Homeಮುಖಪುಟಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಲೋಕಾಯುಕ್ತ ಬೇಕಿಲ್ಲ: ಎಸ್.ಆರ್ ಹಿರೇಮಠ

ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ - ಸಂತೋಷ್ ಹೆಗ್ಡೆ

- Advertisement -
- Advertisement -

ಲೋಕಾಯುಕ್ತ ಪುನರ್‌ಸ್ಥಾಪಿಸಿದ್ದು ಬಿಜೆಪಿಯಲ್ಲ, ಮೂರು ಪಕ್ಷಗಳಿಗೆ ಆ ಸ್ವತಂತ್ರ ಸಂಸ್ಥೆ ಲೋಕಾಯುಕ್ತ ಬೇಕಿಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಆತನ ಪುತ್ರ ಪ್ರಶಾಂತ್ ಮಾಡಾಳ್ ರವರ ಭಾರೀ ಭ್ರಷ್ಟಾಚಾರವನ್ನು ಬಯಲಿಗೆಳೆದ ನಂತರ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರು ಲೋಕಾಯುಕ್ತ ಪುನರ್‌ ಸ್ಥಾಪಿಸಿದ್ದು ನಾವು ಎಂದು ಹೇಳಿಕೆ ನೀಡುತ್ತಿದ್ದಾರೆ. ಆ ಮೂಲಕ ತಮ್ಮ ಪಕ್ಷದ ಶಾಸಕರ ಕಮಿಷನ್ ದಂಧೆಯನ್ನು ಮರೆಮಾಚುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಎಸಿಬಿ ರದ್ದುಗೊಳಿಸಿ, ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಹೇಗೆ ಎಂಬ ಚರ್ಚೆಗಳು ನಡೆಯುತ್ತಿವೆ.

2016 ರಲ್ಲಿ ಲೋಕಾಯುಕ್ತ ಅಧಿಕಾರವನ್ನು ಮೊಟಕುಗೊಳಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಎಸಿಬಿ ರಚನೆ ಮಾಡಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿದ್ದವು. ಮುಖ್ಯವಾಗಿ  ಸಾಮಾಜಿಕ ಹೋರಾಟಗಾರ ಎಸ್‌.ಆರ್‌.ಹಿರೇಮಠ ಅವರ ಸಮಾಜ ಪರಿವರ್ತನಾ ಸಮುದಾಯ, ವಕೀಲರ ಸಂಘ ಮತ್ತು ವಕೀಲ ಚಿದಾನಂದ ಅರಸ್‌ರವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆದಿತ್ತು.

ಕರ್ನಾಟಕ ಹೈಕೋರ್ಟ್‌ನ ಜಸ್ಟೀಸ್‌ ಬಿ ವೀರಪ್ಪ ಹಾಗೂ ಜಸ್ಟೀಸ್‌‌ ಕೆ.ಎಸ್. ಹೇಮಲೇಖ ಅವರಿದ್ದ ಪೀಠವು ಸುಧೀರ್ಘ ವಿಚಾರಣೆಯ ನಂತರ ಆಗಸ್ಟ್ 12, 2022 ರಂದು ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಪಡಿಸಿಬೇಕು, ಲೋಕಾಯುಕ್ತವನ್ನು ಬಲಪಡಸಿಬೇಕು ಎಂದು ತೀರ್ಪು ನೀಡಿತ್ತು. ಅಲ್ಲದೆ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲು ಕೋರ್ಟ್ ಆದೇಶಿಸಿತ್ತು.

ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದೆ: ಎಸ್.ಆರ್ ಹಿರೇಮಠ

ಎಸಿಬಿ ರದ್ದಾಗಬೇಕು ಮತ್ತು ಲೋಕಾಯುಕ್ತ ಮರು ಸ್ಥಾಪಿಸಬೇಕು ಎಂದು ಪಿಐಎಲ್ ಹೂಡಿ ಹೋರಾಡಿದ್ದ ಸಮಾಜ ಪರಿವರ್ತನಾ ಸಮುದಾಯದ ಮುಖಂಡರಾದ ಎಸ್‌.ಆರ್ ಹೀರೇಮಠರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ನಾವು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು ನಮ್ಮ ಆತ್ಮತೃಪ್ತಿಗೆ ಹೊರತು ಕ್ಲೈಮ್ ಮಾಡಿಕೊಳ್ಳುವುದಕ್ಕಲ್ಲ. ನಾವು 12ನೇ ಶತಮಾನದ ಶರಣದ ಹೋರಾಟದಿಂದ ಪ್ರೇರಿತರಾಗಿದ್ದೇವೆ. ಲೋಕಾಯುಕ್ತ ವಿಚಾರಕ್ಕೆ ಹೇಳುವುದಾದರೆ ‘ಯಶಸ್ಸಿಗೆ ಹಲವಾರು ತಂದೆಗಳು, ಸೋಲು ತಬ್ಬಲಿ’ ಎಂಬ ಗಾದೆ ಮಾತಿನಂತೆ ಬಿಜೆಪಿ ಈಗ ತಾವು ಮಾಡಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ. ಆದರೆ 2018ರ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತ ಪುನರ್‌ ಸ್ಥಾಪಿಸುತ್ತೇವೆಂದು ತಮ್ಮ ಪ್ರಣಾಳಿಕೆಯಲ್ಲಿ ಅವರು ಹೇಳಿದ್ದರು. ಆ ಕುರಿತು ಹಲವರು ಅವರಿಗೆ ಪದೇ ಪದೇ ನೆನಪು ಮಾಡಿದರೂ ಸಹ ಲೋಕಾಯುಕ್ತ ಮರುಸ್ಥಾಪಿಸಿರಲಿಲ್ಲ. ಕೊನೆಗೆ ಹೈಕೋರ್ಟ್ ಆದೇಶ ನೀಡಿದ ನಂತರವಷ್ಟೇ ಲೋಕಾಯುಕ್ತ ಮರುಸ್ಥಾಪನೆಯಾಗಿದ್ದು ಎಲ್ಲರಿಗೂ ತಿಳಿದಿದೆ” ಎಂದರು.

“ಅಧಿಕಾರದಲ್ಲಿರುವ ಯಾರಿಗೂ, ಯಾವುದೇ ಪಕ್ಷಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಸಿದ್ದರಾಮಯ್ಯನವರು ಹಿಂದೆ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿ ಸಂತೋಷ್ ಹೆಗ್ಡೆಯವರು ನೀಡಿದ್ದ ವರದಿಯನ್ನು ಜಾರಿ ಮಾಡಿ ಎಂದು ಆಗ್ರಹಿಸಿದ್ದರು. ಬಿಜೆಪಿಯವರನ್ನು ಟೀಕಿಸಿ ಮಾತನಾಡಿದ್ದರು. ಆದರೆ ಅವರು ಅಧಿಕಾರಕ್ಕೆ ಬಂದ ನಂತರ ಆ ವರದಿಯನ್ನು ಜಾರಿ ಮಾಡಲಿಲ್ಲ ಮಾತ್ರವಲ್ಲ, ಲೋಕಾಯುಕ್ತದ ರೆಕ್ಕೆಗಳನ್ನೆ ಕಿತ್ತು ಹಾಕಿದರು” ಎಂದು ಹಿರೇಮಠರವರು ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟು ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಸಿದ್ದರಾಮಯ್ಯನವರು ಹೇಳುತ್ತಾರೆ. ಆದರೆ ಲೋಕಾಯುಕ್ತ ಸರಿಯಾದ ದಾರಿಯಲ್ಲಿ ನಡೆಯುತ್ತಿರುವಾಗ ಅದನ್ನು ಬಲಹೀನಗೊಳಿಸಿದ್ದು ಏಕೆ? ಅವು ಸ್ಥಾಪನೆಯಾದ ಹಿನ್ನೆಲೆ ಅವರಿಗೆ ಗೊತ್ತಿಲ್ಲವೇ? ಎಷ್ಟು ನಾಚಿಕೆಗೇಡುತನದಿಂದ ತಾವು ಮಾಡಿದ ಆ ಕೆಲಸವನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.

ಇನ್ನು ಜೆಡಿಎಸ್‌ನ ಎಚ್.ಡಿ ಕುಮಾರಸ್ವಾಮಿಯವರು ನಿರ್ಗತಿಕ ಎಂದು ಹೇಳಿ ಗೋಮಾಳ ಸೇರಿ 20 ಎಕರೆ ಭೂಮಿ ಕಬಳಿಸಿದ್ದರು. ಅವರ ತಂದೆ ಎಚ್.ಡಿ ದೇವೇಗೌಡರು ತಮ್ಮ ಹೆಂಡತಿಯ ತಂಗಿಯ ಹೆಸರಿನಲ್ಲಿ 20 ಎಕರೆ ಜಮೀನು ಮಾಡಿದ್ದರು. ಈ ಕುರಿತು ನಾವು ದೂರು ನೀಡಿದ್ದೆವು. 2014ರಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಅವೆಲ್ಲವೂ ಹೊರ ಬರುತ್ತವೆ ಎಂದು ಲೋಕಾಯುಕ್ತ ಮುಚ್ಚಿದ್ದನ್ನು ಪ್ರಶ್ನಿಸದೇ ಸುಮ್ಮನಿದ್ದರು. ಒಟ್ಟಿನಲ್ಲಿ ಮೂರು ಪಕ್ಷಗಳ ಭ್ರಷ್ಟರು ಲೋಕಾಯುಕ್ತವನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡುವುದಿಲ್ಲ. ಇದನ್ನು ಈ ಪೀಳಿಗೆಯ ಯುವಜನರು ಪ್ರಶ್ನಿಸಬೇಕು ಎಂದರು.

ಇದೇ ರೀತಿಯ ಮಾತುಗಳನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಸಹ ಹೇಳಿದ್ಧಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿರುವ ಅವರು, “ಬಿಜೆಪಿಯವರು ಎಸಿಬಿಯನ್ನು ತೆಗೆದಿಲ್ಲ, ಅದನ್ನು ತೆಗೆದಿದ್ದು ಹೈಕೋರ್ಟ್. ಹಾಗಾಗಿ ಅದರ ಕ್ರೆಡಿಟ್ ಬಿಜೆಪಿಗೆ ಸಿಗುವುದಿಲ್ಲ ಎಂದಿದ್ದಾರೆ. ಬಿಜೆಪಿಯವರು ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಎಸಿಬಿ ತೆಗೆದು ಲೋಕಾಯುಕ್ತ ತರುತ್ತೇವೆ ಎಂದು ಹೇಳಿದ್ದರು. ಆದರೆ ಅಧಿಕಾರಕ್ಕೆ ಬಂದು 24 ತಿಂಗಳು ಆದರೂ ಆ ಕೆಲಸ ಮಾಡಲಿಲ್ಲ. ಕೊನೆಗೆ ಹೈಕೋರ್ಟ್ ಆ ಕೆಲಸ ಮಾಡಿತು” ಎಂದಿದ್ದಾರೆ.

“ಯಾವ ಸರ್ಕಾರಗಳಿಗೂ ಲೋಕಾಯುಕ್ತ ಬೇಕಾಗಿಲ್ಲ. ಏಕೆಂದರೆ ಅದರ ಕೆಲಸವೇ ಅಧಿಕಾರದಲ್ಲಿರುವವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವುದು. ಆದ್ದರಿಂದ ಯಾರಿಗೂ ತಮ್ಮ ಮೇಲೆಯೇ ದಾಳಿ ಮಾಡುವ ಸ್ವತಂತ್ರ ಮತ್ತು ಬಲಿಷ್ಟ ಸಂಸ್ಥೆ ಬೇಕಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್‌ರವರು ಈ ವಿಚಾರಕ್ಕೆ ಪ್ರತಿಕ್ರಿಯಿಸಿ “ಸುಳ್ಳು ಹೇಳುವದರಲ್ಲಿ ನಿಸ್ಸೀಮರು ಯಾರಾದರು ಇದ್ದರೆ ಅದು ಭಾರತೀಯ ಜನತ ಪಕ್ಷ. #BhrashtaBJP” ಎಂದು ಸಂತೋಷ್ ಹೆಗ್ಡೆಯವರ ಮಾತುಗಳನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಭ್ರಷ್ಟಾಚಾರ ಬಯಲಿಗೆ: 40% ಕಮಿಷನ್ ಆರೋಪಕ್ಕೆ ಇಷ್ಟು ಸಾಕ್ಷಿ ಸಾಕಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...