Homeಕರ್ನಾಟಕಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

- Advertisement -
- Advertisement -

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಸುಮಲತಾ ಅವರು ಕಾಂಗ್ರೆಸ್‌ ಸೇರುತ್ತಾರೋ, ಬಿಜೆಪಿ ಸೇರುತ್ತಾರೋ ಎಂಬ ಚರ್ಚೆಗಳು ಶುರುವಾಗಿದ್ದವು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರೇ ಹೆಚ್ಚಿನ ಮಟ್ಟದಲ್ಲಿ ಸುಮಲತಾ ಅವರನ್ನು ಬೆಂಬಲಿಸಿದ್ದರು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. ಅಲ್ಲದೆ ಮಂಡ್ಯದಲ್ಲಿ ಬಿಜೆಪಿಗೆ ತಳಮಟ್ಟದ ನೆಲೆ ಇಲ್ಲ ಎಂಬ ವಾಸ್ತವ ಸಂಗತಿಗಳು ಮುಂದಿರುವಾಗ ಸಮಲತಾ ಅವರು ಕಮಲವನ್ನು ಹಿಡಿದುಕೊಂಡಿದ್ದಾರೆ.

ಈಗ ಎದ್ದಿರುವ ಪ್ರಶ್ನೆ- ಸುಮಲತಾ ಅವರ ರಾಜಕೀಯ ಭವಿಷ್ಯ ಮುಂದೇನಾಗಲಿದೆ? ಮಂಡ್ಯದ ಜನತೆ ಈ ನಿರ್ಧಾರವನ್ನು ಹೇಗೆ ಸ್ವೀಕರಿಸಲಿದ್ದಾರೆ? ಬಿಜೆಪಿಗೆ ಇದರಿಂದ ಏನಾದರೂ ಉಪಯೋಗವಾಗಲಿದೆಯೇ? – ಇವೆಲ್ಲವಕ್ಕೂ ನಕರಾತ್ಮಕ ಉತ್ತರಗಳನ್ನೇ ಮಂಡ್ಯ ರಾಜಕಾರಣವನ್ನು ಬಲ್ಲವರು ಹೇಳುತ್ತಿದ್ದಾರೆ.

ವಕೀಲರಾದ ಬಿ.ಟಿ.ವಿಶ್ವನಾಥ್ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ, “ಹಳೆ ಮೈಸೂರು ಭಾಗದಲ್ಲಿ ತಮ್ಮ ನೆಲೆಯನ್ನು ಕಂಡುಕೊಳ್ಳುವುದಕ್ಕಾಗಿ ಬಿಜೆಪಿಯವರು ಸುಮಲತಾ ಅವರನ್ನು ಬೆಂಬಲಿಸಿದ್ದರು. ಪರೋಕ್ಷವಾಗಿ ಸುಮಲತಾ ಅವರು ಬಿಜೆಪಿಯ ಮುಖವೆಂಬಂತೆಯೇ ಇದ್ದರು. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಆಡಳಿತವಿರೋಧಿ ಅಲೆ ಇತ್ತು. ದೇವೇಗೌಡರ ಕುಟುಂಬದ ವಿರುದ್ಧವೂ ಅಸಮಾಧಾನ ಮನೆಮಾಡಿತ್ತು. ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದೆ ಇದ್ದಿದ್ದರಿಂದ ಸುಮಲತಾ ಅವರಿಗೆ ಎಲ್ಲ ಪಕ್ಷದ ಹಿನ್ನೆಲೆಯವರೂ ಕಳೆದ ಚುನಾವಣೆಯಲ್ಲಿ ಬೆಂಬಲ ನೀಡಿದರು. ಈಗ ಸುಮಲತಾ ಅವರು ನೇರವಾಗಿಯೇ ತಮ್ಮನ್ನು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ” ಎಂದರು.

“ಬಿಜೆಪಿ ತನ್ನೆಲ್ಲ ಶಕ್ತಿ ಸಾಮರ್ಥ್ಯವನ್ನು ಮಂಡ್ಯ ಜಿಲ್ಲೆಯಲ್ಲಿ ಪರೀಕ್ಷೆಗೆ ಒಡ್ಡಿದೆ. ಆದರೆ ಕಾರ್ಯಕರ್ತರ ಪಡೆ ತಳಮಟ್ಟದಲ್ಲಿ ಬಿಜೆಪಿಗೆ ಇಲ್ಲಿ ಇಲ್ಲ. ಮೇಲುನೋಟಕ್ಕೆ ಬಿಜೆಪಿಯ ಆರ್ಭಟ ಎದ್ದುಕಾಣುತ್ತಿದೆ. ಆದರೆ ರೈತ ಸಮುದಾಯಕ್ಕೆ ಬಿಜೆಪಿ ಆಶಾದಾಯಕವಾಗಿ ಕಾಣುತ್ತಿಲ್ಲ. ಹೀಗಾಗಿ ಸುಮಲತಾ ಸೇರ್ಪಡೆಯಿಂದ ದೊಡ್ಡಮಟ್ಟದ ಲಾಭ ಬಿಜೆಪಿಗೆ ಆಗುತ್ತದೆ ಎಂದು ಕಾಣುತ್ತಿಲ್ಲ” ಎಂದು ಅಭಿಪ್ರಾಯಪಟ್ಟರು.

“ಕಳೆದ ಚುನಾವಣೆ ಸಂದರ್ಭದಲ್ಲಿ ‘ಸ್ವಾಭಿಮಾನಿ ತಂಡ’ ಎಂಬ ಹೆಸರಲ್ಲಿ ಕೆಲವು ಮುಖಂಡರು ಗುರುತಿಸಿಕೊಂಡಿದ್ದರು. ಅವರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅವಕಾಶಗಳು ಇರಲಿಲ್ಲ. ಸುಮಲತಾ ಅವರು ಯಾವುದೇ ಪಕ್ಷದ ಬ್ಯಾನರ್‌ ಇಲ್ಲದೆ ಚುನಾವಣೆಗೆ ನಿಂತಿದ್ದರಿಂದ ಈ ಸ್ವಾಭಿಮಾನಿ ಮುಖಂಡರು ಸುಮಲತಾ ಪರ ನಿಂತರು. ಈಗ ಈ ಸ್ವಾಭಿಮಾನಿಗಳು ಬಿಜೆಪಿಯ ಜೊತೆ ಹೋಗಬೇಕಾಗುತ್ತದೆ. ಈ ನಿರ್ಧಾರದಿಂದ ಹಿಂದೆ ಸರಿಯುವವರ ಸಂಖ್ಯೆಯೇ ದೊಡ್ಡದಿದೆ. ಸುಮಲತಾ ಅವರೇ ಸ್ವಯಂಕೃತವಾಗಿ ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ” ಎಂದು ತಿಳಿಸಿದರು.

“ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿಯನ್ನು ಸುಮಲತಾ ಅವರು ಮಾಡಿದಂತೆ ಕಾಣುತ್ತಿಲ್ಲ. ಹೆದ್ದಾರಿ ನಿರ್ಮಾಣವಾದ ಮೇಲಂತೂ ಮಂಡ್ಯ ಜಿಲ್ಲೆಯಲ್ಲಿ ವ್ಯಾಪಾರ ವ್ಯವಹಾರಗಳು ಸ್ಥಗಿತವಾಗುತ್ತಿವೆ. ಹೆದ್ದಾರಿ ಬದಿಯಲ್ಲಿನ ಹೋಟೆಲ್‌ಗಳು ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಿದೆ. ಮಂಡ್ಯದ ಯುವಕರು ಉದ್ಯೋಗ ಅರಸಿ ಬೆಂಗಳೂರಿಗೆ ಗುಳೇ ಹೋಗುವುದು ನಿಂತಿಲ್ಲ” ಎಂದು ವಿಷಾದಿಸಿದರು.

ಸುಮಲತಾ ಅವರ ನಿರ್ಧಾರವನ್ನು ಖಂಡಿಸಿರುವ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು, “ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ ಸುಮಲತಾ ಅವರ ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಮಂಡ್ಯ ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ” ಎಂದಿದ್ದಾರೆ.

“ಸುಮಲತಾ ಅವರು ಪಕ್ಷೇತರ ಎಂಬ ಹೆಸರಿನ ನಾಟಕ ಮಾಡಿ ಜಿಲ್ಲೆಯ ಜನರ, ಪ್ರಗತಿಪರರ, ಪ್ರಗತಿಪರ ಸಂಘಟನೆಗಳ ಹಾಗೂ ಬದುಕಿನುದ್ದಕ್ಕೂ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡುತ್ತಿರುವ ವ್ಯಕ್ತಿಗಳ ಮತ ಪಡೆದು ಈಗ ಅಧಿಕಾರ ಮತ್ತು ಅಂತಸ್ತಿಗಾಗಿ ಬಿಜೆಪಿ ಎಂಬ ಫ್ಯಾಸಿಸ್ಟ್ ಪಕ್ಷವನ್ನು ಬೆಂಬಲಿಸುವುದು ಅವರನ್ನು ನಂಬಿ ಬೆಂಬಲಿಸಿದ ಎಲ್ಲರ ಬೆನ್ನಿಗೂ ಚೂರಿ ಹಾಕುವ ಕೆಲಸವಾಗಿದೆ” ಎಂದು ಟೀಕಿಸಿದ್ದಾರೆ.

“ಅಂಬರೀಶ್ ಅವರ ಹೆಸರಿನಲ್ಲಿ ಮತಯಾಚಿಸಿದ ಸುಮಲತಾ ಅಂಬರೀಶ್ ಅವರು ಎಲ್ಲಾ ಜಾತಿ ಧರ್ಮಗಳನ್ನು ಮೀರಿದ ಜಾತ್ಯತೀತ ಕಲಾವಿದರಾಗಿದ್ದರು ಮತ್ತು ಅವರು ಬಿಜೆಪಿಯ ಆಮಿಷಗಳಿಗೆ ಎಂದೂ ಬಲಿಯಾಗಿರಲಿಲ್ಲ ಎಂಬುದು ಸುಮಲತಾ ಅವರಿಗೆ ನೆನಪಾಗಲಿಲ್ಲವೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವವರಾರು? ಇಲ್ಲಿದೆ ಪೂರ್ಣ ಸಮೀಕ್ಷೆ

“ಬಿಜೆಪಿ ಒಂದು ಮಹಿಳಾ ವಿರೋಧಿ, ಮನುವಾದಿ ರಾಜಕೀಯ ಪಕ್ಷ. ಜಿಲ್ಲೆಯ ಜನರಿಗೆ ಬದುಕು ಕಲ್ಪಿಸಿದ ಟಿಪ್ಪು ಅವರಿಗೆ ಪ್ರತಿಕ್ಷಣವೂ ಅವಮಾನ ಮಾಡುತ್ತಾ ಜಿಲ್ಲೆಯ ಒಕ್ಕಲಿಗರನ್ನು ಬ್ರಿಟಿಷರ ಏಜೆಂಟರು ಎಂದು ಬಿಂಬಿಸಿ ಅವಮಾನ ಮಾಡುತ್ತಿರುವ ಪಕ್ಷ. ಇಂತಹ ಪಕ್ಷಕ್ಕೆ ಕೇವಲ ಅಧಿಕಾರ ಮತ್ತು ಅಂತಸ್ತಿನ ಕಾರಣಕ್ಕೆ ಬೆಂಬಲಿಸುತ್ತಿರುವ ನಿಮ್ಮ ವಿವೇಚನೆಗೆ ಗೆದ್ದಲು ಹಿಡಿದಿದೆಯೆ?” ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿದ ಸ್ಥಳೀಯ ಪತ್ರರೊಬ್ಬರು, “ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಹೆಚ್ಚಿನ ವೋಟು ಹಾಕಿದರು. ರೈತಸಂಘದವರು ಬೆಂಬಲಿಸಿದ್ದರು. ಈಗ ಬಿಜೆಪಿಗೆ ಹೋಗಿದ್ದಾರೆ. ಬಿಜೆಪಿಗೆ ಇಲ್ಲಿ ನೆಲೆ ಇಲ್ಲ. ಇದನ್ನು ಜನರು ಹೇಗೆ ನೋಡುತ್ತಾರೆಂದು ಕಾದು ನೋಡಬೇಕು” ಎಂದರು.

“ಕಳೆದ ಚುನಾವಣೆಯಲ್ಲಿ ಅನುಕಂಪದ ಅಲೆ ಇತ್ತು. ಜೆಡಿಎಸ್ ವಿರೋಧಿ ನಿಲುವು ಹೆಚ್ಚಾಗಿತ್ತು. ಕಾಂಗ್ರೆಸ್, ಬಿಜೆಪಿ, ರೈತಸಂಘದವರ ಬೆಂಬಲದಿಂದ ಸುಮಲತಾ ಗೆದ್ದರೇ ಹೊರತು ವೈಯಕ್ತಿಕ ವರ್ಚಸ್ಸಿನಿಂದಲ್ಲ. ಹಾಗೆ ನೋಡಿದರೆ ಸುಮಲತಾ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆಂದು ನಿರೀಕ್ಷಿಸಲಾಗಿತ್ತು” ಎಂದು ಹೇಳಿದರು.

“ಅಂಬರೀಶ್ ಅವರನ್ನು ಸಚಿವ ಸ್ಥಾನದಿಂದ ತೆಗೆದದ್ದು ನೋವು ತಂದಿದೆ ಎಂದು ಸುಮಲತಾ ಸಮಜಾಯಿಸಿ ನೀಡುತ್ತಿದ್ದಾರೆ. ಇದನ್ನು ಕಳೆದ ಚುನಾವಣೆಯಲ್ಲಿಯೇ ಹೇಳಿದ್ದರೆ ಕಾಂಗ್ರೆಸ್‌ನ ಮತಗಳು ಸುಮಲತಾ ಅವರಿಗೆ ಬೀಳುತ್ತಿರಲಿಲ್ಲ. ಈಗ ಈ ಮಾತುಗಳನ್ನು ಆಡಿದರೆ ಅವರ ರಾಜಕೀಯದ ಮೇಲೆ ವ್ಯತಿರಿಕ್ತ ಪರಿಣಾಮವೇ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...