Homeಮುಖಪುಟಮಾಂಸದ ವ್ಯಾಪಾರಿಗಳ ಮುಖದ ಮೇಲೆ ಮೂತ್ರ ಮಾಡಿ, ಹಲ್ಲೆ ನಡೆಸಿದ ಪೊಲೀಸರು!

ಮಾಂಸದ ವ್ಯಾಪಾರಿಗಳ ಮುಖದ ಮೇಲೆ ಮೂತ್ರ ಮಾಡಿ, ಹಲ್ಲೆ ನಡೆಸಿದ ಪೊಲೀಸರು!

- Advertisement -
- Advertisement -

ಮಾಂಸದ ವ್ಯಾಪಾರಿಗಳ ಮೇಲೆ ಮೂವರು ಪೊಲೀಸರು ಸೇರಿದಂತೆ 7 ಜನರು ಹಲ್ಲೆ ನಡೆಸಿ, ಲೂಟಿ ಮಾಡಿರುವ ಘಟನೆ ಪೂರ್ವ ದೆಹಲಿಯ ಆನಂದ್ ವಿಹಾರ್‌ನಲ್ಲಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಈ ಘಟನೆ ಮಾರ್ಚ್ 7ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಾಂಸದ ವ್ಯಾಪಾರಿಗಳು ಕಾರ್‌ನಲ್ಲಿ ಸಂಚರಿಸುತ್ತಿದ್ದಾಗ, ಕಾರು ಸ್ಕೂಟರ್‌ವೊಂದಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಆರೋಪಿಗಳಲ್ಲಿ ಒಬ್ಬ ‘ಗೋ ರಕ್ಷಕ’ನಾಗಿದ್ದು, ಮಾಂಸ ಮಾರಾಟಗಾರರ ಮುಖದ ಮೇಲೆ ಮೂತ್ರ ಮಾಡಿದ್ದಾನೆ. ಅಲ್ಲದೆ, ಅವರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಕೂಡಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದರೂ ಸಹ 4 ದಿನಗಳ ಬಳಿಕ ಪ್ರಕರಣ ದಾಖಲಾಗಿದೆ. ಮೂವರು ಪೊಲೀಸರು ಸೇರಿ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಒಬ್ಬ ಎಎಸ್ಐ ಆಗಿದ್ದು, ಆತನನ್ನು ಅಮಾನತು ಮಾಡಲಾಗಿದೆ.

ಮುಸ್ತಾಫಾಬಾದ್‌ನ ನಿವಾಸಿ ನವಾಬ್ ಎನ್ನುವವರು ಗಾಜಿಪುರಕ್ಕೆ ಮಾಂಸ ಸರಬರಾಜು ಮಾಡುತ್ತಿದ್ದರು. ಸೋದರ ಸಂಬಂಧಿ ಶೋಯಬ್ ಜೊತೆ ಕಾರಿನಲ್ಲಿ ಮಾಂಸ ಇಟ್ಟುಕೊಂಡು ಮನೆಯತ್ತ ತೆರಳುತ್ತಿದ್ದರು. ಈ ವೇಳೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್ ಚಾಲಕ ಮಾಂಸದ ವ್ಯಾಪಾರಿಗಳಿಗೆ 4,000 ರೂ. ಡ್ಯಾಮೇಜ್ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾನೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಂ ಎನ್ನುವ ಕಾರಣಕ್ಕೆ ಝೊಮಾಟೊ ಸಿಬ್ಬಂದಿ ಮೇಲೆ ಹಲ್ಲೆ; ಕೋಮುವಾದಿ ಅಂಶ ಇಲ್ಲ ಎಂದ ಪೊಲೀಸ್

ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸರು ಮಾಂಸ ಮಾರಾಟಗಾರರಿಂದ  2,500 ರೂ. ಪಡೆದು ಸ್ಕೂಟರ್ ಚಾಲಕನಿಗೆ ನೀಡಿದ್ದಾರೆ. ಬಳಿಕ, ಪೊಲೀಸರು ಮಾಂಸದ ವ್ಯಾಪಾರಿಗಳಿಂದ 15 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಪೊಲೀಸ್ ಠಾಣೆಗೆ ಕೊಂಡೊಯ್ಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ತಿಳಿಸಿದೆ.

ಇದಕ್ಕೆ ಮಾಂಸದ ವ್ಯಾಪಾರಿಗಳು ನಿರಾಕರಿಸಿದಾಗ, ಇನ್ನೂ ನಾಲ್ವರನ್ನು ಕರೆಸಿಕೊಂಡ ಪೊಲೀಸರು, ಮಾಂಸದ ವ್ಯಾಪಾರಿಗಳನ್ನು ಪೊಲೀಸ್ ವಾಹನದಲ್ಲಿ ಕೂರಿಸಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ನವಾಬ್ ಮತ್ತು ಶೋಯಬ್ ಅವರಿಗೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಆರೋಪಿಯೊಬ್ಬ ಅವರ ಮೇಲೆ ಮೂತ್ರ ಮಾಡಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗಿದೆ.

ಆ ವ್ಯಾಪಾರಿಗಳನ್ನು ಗೋಹತ್ಯೆ ಮಾಡುವವರು ಎಂದು ಆರೋಪಿಸಿ ಪೊಲೀಸರು 25,000 ರೂ. ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತರಿಗೆ ಪ್ರಜ್ಞೆ ತಪ್ಪುವ ಚುಚ್ಚುಮದ್ದನ್ನು ಚುಚ್ಚಿ, ಖಾಲಿ ಪತ್ರಗಳಿಗೆ ಸಹಿ ಮಾಡಿಸಿಕೊಳ್ಳಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಸಂತ್ರಸ್ತ ವ್ಯಾಪಾರಿಗಳು ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ದೂರು ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...