Homeಕರ್ನಾಟಕಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಮನವಿ ನೀಡಲು ಮುಂದಾದ ಜನಶಕ್ತಿ ಮುಖಂಡರ ಬಂಧನ

- Advertisement -
- Advertisement -

ಇಂದು ಮಂಡ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲೆಯನ್ನು ಭಾದಿಸುತ್ತಿರುವ ಸಮಸ್ಯೆಗಳ ಬಗೆಹರಿಸುವಂತೆ ಮನವಿ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯನ್ನು ಕಾಡುತ್ತಿರುವ ಬೆಲೆಯೇರಿಕೆ, ಮಹಿಳೆಯರ ಮೇಲಿನ ಅತ್ಯಾಚಾರಗಳು, ರೈತರ ಸಮಸ್ಯೆ ಮತ್ತು ಕಾರ್ಖಾನೆಗಳಲ್ಲಿ ದುಡಿವವರಿಗೆ ಕೆಲಸದ ಅವಧಿ ಹೆಚ್ಚಳದಂತಹ ಸಮಸ್ಯೆಗಳನ್ನು ಈ ಕೂಡಲೇ ನಿಯಂತ್ರಣಕ್ಕೆತರುವಂತೆ ಆಗ್ರಹ ಪತ್ರ ನೀಡಲು ಮುಂದಾದ ಕರ್ನಾಟಕ ಜನಶಕ್ತಿ ಸಂಘಟನೆಯ ಸಿದ್ದರಾಜು, ಪೂರ್ಣಿಮ, ಶಿಲ್ಪ ಮತ್ತು ನಗರಗೆರೆ ಜಗದೀಶ್‌ರವರನ್ನು ಬಂಧಿಸಿಡಲಾಗಿದೆ.

ದಿನಬಳಕೆ ವಸ್ತುಗಳ ಬೆಲೆಗಳು ಹಿಂದೆಂದೂ ಇಲ್ಲದ ಪ್ರಮಾಣದಲ್ಲಿ ದುಬಾರಿಯಾಗಿದೆ. ಜೀವನ ವೆಚ್ಚವನ್ನು ನಿರ್ವಹಿಸುವ ಹೊಣೆ ಹೊತ್ತ ಹೆಣ್ಣುಜೀವಗಳು ಇಂತಹ ಬೆಲೆಯೇರಿಕೆಯನ್ನು ಸಹಿಸಲಾಗದೆ ನಲುಗುತ್ತಿವೆ. ಬಡವರು, ದಲಿತ-ದಮನಿತರು ಮತ್ತು ಮಹಿಳೆಯರ ಬದುಕನ್ನು ನರಕವಾಗಿಸಿರುವ ಬೆಲೆಯೇರಿಕೆಯನ್ನು ಕೂಡಲೇ ನಿಯಂತ್ರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಅಲ್ಲದೆ ಎಕ್ಸ್‌ಪ್ರೆಸ್‌ನಿಂದಾಗಿ ಉದ್ಯೋಗ ಕಳೆದುಕೊಳ್ಳುವ ಜನರಿಗೆ ಪುನರ್‌ವಸತಿ ಕಲ್ಪಿಸಬೇಕು ಎನ್ನಲಾಗಿದೆ.

ಮಹಿಳೆಯರ ಮೇಲಿನ ಅತ್ಯಾಚಾರಗಳುಒಂದೆಡೆ ವಿಪರೀತ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅದರ ಬರ್ಬರತೆಯೂ ಹೆಚ್ಚುತ್ತಿದೆ. ಪುಟ್ಟ ಮಕ್ಕಳೂ ಈ ದೌರ್ಜನ್ಯದಿಂದ ಕೊಲೆಯಾಗುತ್ತಿರುವ ಕ್ರೂರವಾದ ಸಂದರ್ಭದಲ್ಲಿ, ಅತ್ಯಾಚಾರಿಗಳನ್ನು ನೀವು ಪ್ರತಿನಿಧಿಸುವ ಪಕ್ಷವು ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ಶಿಕ್ಷೆಯಿಂದ ವಿನಾಯಿತಿ ನೀಡಿ ಬಿಡುಗಡೆ ಮಾಡುತ್ತಿರುವುದು, ಅತ್ಯಾಚಾರಿಗಳನ್ನುರಕ್ಷಣೆ ಮಾಡುತ್ತಿರುವುದು, ಜೊತೆಗೆ ಮಹಿಳೆಯರ ಮೇಲಿನ ಅತ್ಯಾಚಾರಗಳಿಗೆ ಕರೆಕೊಡುವ ವ್ಯಕ್ತಿಗಳೀಗೂ ಪಕ್ಷದ ಮುಖ್ಯ ಹುದ್ದೆಗಳಲ್ಲಿ ಮುಂದುವರೆಯುವ ಅವಕಾಶ ನೀಡುತ್ತಿರುವುದು ತೀವ್ರವಾಗಿ ಖಂಡನಾರ್ಹ. ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ದುಡಿಯುವ ಮಹಿಳೆಯರ ಮೇಲಿನ ಅತ್ಯಾಚಾರಗಳ ವಿಚಾರದಲ್ಲಿ ಸರ್ಕಾರದ ಸಮ್ಮತಿಯು ನಿಚ್ಚಳವಾಗಿ ಕಾಣುತ್ತಿದೆ. ಭಾರತದ ಮಹಿಳೆಯರೂ ಕೂಡಾ ಈ ದೇಶದ ಪ್ರಜೆಗಳೇ. ಅವರಿಗೆ ಸಂವಿಧಾನ ಬದ್ಧವಾದ ರಕ್ಷಣೆಯ ಹಕ್ಕನ್ನು ನಾವು ಆಗ್ರಹಿಸುತ್ತೇವೆ ಎಂದ ಹಕ್ಕೊತ್ತಾಯ ಪತ್ರದಲ್ಲಿ ತಿಳಿಸಲಾಗಿದೆ.

ಮಂಡ್ಯ ಜಿಲ್ಲೆಯು ಎಲ್ಲಾ ರೀತಿಯ ಸಂಪತ್ತು ಹೊಂದಿದ್ದರೂ ಸಹ ಅದರ ಫಲ ಜಿಲ್ಲೆಯ ಜನರಿಗೆ ಸಿಗುತ್ತಿಲ್ಲ. ಮುಖ್ಯವಾಗಿ ರೈತರು ಎಷ್ಟೇ ಬೆಳೆದರೂ ಸಮರ್ಪಕ ಬೆಲೆ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ನೀವು ಜಾರಿಗೊಳಿಸಿದಂತಹ ಕರಾಳ ಕೃಷಿ ಕಾನೂನುಗಳನ್ನು ವಾಪಸ್ ಪಡೆದರೂ ಸಹ ರಾಜ್ಯ ಸರ್ಕಾರ ವಾಪಸ್ ಪಡೆಯದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಕೂಡಲೇ ರಾಜ್ಯದ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ. ಜೊತೆಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈಚೆಗೆ ತಮ್ಮದೇ ಪಕ್ಷ ಆಳ್ವಿಕೆಯಲ್ಲಿರುವ ನಮ್ಮ ರಾಜ್ಯದಲ್ಲಿ ಮಹಿಳೆಯರನ್ನೂ ಒಳಗೊಂಡಂತೆ ಎಲ್ಲ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವುದು, ಮಹಿಳಾ ಕಾರ್ಮಿಕರಿಗೆ ಯಾವುದೇ ವಿಶೇಷ ರಕ್ಷಣೆಯ ನೀತಿಯಿಲ್ಲದೆ ರಾತ್ರಿಪಾಳಿಯಲ್ಲಿ ಕೆಲಸ ಮಾಡುವ ಅವಕಾಶ ನೀಡಿರುವುದು ಅತಿದೊಡ್ಡ ಕಾರ್ಮಿಕ ವಿರೋಧೀತನವಾಗಿದೆ. ಎಲ್ಲ ಕಾರ್ಮಿಕರಿಗೂ ಇದು ಹಾನಿಕರವಾದರೂ ಮಹಿಳಾ ಕಾರ್ಮಿಕರು ಈಗಾಗಲೇ ಮನೆಗೆಲಸ ಮತ್ತು ಹೆಚ್ಚು ಶ್ರಮಹಾಕಬೇಕಾದ ಹೊರಗಿನ ಕೆಲಸ ಎರಡರ ಹೊರೆಯನ್ನೂ ಹೊತ್ತವರಾಗಿ, ಹೆಚ್ಚುವರಿ ಕೆಲಸದ ಅವಧಿಯು ಅವರ ಆರೋಗ್ಯ ಮತ್ತು ಬದುಕಿನ ಮೇಲೆ ಅತ್ಯಂತ ಗಂಭೀರವಾದ ದುಷ್ಪರಿಣಾಮವನ್ನು ಬೀರುತ್ತದೆ ಎಂದು ತಿಳಿಸಲಾಗಿದೆ.

ಈ ಎಲ್ಲ ವಿಷಯಗಳಲ್ಲೂ ಕೂಡಲೇ ನಿಯಂತ್ರಿಸಿ, ಮಹಿಳಾ ವಿರೋಧಿ, ಜನವಿರೋಧಿ ನೀತಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತೇವೆ. ಇವಿಷ್ಟೇ ಅಲ್ಲದೆ, ಬಡಜನರ ಭೂಮಿ ಮತ್ತು ವಸತಿಯ ಹಕ್ಕನ್ನು ಕಸಿಯುವ ಪ್ರಯತ್ನಗಳನ್ನು, ಅಲ್ಪಸಂಖ್ಯಾತರು ಮತ್ತು ಅಂಚಿಗೊತ್ತಲ್ಪಟ್ಟವೆ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಈ ತಕ್ಷಣದಲ್ಲೇ ನಿಲುಗಡೆಗೆ ತರಬೇಕು. ಸಂವಿಧಾನಬದ್ಧವಾದ, ಪ್ರಜಾತಾಂತ್ರಿಕ, ಜಾತ್ಯತೀತ, ನಾಗರೀಕವಾದ ಬದುಕಿನ ಪರಿಸ್ಥಿತಿಯನ್ನು ಕಲ್ಪಿಸಬೇಕೆಂದು ನೀವಿಂದು ಭೇಟಿಕೊಡುತ್ತಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ ಮತ್ತು ಮಹಿಳೆಯರ ಪರವಾಗಿ ಈ ಮೂಲಕ ಆಗ್ರಹಿಸುತ್ತಿದ್ದೇವೆ.

ದೇಶದ ಪ್ರಜೆಗಳಾಗಿ ಗೌರವಯುತವಾಗಿ ಹಕ್ಕೊತ್ತಾಯ ಸಲ್ಲಿಸಲು ಬಂದ ನಮ್ಮನ್ನು ತಡೆದು ಪೊಲೀಸರು ನಮ್ಮ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಕೂಡನೇ ನಮ್ಮನ್ನು ಬಿಡುಗಡೆ ಮಾಡಿ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಪೊಲೀಸ್ ಠಾಣೆಯಲ್ಲಿಯೇ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಬಂಧಿತ ಹೋರಾಟಗಾರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಠಾಣೆಯಿಂದಲೇ ಪತ್ರ ಬರೆದಿದ್ದಾರೆ.

ಪೊಲೀಸರು ಈ ಕೂಡಲೇ ಬಂಧಿತ ಮುಖಂಡರನ್ನು ಬಿಡುಗಡೆಗೊಳಿಸದಿದ್ದರೆ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕಾಗುತ್ತದೆ ಎಂದು ಪ್ರತಿಭಟನಾಕಾರರ ಪರವಾಗಿ ಠಾಣೆಗೆ ಹಾಜರಾದ ಹಾಜರಾದ ಪ್ರಗತಿಪರ ವಕೀಲರಾದ ಬಿ ಟಿ ವಿಶ್ವನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯದ ಪ್ರಧಾನಿ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಅಧಿಕಾರ ದುರುಪಯೋಗ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...