Homeಕರ್ನಾಟಕಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

ಮಾರ್ಚ್ 4, 5ರಂದು ಬಸವ ಕಲ್ಯಾಣದಲ್ಲಿ ಲಿಂಗಾಯತ ಮಹಾ ಅಧಿವೇಶನ

- Advertisement -
- Advertisement -

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಮಾರ್ಚ್‌ 4 ಮತ್ತು 5ರಂದು ಬಸವಕಲ್ಯಾಣದಲ್ಲಿ ಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಜಾಗತಿಕ ಲಿಂಗಾಯತ ಮಹಾಸಭೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ರೊಟ್ಟಿಯವರು, ‘ಲಿಂಗಾಯಿತರ ಸಂಘಟನೆಗಳಾದ ರಾಷ್ಟ್ರೀಯ ಬಸವದಳ, ಲಿಂಗಾಯತ ಧರ್ಮ ಮಹಾಸಭಾ, ಬಸವ ಸಮಿತಿ, ಶರಣ ಸಾಹಿತ್ಯ ಪರಿಷತ್‌, ಲಿಂಗಾಯತ ಮಠಾಧೀಶರ ಒಕ್ಕೂಟ, ಬಸವೇಶ್ವರ ಪಂಚ ಕಮಿಟಿ– ಬಸವಕಲ್ಯಾಣ ಹಾಗೂ ಇನ್ನೂ ಅನೇಕ ಸಂಘಟನೆಗಳ ಸಹಯೋಗದಲ್ಲಿ ಈ ಅಧಿವೇಶನ ಆಯೋಜಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿದೇಶಗಳಲ್ಲಿಯೂ ಇರುವ ಲಿಂಗಾಯತ ಪ್ರತಿನಿಧಿಗಳು ಅಧಿವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಚಿಂತಕ ಗೊ.ರು.ಚನ್ನಬಸವಪ್ಪ ಅವರು ಅಧಿವೇಶನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಾರ್ಚ್ 4ರಂದು ಬಸವಕಲ್ಯಾಣದಲ್ಲಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಗುತ್ತಿದೆ. ನಾಡಿನ 200ಕ್ಕೂ ಅಧಿಕ ಲಿಂಗಾಯತ ಮಠಾಧೀಶರು ಎರಡೂ ದಿನಗಳ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಬಸವ ಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅವೈದಿಕ ಲಿಂಗಾಯತ ಧರ್ಮ ಬಸವಣ್ಣನವರಿಂದ ಸ್ಥಾಪನೆಯಾಯಿತು. ಇಲ್ಲಿಯೇ ಅನುಭವ ಮಂಟಪವೂ ಬೆಳೆದಿದ್ದರಿಂದ ಬಸವಕಲ್ಯಾಣವು ಲಿಂಗಾಯತರಿಗೆ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ. ಆ ಕಾರಣಕ್ಕಾಗಿ ಪ್ರಪ್ರಥಮ ರಾಷ್ಟ್ರೀಯ ಲಿಂಗಾಯತ ಮಹಾ ಅಧಿವೇಶನವನ್ನು ಅಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

‘ಪ್ರತಿನಿಧಿಗಳಿಗೆ ಊಟೋಪಚಾರ ಮತ್ತು ವಸತಿ ವ್ಯವಸ್ಥೆಯನ್ನು ಜಾಗತಿಕ ಲಿಂಗಾಯತ ಮಹಾಸಭೆಯ ಕೇಂದ್ರ ಕಚೇರಿಯಿಂದ ಮಾಡಲಾಗಿದೆ. ಎರಡು ದಿನಗಳ ಮಹಾ ಅಧಿವೇಶನದಲ್ಲಿ ನಾಲ್ಕು ಗೋಷ್ಠಿಗಳು ನಡೆಯಲಿವೆ” ಎಂದಿದ್ದಾರೆ.

‘ಅಧಿವೇಶನದ ವೇದಿಕೆಯು ಸಂಪೂರ್ಣವಾಗಿ ರಾಜಕೀಯೇತರವಾಗಿದೆ. ವೇದಿಕೆಯ ಮೇಲೆ ಯಾವುದೇ ರಾಜಕೀಯ ಪಕ್ಷದ ನಾಯಕರಿಗೆ ಸ್ಥಾನ ಇರುವುದಿಲ್ಲ. ಆದರೆ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಲೋಕಸಭೆಯಲ್ಲಿ ಮಾತನಾಡಿರುವ ಮಹಾರಾಷ್ಟ್ರದ ಸಂಸದರಾದ ಧೈರ್ಯಶೀಲ ಮಾನೆ, ಓಂ ಪ್ರಕಾಶ್ ರಾಜೆ ನಿಂಬಾಳ್ಕರ್, ಮಾಜಿ ಸಂಸದ ರಾಜು ಶೆಟ್ಟಿ ಹಾಗೂ ಹಲವರನ್ನು ಸತ್ಕರಿಸಲಾಗುತ್ತದೆ’ ಎಂದು ಹೇಳಿದ್ದಾರೆ.

ಅಧಿವೇಶನದಲ್ಲಿ ಹಲವಾರು ಚರ್ಚೆಗಳನ್ನು ನಡೆಸಲಾಗುತ್ತಿದೆ. ಮೀಸಲಾತಿ ಮತ್ತು ಲಿಂಗಾಯತರು, ಸ್ವತಂತ್ರ ಧರ್ಮದ ಹೋರಾಟದಲ್ಲಿ ಲಿಂಗಾಯತರು, ಜನಗಣತಿ ಮತ್ತು ಲಿಂಗಾಯತರು, ಲಿಂಗಾಯತರನ್ನು ಸಂಘಟಿಸುವಲ್ಲಿ ಮತ್ತು ಲಿಂಗಾಯತ ನಿಜಾಚರಣೆಗಳನ್ನು ಅಳವಡಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ, ಸ್ಥಳೀಯ ಲಿಂಗಾಯತ ಮಠಗಳ ಮಾರ್ಗದರ್ಶನದಲ್ಲಿ ಲಿಂಗಾಯತ ಸಮಾಜದ ವಿವಿಧ ಪಂಗಡಗಳನ್ನು ಒಂದುಗೂಡಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಮಹಿಳೆಯರನ್ನು ಒಂದುಗೂಡಿಸಿ ಲಿಂಗಾಯತ ಸಮಾಜವನ್ನು ಸಂಘಟಿಸುವ ಮಹಿಳೆಯರ ಪಾತ್ರ, ವೈದಿಕದತ್ತ ವಾಲುತ್ತಿರುವ ಲಿಂಗಾಯತರಿಗೆ ನಿಜಾಚರಣೆಗಳನ್ನು ಜಾರಿಗೊಳಿಸುವಲ್ಲಿ ಲಿಂಗಾಯತ ಮಹಿಳೆಯರ ಪಾತ್ರ, ಲಿಂಗಾಯತ ಸಮಾಜದ ಸಂಘಟನೆ ವಿವಿಧ ಪಂಗಡಗಳು ಏಕೀಕರಣ ಹಾಗೂ ಲಿಂಗಾಯತ ನಿಜಾಚರಣೆಗಳ ಪ್ರಚಾರದಲ್ಲಿ ಯುವಕ ಯುವತಿಯರ ಪಾತ್ರ, ನಗರ ಗ್ರಾಮ ತಾಲ್ಲೂಕು ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯುವ ಘಟಕಗಳನ್ನು ಸಂಘಟಿಸಲು ವಿವಿಧ ಮಾರ್ಗಗಳು ಮತ್ತು ಕ್ರಮಗಳು, ಯುವಕರ ತರಬೇತಿಗಾಗಿ ವಿವಿಧ ಮಟ್ಟದಲ್ಲಿ ಶರಣ ತತ್ವ ಸಿದ್ಧಾಂತ ಮತ್ತು ಮಹತ್ವದ ಬಗ್ಗೆ ತಿಳಿವಳಿಕೆ ನೀಡಲು ಸರಳ ಪಠ್ಯಕ್ರಮ ಮತ್ತು ಸಣ್ಣ ಸಣ್ಣ ಸಾಮಗ್ರಿ ತಯಾರಿಕೆ, ನೂತನ ಅನುಭವ ಮಂಟಪದ ವಿವರಗಳು, ಕಾರ್ಯ ಯೋಜನೆಗಳು- ಮೊದಲಾದ ಸಂಗತಿಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ. ವಿಷಯ ತಜ್ಞರು ನಿಗದಿತ ವಿಚಾರಗಳ ಕುರಿತು ಮಾತನಾಡಲಿದ್ದಾರೆ.

ಸಿದ್ದಪ್ಪ ಮೂಲಗೆ ಆಕ್ಷೇಪ

ಬಿಜೆಪಿ ಹಮ್ಮಿಕೊಂಡಿರುವ ವೇದಿಕೆಯಲ್ಲಿಯೇ ಅಧಿವೇಶನವೂ ನಡೆಯಲಿದೆ ಎಂದು ಲಿಂಗಾಯತ ಮುಖಂಡ ಸಿದ್ದಪ್ಪ ಮೂಲಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ.

“ಈ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದೇಕೆ? ದಯವಿಟ್ಟು ನನ್ನ ಹೆಸರು ತೆಗೆಯಿರಿ. ಒಪ್ಪಿಗೆ ಇಲ್ಲದೇ ಹೆಸರು ಹಾಕುವುದು ತಪ್ಪು. ಯಾವತ್ತೂ ನೀವು ಬಿಜೆಪಿ ಟೆಂಟಿನಲ್ಲಿ ನಿಮ್ಮ ಅಧಿವೇಶನ ನಡೆಸಲು ಮುಂದಾಗಿರೋ ಆವೊತ್ತೇ ನಾನು ಈ ಅಧಿವೇಶನದಿಂದ ದೂರ ಸರೆದಿದ್ದೇನೆ. ನನ್ನ ಹೆಸರು ತೆಗೆಯಿರಿ ಎಂದು ಈ ಮೊದಲೇ ತಮಗೆ ಹೇಳಿದ್ದೇನೆ” ಎಂದಿದ್ದಾರೆ.

“ಬಿಜೆಪಿ ಟೆಂಟಿನಲ್ಲಿ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಎಂ ಎಂ ಕಲುಬುರ್ಗಿಯವರ ಎದೆಯಿಂದ ಚಿಮ್ಮಿದ ರಕ್ತ ಇನ್ನೂ ಆರಿಲ್ಲ. ಬಿಜೆಪಿ ಹಾಗೂ ನೀವೂ ಸೇರಿಕೊಂಡು ಒಂದೇ ಟೆಂಟ್ ಹೌಸ್ ಅವರ ಜತೆ ಮಾತಾಡಿ, ಇಬ್ಬರೂ ಸಮಾನವಾಗಿ ದುಡ್ಡು ಹಾಕಿ, ಮಾರ್ಚ್ 3, 4, 5 ರಂದು ಟೆಂಟ್ ಹಾಕಿಸುತ್ತಿದ್ದೀರಿ. 3ರಂದು ಅಮಿತ್ ಷಾ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಾರೆ. ನೀವು ಅದೇ ಟೆಂಟಿನಲ್ಲಿ ಮರುದಿನ ಲಿಂಗಾಯತ ಮಹಾ ಅಧಿವೇಶನ ನಡೆಸುತ್ತಿದ್ದೀರಿ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಹಾಗೂ ನೀವು ಒಂದೇ ಟೆಂಟಿನಲ್ಲಿ ಅಧಿವೇಶನ ನಡೆಸುವ ಮೂಲಕ ಸಮಾಜಕ್ಕೆ ಯಾವ ಸಂದೇಶ ನೀಡುತ್ತಿದ್ದೀರಿ” ಎಂದು ಮುಖಂಡರಾದ ಶಿವಾನಂದ ಜಾಮದಾರ್ ಅವರಿಗೆ ಕೇಳಿದ್ದಾರೆ.

ಅಧಿವೇಶನದ ವಿವರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...