Homeದಲಿತ್ ಫೈಲ್ಸ್ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

ತಮಿಳುನಾಡು ದಲಿತ ಹೋರಾಟಗಾರ್ತಿಗೆ ಆನ್‌ಲೈನ್‌ನಲ್ಲಿ ಕಿರುಕುಳ; ಡಿಎಂಕೆ, ಬಿಜೆಪಿ ಬೆಂಬಲಿಗರಿಂದ ದುಷ್ಕೃತ್ಯ

- Advertisement -
- Advertisement -

ಚೆನ್ನೈ ಮೂಲದ ಲೇಖಕಿ ಮತ್ತು ದಲಿತ ಹೋರಾಟಗಾರ್ತಿ ಶಾಲಿನ್ ಮರಿಯಾ ಲಾರೆನ್ಸ್‌ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಕಿರುಕುಳವನ್ನು ನೆಟ್‌ವರ್ಕ್ ಆಫ್ ವುಮೆನ್ ಇನ್ ಮೀಡಿಯಾ ಇಂಡಿಯಾ (ಎನ್‌ಡಬ್ಲ್ಯುಎಂಐ) ಸಂಸ್ಥೆ ಖಂಡಿಸಿದೆ.

“ಡಿಎಂಕೆ ಮತ್ತು ಬಿಜೆಪಿ ಎರಡನ್ನೂ ಬೆಂಬಲಿಸುವ ಹ್ಯಾಂಡಲ್‌ಗಳಿಂದ ಈ ಕಿರುಕುಳ ನೀಡಲಾಗುತ್ತಿದೆ” ಎಂದು ಎನ್‌ಡಬ್ಲ್ಯುಎಂಐ ಹೇಳಿದೆ.

ಜಾತಿ-ಸಂಬಂಧಿತ ದೌರ್ಜನ್ಯಗಳ ಬಗ್ಗೆ ಟ್ವಿಟರ್‌ ಮೂಲಕ ಜಾಗೃತಿ ಮೂಡಿಸುವ ಕೆಲಸವನ್ನು ಶಾಲಿನ್ ಅವರು 2018ರಿಂದಲೂ ಮಾಡುತ್ತಿದ್ದಾರೆ. ಆಡಳಿತರೂಢ ಡಿಎಂಕೆ ಮತ್ತು ಬಲಪಂಥೀಯ ಗುಂಪುಗಳೆರಡೂ ಶಾಲಿನ್‌ ಅವರ ಮೇಲೆ ದಾಳಿ ನಡೆಸುತ್ತಿವೆ.

“ಆತ್ಮಾವಲೋಕನದಲ್ಲಿ ತೊಡಗಿಸಿಕೊಳ್ಳುವ ಬದಲು, ಅಂಕಿ-ಅಂಶಗಳನ್ನು ಅವಲೋಕಿಸುವ ಬದಲು ಸಂಘಟಿತ ದಾಳಿಗಳನ್ನು ಕೈಗೊಂಡಿದ್ದಾರೆ. ಜಾತಿವಾದಿ ನಿಂದನೆಗಳನ್ನು ಮಾಡುತ್ತಿದ್ದಾರೆ. ಬಾಡಿ ಶೇಮಿಂಗ್ ನಡೆಯುತ್ತಿದೆ, ಶಾಲಿನ್‌ ಅವರ ಧರ್ಮದ ಆಧಾರದ ಮೇಲೆ ನಿಂದನೆಗಳನ್ನು ಮಾಡಿ ಕೆಟ್ಟ ಭಾಷೆಯನ್ನು ಬಳಸಲಾಗುತ್ತಿದೆ. ಈ ಗುಂಪುಗಳು ಶಾಲಿನ್ ಅವರ ಕುಟುಂಬ ಸದಸ್ಯರನ್ನೂ ಟಾರ್ಗೆಟ್ ಮಾಡಿವೆ” ಎಂದು ಎನ್‌ಡಬ್ಲ್ಯುಎಂಐ ವಿವರಿಸಿದೆ.

“ಭಾರತದ ಪ್ರತಿಯೊಂದು ರಾಜಕೀಯ ಪಕ್ಷವೂ ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ಕುರಿತು ಮಾತನಾಡುತ್ತವೆ. ಪ್ರತಿಯೊಂದು ರಾಜಕೀಯ ಪಕ್ಷವೂ ಲಿಂಗ ಆಧಾರಿತ ಹಿಂಸೆ ಮತ್ತು ಜಾತಿ ಆಧಾರಿತ ಹಿಂಸೆಯನ್ನು ಅಮೂರ್ತವಾಗಿ ಖಂಡಿಸುತ್ತವೆಯಷ್ಟೇ. ಆದರೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಮಹಿಳೆಯರ ಮೇಲೆ, ಅದರಲ್ಲೂ ಶೋಷಿತ ಸಮುದಾಯದ ಹೆಣ್ಣಿನ ಮೇಲೆ ಲಿಂಗ, ಜಾತಿ ಆಧಾರಿತ ದಾಳಿಯನ್ನು ನಡೆಸುವ ರಾಜಕೀಯ ಪಕ್ಷಗಳ ಅನುಯಾಯಿಗಳಿಗೆ ಯಾವುದೇ ಕಡಿವಾಣ ಬೀಳುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದೆ.

ತಮಿಳುನಾಡಿನ ಪ್ರಮುಖ ದಲಿತ ಹೋರಾಟಗಾರ್ತಿಯಾಗಿರುವ ಶಾಲಿನ್ ಅವರು ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್ ಪಕ್ಷದೊಂದಿಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಅವರು, ಇತ್ತೀಚೆಗೆ ಚೆನ್ನೈಗೆ ಭೇಟಿ ನೀಡಿದ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿರಿ: ದರ್ಶನ್ ಸೋಲಂಕಿ ಜಾತಿ ತಿಳಿಯಲು ರ್‍ಯಾಂಕ್‌ ಬಗ್ಗೆ ಕೇಳಿದ್ದ ರೂಮ್‌ಮೇಟ್‌; ಪೋನ್‌ ಕಾಲ್‌ ಬಿಚ್ಚಿಟ್ಟ ಸತ್ಯಗಳಿವು!

“ನನ್ನ ಹೋರಾಟದ ಕಾರಣಕ್ಕೆ ನನ್ನ ಮೇಲೆ ಆಕ್ರಮಣಗಳು ನಡೆಯುತ್ತಿವೆ. ಆದರೆ ಹಿಂದೆಂದೂ ನಡೆಯದಷ್ಟು ಸಂಘಟಿತ ದಾಳಿ ಇತ್ತೀಚೆಗೆ ಆಗಿದೆ” ಎಂದು ಶಾಲಿನ್ ಅವರು ‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

“ಬಿಜೆಪಿ-ಆರ್‌ಎಸ್‌ಎಸ್ ಸೈಬರ್ ಗುಂಪುಗಳಂತೆ ಡಿಎಂಕೆ ಕೂಡ ಸೈಬರ್‌ ಗುಂಪುಗಳನ್ನು ಹೊಂದಿದೆ. ವಾಟ್ಸ್‌ಅಪ್‌ ಗ್ರೂಪ್‌ ಮಾಡಿಕೊಂಡು, ಒಂದೇ ರೀತಿಯ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಅವುಗಳನ್ನು ಟ್ವೀಟ್ ಮಾಡಿ ದಾಳಿ ಮಾಡಲಾಗುತ್ತದೆ. ವ್ಯಕ್ತಿಯೊಬ್ಬರ ಮೇಲೆ ಟಾರ್ಗೆಟ್ ಮಾಡಲು ಗ್ರೂಪ್‌ಗಳಲ್ಲಿ ಚರ್ಚಿಸುತ್ತಾರೆ” ಎಂದಿದ್ದಾರೆ.

ದಲಿತ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ತೊಟ್ಟಿಯಲ್ಲಿ ಮಾನವ ಮಲ ಪತ್ತೆಯಾದ ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಬೇಕು, ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ ಹೋರಾಟಗಾರರಲ್ಲಿ ಶಾಲಿನ್ ಕೂಡ ಒಬ್ಬರಾಗಿದ್ದಾರೆ. ದಲಿತರ ಭೂ ಸಮಸ್ಯೆಗಳು, ತಮಿಳುನಾಡಿನ ಹಳ್ಳಿಗಳಲ್ಲಿ ಚುನಾಯಿತ ದಲಿತ ಪ್ರತಿನಿಧಿಗಳ ಎದುರಿಸುವ ತಾರತಮ್ಯಗಳು ಸೇರಿದಂತೆ ಮೊದಲ ವಿಷಯಗಳ ಕುರಿತು ಶಾಲಿನ್ ದನಿ ಎತ್ತುತ್ತಾ ಬಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...