Homeಮುಖಪುಟಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

- Advertisement -
- Advertisement -

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಬಂಧನದ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಸಹಿ ಮಾಡಿದ ಪತ್ರದಿಂದ ಕಾಂಗ್ರೆಸ್ ದೂರ ಉಳಿದಿದೆ.

ಈ ಪತ್ರಕ್ಕೆ ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಹಿ ಹಾಕಿದ್ದಾರೆ.

“ಭಾರತ ಇನ್ನೂ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನೀವು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂದು ಸೂಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದಿಂದ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಇಬ್ಬರನ್ನೂ ಎನ್‌ಫೋರ್ಸ್‌ಮೆಂಟ್ ಡೈರೆಕ್ಟರೇಟ್ (ಇಡಿ) ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

”ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ” ಎಂದು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

”ಅದಾನಿ ಗ್ರೂಪ್‌ನ “ಹಣಕಾಸಿನ ಅಕ್ರಮಗಳ” ಬಗ್ಗೆ ಏಕೆ ತನಿಖೆ ಮಾಡಿಲ್ಲ, ಸಂಘಟಿತ ಸಂಸ್ಥೆಯನ್ನು ಹೆಸರಿಸದೆ ಪ್ರಶ್ನಿಸಿದೆ.

ಈ ಪತ್ರದಲ್ಲಿ ”ಅಂತರರಾಷ್ಟ್ರೀಯ ವಿಧಿವಿಜ್ಞಾನ ಹಣಕಾಸು ಸಂಶೋಧನಾ ವರದಿಯ ಪ್ರಕಟಣೆಯ ನಂತರ, ಎಸ್‌ಬಿಐ ಮತ್ತು ಎಲ್‌ಐಸಿ ನಿರ್ದಿಷ್ಟ ಸಂಸ್ಥೆಗೆ ಒಡ್ಡಿಕೊಂಡ ಕಾರಣ ತಮ್ಮ ಷೇರುಗಳ ಮಾರುಕಟ್ಟೆ ಬಂಡವಾಳದಲ್ಲಿ ₹78,000 ಕೋಟಿಗಳನ್ನು ಕಳೆದುಕೊಂಡಿವೆ ಎಂದು ವರದಿಯಾಗಿದೆ. ಸಾರ್ವಜನಿಕರ ಹಣವನ್ನು ಪಣಕ್ಕಿಟ್ಟಿದ್ದರೂ ಸಂಸ್ಥೆಯ ಹಣಕಾಸು ಅವ್ಯವಹಾರಗಳ ತನಿಖೆಗೆ ಕೇಂದ್ರ ಏಜೆನ್ಸಿಗಳನ್ನು ಏಕೆ ಸೇವೆಗೆ ಒತ್ತಾಯಿಸಲಿಲ್ಲ? ಈ ಏಜೆನ್ಸಿಗಳು ತಮ್ಮ ಆದ್ಯತೆಯನ್ನು ಈ ಪ್ರಕರಣಕ್ಕೆ ನೀಡಬೇಕಿತ್ತು ಎಂದು ಪತ್ರವನ್ನು ಸೇರಿಸಲಾಗಿದೆ.

”ದೆಹಲಿಯ ಶಾಲಾ ಶಿಕ್ಷಣವನ್ನು ಪರಿವರ್ತಿಸಲು ಮನೀಶ್ ಸಿಸೋಡಿಯಾ ಜಾಗತಿಕವಾಗಿ ಗುರುತಿಸಿಕೊಂಡಿದ್ದಾರೆ. ಅವರ ಬಂಧನದ ಬಗ್ಗೆ ವಿಶ್ವದಾದ್ಯಂತ ಮಾತನಾಡಲಾಗುತ್ತಿದೆ ಮತ್ತು ಈ ವಿಚಾರದಿಂದ ವಿಶ್ವವು  ಅನುಮಾನಿಸುತ್ತಿರುವುದನ್ನು ಮತ್ತಷ್ಟು ದೃಢಪಡಿಸುತ್ತದೆ. ಭಾರತದ ಪ್ರಜಾಪ್ರಭುತ್ವದ ಮೌಲ್ಯಗಳು ನಿರಂಕುಶ ಬಿಜೆಪಿ ಆಡಳಿತದಿಂದ ಅಪಾಯದಲ್ಲಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

”2014 ರಿಂದ ನಿಮ್ಮ ಆಡಳಿತದ ಅಡಿಯಲ್ಲಿ ತನಿಖಾ ಸಂಸ್ಥೆಗಳು ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಮಟ್ಟದಲ್ಲಿ ಪ್ರತಿಪಕ್ಷದವರೇ ಸೇರಿದ್ದಾರೆ. ಕುತೂಹಲಕಾರಿಯಾಗಿ ವಿಚಾರ ಎಂದರೆ, ವಿರೋಧ ಪಕ್ಷದ ರಾಜಕಾರಣಿಗಳು ಬಿಜೆಪಿಗೆ ಸೇರಿದರೆ ಅವರ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖಾ ಸಂಸ್ಥೆಗಳು ಮೌನವಾಗುತ್ತವೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದ ಕುರಿತು 2014 ಮತ್ತು 2015 ರಲ್ಲಿ ಸಿಬಿಐ ಮತ್ತು ಇಡಿ ವಿಚಾರಣೆಗೆ ಒಳಗಾಗಿದ್ದ ಉದಾಹರಣೆಯನ್ನು ವಿರೋಧ ಪಕ್ಷದ ನಾಯಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಹಿಮಂತ ಬಿಸ್ವಾ ಶರ್ಮಾ ಬಿಜೆಪಿಗೆ ಸೇರಿದ ನಂತರ ಪ್ರಕರಣವು ಪ್ರಗತಿಯಾಗಲಿಲ್ಲ. ಹಾಗೆಯೇ, ಟಿಎಂಸಿ (ತೃಣಮೂಲ ಕಾಂಗ್ರೆಸ್) ಮಾಜಿ ನಾಯಕರಾದ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್ ಅವರು ನಾರದ ಕುಟುಕು ಕಾರ್ಯಾಚರಣೆ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ವಿಚಾರಣೆಯಲ್ಲಿದ್ದರು. ಆದರೆ ರಾಜ್ಯದಲ್ಲಿ (ಪಶ್ಚಿಮ ಬಂಗಾಳ) ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಅವರು ಬಿಜೆಪಿಗೆ ಸೇರಿದ ನಂತರ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡಲಾಯಿತು” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...