Homeಮುಖಪುಟತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

ತೆಲಂಗಾಣ: ಜಾತಿ ವಿರೋಧಿ ಹೋರಾಟಗಾರ ನರೇಶ್ ಮೇಲೆ ಆರ್‌ಎಸ್‌ಎಸ್ ಗೂಂಡಾಗಳಿಂದ ಹಲ್ಲೆ

- Advertisement -
- Advertisement -

ನಾಸ್ತಿಕ ಸಂಘಟನೆ ”ಭಾರತ ನಾಸ್ತಿಕ ಸಮಾಜ”ದ ಬೈರಿ ನರೇಶ್, ಅವರ ಮೇಲೆ ಹಿಂದು ಸಂಘಟನೆಯ ಗುಂಪೊಂದು ಹಲ್ಲೆ ನಡೆಸಿದ ಘಟನೆ ಸೋಮವಾರ ತೆಲಂಗಾಣದ ಹನಮಕೊಂಡ ಜಿಲ್ಲೆಯಲ್ಲಿ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಾತಿ ವಿರೋಧಿ ಹೋರಾಟಗಾರ ಮತ್ತು ನಾಸ್ತಿಕ ಸಂಘಟನೆಯ ತೆಲಂಗಾಣ ಘಟಕದ ಮುಖ್ಯಸ್ಥ ನರೇಶ್ ಅವರು ಹಿಂದೂ ದೇವರಾದ ಅಯಪ್ಪನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಳೆದ ವರ್ಷ ಅವರನ್ನು ಬಂಧಿಸಲಾಗಿತ್ತು. ಸದ್ಯ ನರೇಶ್ ಜಾಮೀನಿನ ಮೇಲೆ ಹೊರಗಿದ್ದಾರೆ.

ಜಾತಿ ವಿರೋಧಿ ಹೋರಾಟಗಾರ ಮತ್ತು ನಾಸ್ತಿಕ ಸಂಘಟನೆಯ ತೆಲಂಗಾಣ ಘಟಕದ ಮುಖ್ಯಸ್ಥ ನರೇಶ್

ಅವರು ಹನಮಕೊಂಡ ಜಿಲ್ಲೆಯ ಗೋಪಾಲಪುರಂನಲ್ಲಿರುವ ಕಾನೂನು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರ ಮೇಲೆ ಗುಂಪೊಂದು ಹಲ್ಲೆ ನಡೆಸಬಹುದು ಎನ್ನುವ ಬಗ್ಗೆ ನನಗೆ ಮಾಹಿತಿ ಬಂದಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.

”ನನ್ನ ಹಿತೈಷಿಯೊಬ್ಬರು ನನ್ನನ್ನು ಸಂಪರ್ಕಿಸಿದರು ಮತ್ತು ಹೊರಗೆ ಕೆಲವು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ಇದ್ದಾರೆ ಎಂದು ಹೇಳಿದರು” ಎಂದು ನರೇಶ್ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

”ನನ್ನ ಮೇಲೆ ದಾಳಿ ನಡೆಯುತ್ತದೆ ಎಂಬುದು ಗೊತ್ತಾದಾಗ, ನಾನು ಭಯದಿಂದ ಪೊಲೀಸರನ್ನು ಸಂಪರ್ಕಿಸಿದೆ. ಪೊಲೀಸರು ನನಗೆ ರಕ್ಷಣೆ ನೀಡಿದರು ಮತ್ತು ಸುರಕ್ಷಿತವಾಗಿ ಅವರು ನನ್ನನ್ನು ಅಲ್ಲಿಂದ ಕರೆದೊಯ್ಯಲು ವಾಹನದ ವ್ಯವಸ್ಥೆ ಕೂಡ ಮಾಡಿದರು. ಆದರೆ ಮಾರ್ಗಮಧ್ಯೆ, ದಾಳಿಕೋರರು ಪೊಲೀಸ್ ವಾಹನವನ್ನು ನಿಲ್ಲಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಛತ್ತೀಸ್‌ಗಢ: ಮದುವೆಗೆ ಒಪ್ಪದ ಅಪ್ರಾಪ್ತೆಯ ಕೂದಲಿಡಿದು ಎಳೆದಾಡಿ, ನಡುರಸ್ತೆಯಲ್ಲಿ ಹಲ್ಲೆ

ದಾಳಿ ನಡೆಸಿರುವ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂದ್ದು, ಪೊಲೀಸರು ಅವರನ್ನು ಎಳೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದರೂ ಸಹ ಆ ಗುಂಪು ಪೊಲೀಸ್ ವ್ಯಾನ್‌ನ ಒಳಗೆ ನುಗ್ಗಿ ನರೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ವೀಡಿಯೊದಲ್ಲಿ ಕಂಡುಬರುವ ಎಲ್ಲಾ ದಾಳಿಕೋರರನ್ನು ಬಂಧಿಸಲಾಗಿದೆ ಎಂದು ವಾರಂಗಲ್ ಪೊಲೀಸ್ ಕಮಿಷನರ್ ಎವಿ ರಂಗನಾಥ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಒಬಿಸಿ ಸಮುದಾಯಕ್ಕೆ ಸೇರಿದ ನರೇಶ್ ಅವರು, ಡಿಸೆಂಬರ್‌ನಲ್ಲಿ ವಿಕಾರಾಬಾದ್ ಜಿಲ್ಲೆಯ ಸಾರ್ವಜನಿಕ ಸಭೆಯೊಂದರಲ್ಲಿ ಮಾಡಿದ ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು. ನಂತರ ಆ ಭಾಷಣದಿಂದ ಹಿಂದುತ್ವವಾದಿಗಳು ಉದ್ವಿಗ್ನಗೊಳ್ಳುವಂತೆ ಮಾಡಿತ್ತು ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ನರೇಶ್ ತಮ್ಮ ಭಾಷಣದಲ್ಲಿ ಅಯ್ಯಪ್ಪನ ಜನ್ಮವನ್ನು ಲೈಂಗಿಕವಾಗಿ ಅಸ್ಪಷ್ಟ ರೀತಿಯಲ್ಲಿ ವಿವರಿಸಿದ್ದರು. ಆಗ ನರೇಶ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯದ ಹಲವು ಕಡೆ ಹಿಂದೂ ಭಕ್ತರು ಪ್ರತಿಭಟನೆ ನಡೆಸಿದರು. ಡಿಸೆಂಬರ್ 31 ರಂದು, ಪೊಲೀಸರು ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ನಂಬಿಕೆಗಳನ್ನು ಅತಿರೇಕಗೊಳಿಸುವುದು ಮತ್ತು ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿರು. ನಂತರ ಅವರನ್ನು ಬಂಧಿಸಲಾಗಿತ್ತು. ಇದೀಗ ಅವರು ಜಾಮೀನಿನದ ಮೇಲೆ ಹೊರಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...