ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.
ಸಮಾರಂಭದಲ್ಲಿ ನಿರೂಪಣೆ ಮಾಡಿದ ದೀಪಿಕಾ ಪಡುಕೋಣೆ ಅವರು, RRR ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದೆ ಎಂದು ಅನೌನ್ಸ್ ಮಾಡುವಾಗ ಹಾಡಿನ ಬಗ್ಗೆ ಪರಿಚಯಿಸಿದರು. ಆಸ್ಕರ್‌ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವರ್ಗಕ್ಕೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಮೂಲ ಗೀತೆಯಾಗಿದೆ. ಈ ಕ್ಷಣವನ್ನು ನಾವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದರು. ಈ ಐತಿಹಾಸಿಕ ಕ್ಷಣದಲ್ಲಿ ದೀಪಿಕಾ ಪಡುಕೋಣೆ ಅವರು ಭಾವುಕರಾದರು. ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು.
ಈ ವೇಳೆ ವೇದಿಕೆ ಮೇಲೆ ನಾಟು ನಾಟು ಹಾಡು ಹಾಡುತ್ತ ನೃತ್ಯ ಮಾಡಿ ಸಂಭ್ರಮಿಸಿದರು. ಒಂದೆಡೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿಯ ನಿರೂಪಣೆ ಮತ್ತೊಂದೆಡೆ ಎರಡು ಆಸ್ಕರ್ ಪ್ರಶಸ್ತಿಗಳು ಭಾರತಕ್ಕೆ ಬಂದಿವೆ. ಇದು ಇಡೀ ಭಾರತೀಯರ ಸಂಭ್ರಮಕ್ಕೆ ಕಾರಣವಾಗಿದೆ.
It can be Bigger Than This. 🔥
Out Very Own #DeepikaPadukone introduced the #NaatuNaatu song in #Oscars2023, The 1st Indian Original Song nominated for #BestOriginalSong Category in #Oscars.
This Moment we will cherish Forever ❤️#JrNTR #RamCharan #SSRajamouli #RRR pic.twitter.com/yX1EVkt2T0
— Ashwani kumar (@BorntobeAshwani) March 13, 2023
‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್
‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.
And the Oscar goes to…The Elephant Whisperers.
Guneet & Kartiki you DID IT.@guneetm @EarthSpectrum @TheAcademy pic.twitter.com/ixHehC9uQs
— Vikas Khanna (@TheVikasKhanna) March 13, 2023
ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.
ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ
ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್ ಔಟ್’, ‘ಹೌ ಡು ಯು ಮೆಷರ್ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.
RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ
ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.
ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್ ಮಿ ಅಪ್’,’ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.
ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.


