Homeಮುಖಪುಟರಾಜಕೀಯ ಬಹುಮತ ತೋರಿಸಿ, ಶಾಸಕಾಂಗದ್ದಲ್ಲ; ಶಿಂಧೆ ಬಣಕ್ಕೆ ಸುಪ್ರೀಂ ತಾಕೀತು

ರಾಜಕೀಯ ಬಹುಮತ ತೋರಿಸಿ, ಶಾಸಕಾಂಗದ್ದಲ್ಲ; ಶಿಂಧೆ ಬಣಕ್ಕೆ ಸುಪ್ರೀಂ ತಾಕೀತು

- Advertisement -
- Advertisement -

“ಶಿವಸೇನೆ ನಮಗೆ ಸೇರಿದ್ದು” ಎಂದು ಹಕ್ಕು ಪ್ರತಿಪಾದಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಸಿಂಧೆ ಬಣವು, “ಶಾಸಕಾಂಗ ಪಕ್ಷವು ಅವಿಭಾಜ್ಯವಾಗಿದೆ ಮತ್ತು ರಾಜಕೀಯ ಪಕ್ಷದೊಂದಿಗೆ ಸಾವಯವವಾಗಿ ಸಂಪರ್ಕ ಹೊಂದಿದೆ” ಸುಪ್ರೀಂಕೋರ್ಟ್‌ನಲ್ಲಿ ವಾದಿಸಿದೆ.

ಶಿಂಧೆ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌ಕೆ ಕೌಲ್‌, “ಪ್ರತಿಸ್ಪರ್ಧಿ ನಾಯಕರಿಗೆ ಸಚಿವ ಸಂಪುಟದಲ್ಲಿ ಇನ್ನು ನಂಬಿಕೆ ಇಲ್ಲ” ಎಂದು ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠಕ್ಕೆ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಂ.ಆರ್.ಷಾ, ಕೃಷ್ಣ ಮುರಾರಿ, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ವಿಷಯದ ಕುರಿತು ವಿಚಾರಣೆ ನಡೆಸುತ್ತಿದೆ.

ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ನರಸಿಂಹ ಅವರು ಶಿಂಧೆ ಬಣವನ್ನು ಪ್ರಶ್ನಿಸಿದ್ದು, “ರಾಜಕೀಯ ಬಹುಮತವಿದೆ ಎಂಬುದನ್ನು ತೋರಿಸಬೇಕೇ ಹೊರತು ಶಾಸಕಾಂಗದ ಬಹುಮತವಲ್ಲ” ಎಂದಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯಲ್ಲಿ ತಿಳಿಸುವುದಾಗಿ ಹಿರಿಯ ವಕೀಲ ಎನ್‌.ಕೆ.ಕೌಲ್‌ ಅವರು ನ್ಯಾಯಾಲಯಕ್ಕೆ ಉತ್ತರಿಸಿದ್ದಾರೆ.

ಹಲವು ತೀರ್ಪುಗಳ ಕಾನೂನು ದೃಷ್ಟಿಕೋನಗಳ ಕುರಿತು, ಪಕ್ಷಾಂತರ ಮತ್ತು ಬಹುಮತ ಸಾಬೀತನ್ನು ವಿಭಿನ್ನವಾಗಿ ಹೇಗೆ ನೋಡಬೇಕೆಂಬುದರ ಸಂಬಂಧ ಹಲವಾರು ಪ್ರಶ್ನೆಗಳನ್ನು ನ್ಯಾಯಾಲಯ ಶಿಂಧೆ ಬಣಕ್ಕೆ ಕೇಳಿದೆ.

ಸಿಜೆಐ ಚಂದ್ರಚೂಡ್ ಅವರು ಹತ್ತನೇ ಷಡ್ಯೂ‌ಲ್‌ ಉಲ್ಲಂಘನೆಯ ಪ್ರಸ್ತಾಪ ಮಾಡಿದ್ದಾರೆ. ಹತ್ತನೇ ಶೆಡ್ಯೂಲ್ ಅಡಿಯಲ್ಲಿ ಅನುಮತಿಸದ ಪಕ್ಷಾಂತರವನ್ನು ಅವರು ಕಾನೂನುಬದ್ಧಗೊಳಿಸುತ್ತಿದ್ದಾರೆಯೇ ಎಂದು ತಿಳಿಯಲು ನ್ಯಾಯಾಲಯವು ಕೋರಿದೆ.

ವಕೀಲರು ಪ್ರತಿಕ್ರಿಯಿಸಿ, “ತಮ್ಮ ಪ್ರಕರಣವು ಹತ್ತನೇ ಶೆಡ್ಯೂಲ್ ಅಡಿಯಲ್ಲಿ ವಿಭಜನೆಯಾದ ಪ್ರಕರಣವಲ್ಲ, ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಪಕ್ಷದೊಳಗಿನ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ, ಪಕ್ಷವು ನಮ್ಮ ಬಣಕ್ಕೆ ಸೇರಿದೆ” ಎಂದು ಪ್ರತಿಪಾದಿಸಿದ್ದಾರೆ.

ಬಹುಮತ ಅಗತ್ಯಕ್ಕೆ ಸಂಬಂಧಿಸಿದ ಸಮಸ್ಯೆಯು ಪಕ್ಷಾಂತರ ಆರೋಪದೊಂದಿಗೆ ಥಳುಕು ಹಾಕಿಕೊಂಡಿರುವುದನ್ನು ನ್ಯಾಯಾಲಯ ಗಮನಿಸಿದೆ. ಅನರ್ಹತೆಯ ಪ್ರಕ್ರಿಯೆಯೊಂದಿಗೆ ವಿಶ್ವಾಸ ಮತವೂ ಅಂತರ್ಗತವಾಗಿ ಸಂಬಂಧಿಸಿರುವುದರಿಂದ ಸಮಸ್ಯೆ ಉದ್ಭವಿಸುತ್ತದೆ ಎಂದಿದೆ.

ಇದು ಆಂತರಿಕ ಭಿನ್ನಾಭಿಪ್ರಾಯದ ಪ್ರಕರಣವಾಗಿದ್ದು, ಶಿಂಧೆ ಗುಂಪು ಶಿವಸೇನೆಯನ್ನು ಪ್ರತಿನಿಧಿಸುವ ಬಣವಾಗಿದೆ. ಇದನ್ನು ಭಾರತದ ಚುನಾವಣಾ ಆಯೋಗ ನಿರ್ಧರಿಸಬಹುದು ಎಂದು ಹಿರಿಯ ವಕೀಲ ಕೌಲ್ ಹೇಳಿದ್ದಾರೆ.

ಮುಖ್ಯಮಂತ್ರಿಗೆ ವಿಶ್ವಾಸವಿದೆಯೇ ಎಂಬ ವಿಷಯಕ್ಕೆ ಮಾತ್ರ ಬಹುಮತ ಸಾಬೀತು ವಿಚಾರ ಸಂಬಂಧಿಸಿದೆ ಎಂದು ಕೌಲ್ ವಾದಿಸಿದ್ದಾರೆ.

ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ರಾಜಕೀಯ ಪಕ್ಷದ ಮುಖ್ಯಸ್ಥರು ರಾಜ್ಯಪಾಲರಿಗೆ ಮಾಹಿತಿ ನೀಡಿಲ್ಲ ಎಂದು ನ್ಯಾಯಾಲಯ ಪ್ರತಿಕ್ರಿಯಿಸಿದೆ.

“55ರಲ್ಲಿ 34 ಮಂದಿ ಈ ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ” ಎಂದು ಕೌಲ್ ಉತ್ತರಿಸಿದ್ದಾರೆ.

ಈ ಹಿಂದೆ ಉದ್ಧವ್ ಠಾಕ್ರೆ ಬಣವು ಹತ್ತನೇ ಶೆಡ್ಯೂಲ್‌ ಪ್ರಕಾರ ಎದುರು ಪಾಳಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ತಿಳಿಸಿತ್ತು.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರತಿಸ್ಪರ್ಧಿ ಬಣಗಳಾದ ಉದ್ಧವ್ ಠಾಕ್ರೆ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಲ್ಲಿಸಿದ ಅರ್ಜಿಗಳನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠವು ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...