Homeಮುಖಪುಟಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಲಂಚ, ಕಮಿಷನ್‌ಗಳು ಮಿತಿ ಮೀರಿವೆ. ಹಾಗಾಗಿ ಲೋಕಾಯುಕ್ತ ದಾಳಿಗೊಳಗಾದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರನ್ನು ಕೂಡಲೇ ಬಂಧಿಸಬೇಕು ಮತ್ತು ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ.

ಸಿಎಂ ಮನೆ ಮುತ್ತಿಗೆ ಹೋರಾಟಕ್ಕೆ ಕರೆ ನೀಡಿರುವ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಲಂಚ ಸ್ವೀಕಾರದ ವಿಚಾರದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು. ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ. ಈಗ ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಇನ್ನೂ ಸಾಕ್ಷಿ ಬೇಕೆ? ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಬೊಮ್ಮಾಯಿ ಯಾವ ಮುಖ ಇಟ್ಟುಕೊಂಡು ಇನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ. ಈಗ ನಿಮ್ಮ ಶಾಸಕರ ವಿಚಾರ ನೋಡಿದ್ದೀರಲ್ಲ, ಇದಕ್ಕೆ ಈಗೇನು ಹೇಳುತ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಅಮಿತ್ ಶಾ ಅವರಿಂದ ನಾವು ಪಾಠ ಕಲಿಯಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತಿತ್ತೇನೋ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್ ಎಸ್ ಎಸ್ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಕೆಜೆ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು. ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ. ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐಗೆ ವಹಿಸಿದ್ದೆ. ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ. ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ʼಬಿʼ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ ಎಂದರು.

“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್ ಹಗರಣದ ಬಗ್ಗೆ ಮಾತನಾಡಿ ಸರ್ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಶಾಸಕರಾದ ರಾಮಲಿಂಗಾರೆಡ್ಡಿ ಮಾತನಾಡಿದರು. ನಂತರ ಸಿಎಂ ಮನೆ ಮುತ್ತಿಗೆಗೆ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಮುಂದಾದಾದ ಪೊಲೀಸರು ಅವರನ್ನು ತಡೆದಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...