Homeಮುಖಪುಟಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

ಲಂಡನ್‌ ಭಾಷಣ ಸಂಬಂಧ ರಾಹುಲ್‌ ಗಾಂಧಿ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು; ಸದನ ಮುಂದೂಡಿಕೆ

- Advertisement -
- Advertisement -

ಬ್ರಿಟನ್‌ನಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರು ಒತ್ತಾಯಿಸಿದ ನಂತರ ಸಂಸತ್ತಿನ ಉಭಯ ಸದನಗಳನ್ನು ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿಯವರು ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ, “ಭಾರತವು ತನ್ನ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದೆ” ಎಂದಿದ್ದರು.

“ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳನ್ನು ಮ್ಯೂಟ್ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂಲಭೂತವಾದಿ ಮತ್ತು ಫ್ಯಾಸಿಸ್ಟ್ ಸಂಘಟನೆಯಾಗಿದೆ” ಎಂದು ಬಣ್ಣಿಸಿದ್ದರು.

ಎರಡನೇ ಹಂತದ ಬಜೆಟ್ ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ, ಲೋಕಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಷಯ ಪ್ರಸ್ತಾಪಿಸಿ, “ರಾಹುಲ್‌ ಗಾಂಧಿಯವರ ಹೇಳಿಕೆಗಳು ದೇಶಕ್ಕೆ ಅವಮಾನ ಮಾಡಿವೆ” ಎಂದು ಆರೋಪಿಸಿದರು.

“ರಾಹುಲ್‌ ಅವರ ಹೇಳಿಕೆಗಳನ್ನು ಈ ಸದನದ ಎಲ್ಲಾ ಸದಸ್ಯರು ಖಂಡಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ” ಎಂದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿ, “1975ರಲ್ಲಿ ಕಾಂಗ್ರೆಸ್ ಜಾರಿಗೊಳಿಸಿದ ತುರ್ತುಪರಿಸ್ಥಿತಿಯನ್ನು ರಾಹುಲ್‌ ಅವರಿಗೆ ನೆನಪಿಸಬೇಕು, ಆ ಸಂದರ್ಭದಲ್ಲಿ ಜನರ ಹಕ್ಕುಗಳನ್ನು ಅಮಾನತು ಮಾಡಲಾಗಿತ್ತು” ಎಂದು ವಾದಿಸಿದರು.

ವಿರೋಧ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದ ನಂತರ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮುಂದೂಡಿದರು.

ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಮಾತನಾಡಿ, ರಾಹುಲ್‌ ಗಾಂಧಿಯವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

“ಪ್ರಮುಖ ವಿರೋಧ ಪಕ್ಷದ ನಾಯಕರು ವಿದೇಶಕ್ಕೆ ಹೋಗಿ ಭಾರತೀಯ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಾರೆ” ಎಂದು ಗೋಯಲ್ ಆರೋಪಿಸಿದರು. “ಅವರು ಭಾರತದ ಜನರನ್ನು ಮತ್ತು ಸಂಸತ್ತನ್ನು ಅವಮಾನಿಸಿದ್ದಾರೆ. ಭಾರತದಲ್ಲಿ ವಾಕ್ ಸ್ವಾತಂತ್ರ್ಯವಿದೆ ಮತ್ತು ಸಂಸದರು ಸಂಸತ್ತಿನಲ್ಲಿ ಮಾತನಾಡಬಹುದು” ಎಂದರು.

ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧದ ಆರೋಪಗಳನ್ನು ಕಾಂಗ್ರೆಸ್ ಪ್ರಸ್ತಾಪಿಸಿದಾಗ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

“ಮೋದಿ ಅಧಿಕಾರದಲ್ಲಿ ಕಾನೂನು ಮತ್ತು ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅವರು ದೇಶವನ್ನು ಸರ್ವಾಧಿಕಾರದಂತೆ ನಡೆಸುತ್ತಿದ್ದಾರೆ” ಎಂದು ಖರ್ಗೆ ಟೀಕಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಫೆಬ್ರವರಿ 13 ರಂದು ಕೊನೆಗೊಂಡ ಸಂಸತ್ತಿನ ಬಜೆಟ್ ಅಧಿವೇಶನ ಮತ್ತೆ ಆರಂಭವಾದ ಬಳಿಕವೂ ಮುಂದೂಡಿಕೆ ಮತ್ತು ಗದ್ದಲಗಳಿಗೆ ಸಾಕ್ಷಿಯಾಯಿತು. ಅದಾನಿ ಗ್ರೂಪ್‌ನ ಅಕ್ರಮಗಳ ವಿರುದ್ಧ ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ವಿರೋಧಪಕ್ಷಗಳು ಒತ್ತಾಯಿಸಿವೆ.

ಉದ್ಯಮಿ ಗೌತಮ್ ಅದಾನಿ ನೇತೃತ್ವದ ಸಂಸ್ಥೆಯ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ರಿಸರ್ಚ್ ಜನವರಿ 24ರಂದು ವರದಿ ಬಿಡುಗಡೆ ಮಾಡಿದ ನಂತರ ಸುಮಾರು $120 ಶತಕೋಟಿ ಮಾರುಕಟ್ಟೆ ಮೌಲ್ಯವನ್ನು ಅದಾನಿ ಗ್ರೂಪ್ ಕಳೆದುಕೊಂಡಿದೆ. “ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಲೆಕ್ಕಪತ್ರ ವಂಚನೆ ಮಾಡಲಾಗಿದೆ. ಇದು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಿವಾದವಾಗಿದೆ” ಎಂದು ಆರೋಪಿಸಲಾಗಿದೆ.

ಮೋದಿ ಸರ್ಕಾರವು ವ್ಯಾಪಾರ ವಹಿವಾಟುಗಳಲ್ಲಿ ಅದಾನಿ ಗ್ರೂಪ್‌ಗೆ ಒಲವು ತೋರುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆರೋಪಗಳನ್ನು ತಳ್ಳಿಹಾಕಿದ್ದು, ಬಿಜೆಪಿಯು ಮರೆಮಾಚಲು ಅಥವಾ ಭಯಪಡಲು ಏನೂ ಇಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...