಮೋದಿ ಸರ್ಕಾರ’ದ ಕಿರುಕುಳದ ಸಾಧನಗಳು: ಜೈರಾಮ್ ರಮೇಶ್

- Advertisement -
- Advertisement -

2021-22ರ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಬೆಂಬಲ ನೀಡುವ ಕುರಿತು ಕಾಂಗ್ರೆಸ್‌ನ ದೆಹಲಿ ಘಟಕ ಮತ್ತು ಪಕ್ಷದ ರಾಷ್ಟ್ರೀಯ ನಾಯಕತ್ವದ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿವೆ.

ದೆಹಲಿ ಕಾಂಗ್ರೆಸ್ ಘಟಕವು ಸಿಬಿಐ ಕ್ರಮವನ್ನು ಸ್ವಾಗತಿಸಿದರೆ, ಹಿರಿಯ ನಾಯಕ ಜೈರಾಮ್ ರಮೇಶ್ ಅವರು ಸೋಮವಾರ ರಾತ್ರಿ ಸಿಬಿಐ ಕ್ರಮವನ್ನು ದೂಷಿಸಿದ್ದಾರೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಎಲ್ಲಾ ತನಿಖಾ ಸಂಸ್ಥೆಗಳನ್ನು “ಕಿರುಕುಳ ನೀಡುವ ಸಾಧನಗಳು” ಎಂದು ಕರೆದಿದ್ದಾರೆ.

ಮೂಲಗಳ ಪ್ರಕಾರ, ರಮೇಶ್ ಅವರು ಆಪ್ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಕೆಲವರು ಖಾಸಗಿಯಾಗಿ ಆರೋಪಿಸಿ ಸಾರ್ವಜನಿಕವಾಗಿ ನಿಂದಿಸಿರುವ ಬಗ್ಗೆ ರಾಜ್ಯ ನಾಯಕರು ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ಆರು ತಿಂಗಳಲ್ಲಿ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು: ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವ ಬಗ್ಗೆ ಕಾಂಗ್ರೆಸ್, ”ಜಾರಿ ನಿರ್ದೇಶನಾಲಯ (ಇಡಿ), ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಆದಾಯ ತೆರಿಗೆ ಇಲಾಖೆಯನ್ನು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕಿರುಕುಳ ಸಾಧನಗಳು’” ಎಂದು ಸೋಮವಾರ ಬಣ್ಣಿಸಿದೆ.

“ED, CBI ಮತ್ತು ಆದಾಯ ತೆರಿಗೆ ಇಲಾಖೆಯಂತಹ ಸಂಸ್ಥೆಗಳು ‘ಮೋದಿ ಸರ್ಕಾರ’ದ ಅಡಿಯಲ್ಲಿ ರಾಜಕೀಯ ಸೇಡು ಮತ್ತು ಕಿರುಕುಳದ ಸಾಧನಗಳಾಗಿವೆ ಎಂಬ ನಂಬಿಕೆಯನ್ನು ಕಾಂಗ್ರೆಸ್ ಯಾವಾಗಲೂ ಹೊಂದಿದೆ. ಈ ಸಂಸ್ಥೆಗಳು ಎಲ್ಲಾ ವೃತ್ತಿಪರತೆಯನ್ನು ಕಳೆದುಕೊಂಡಿವೆ. ಪ್ರತಿಪಕ್ಷದ ನಾಯಕರ ಪ್ರತಿಷ್ಠೆಯನ್ನು ನಾಶಮಾಡುವ ಗುರಿಯನ್ನು ಹೊಂದಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ಬಗ್ಗೆ ಏನನ್ನೂ ಉಲ್ಲೇಖಿಸದೆ ಹೇಳಿದರು.

ಭಾನುವಾರ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ 24 ಗಂಟೆಗಳ ನಂತರ ಕಾಂಗ್ರೆಸ್‌ ಪ್ರತಿಕ್ರಿಯಿಸಿದ್ದು, ಪಕ್ಷದ ದೆಹಲಿ ಘಟಕದ ನಾಯಕರು ಈ ಕ್ರಮವನ್ನು ಸ್ವಾಗತಿಸಿದ್ದಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...