Homeಕರ್ನಾಟಕಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

ಬಿಜೆಪಿ ಸೃಷ್ಟಿಸಿದ ನಕಲಿ ಇತಿಹಾಸ: ಇಲ್ಲಿ ಉರಿಗೌಡ, ನಂಜೇಗೌಡ; ಉತ್ತರ ಭಾರತದಲ್ಲಿ ಗುರ್ಜರ್‌ ರಾಣಿ

- Advertisement -
- Advertisement -

“ಟಿಪ್ಪು ಸುಲ್ತಾನರನ್ನು ಕೊಂದಿದ್ದು ಉರಿಗೌಡ, ದೊಡ್ಡ ನಂಜೇಗೌಡ” ಎಂದು ಕರ್ನಾಟಕದಲ್ಲಿ ನಕಲಿ ಇತಿಹಾಸವನ್ನು ಸೃಷ್ಟಿಸುತ್ತಿರುವಂತೆಯೇ, ಉತ್ತರಭಾರತದಲ್ಲಿ ಗುರ್ಜರ್ ಸಮುದಾಯವನ್ನು ಮುಖ್ಯವಾಗಿಟ್ಟುಕೊಂಡು ನಕಲಿ ಇತಿಹಾಸ ಕಟ್ಟುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿರುವ ಕುರಿತು ‘ದಿ ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ಮೂಲಕ ಒಕ್ಕಲಿಗ ಸಮುದಾಯವನ್ನು ವೋಟ್‌ಬ್ಯಾಂಕ್ ಮಾಡಿಕೊಳ್ಳಲು ಕರ್ನಾಟಕದಲ್ಲಿ ವಿಫಲ ಯತ್ನ ಮಾಡುತ್ತಿರುವಂತೆಯೇ ಉತ್ತರದಲ್ಲಿ ಗುರ್ಜರ್‌‌ ಸಮುದಾಯವನ್ನು ಟಾರ್ಗೆಟ್‌ ಮಾಡಿಕೊಂಡು ನಕಲಿ ಇತಿಹಾಸ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ಇತಿಹಾಸವನ್ನು ತಿರುಚಿ ನಿರ್ದಿಷ್ಟ ಸಮುದಾಯವನ್ನು ಸೆಳೆಯುವ ಹೊಸ ತಂತ್ರಗಾರಿಕೆಯನ್ನು ಸಂಘಪರಿವಾರ ಮಾಡುತ್ತಿದೆ.

ಕರ್ನಾಟಕದಲ್ಲಿ ಉರಿಗೌಡ, ದೊಡ್ಡನಂಜೇಗೌಡರನ್ನು ಪ್ರಸ್ತಾಪಿಸುತ್ತಿರುವಂತೆಯೇ ಉತ್ತರ ಭಾರತದಲ್ಲಿ ರಾಜಾ ಸುಹೇಲ್‌ದೇವ್ ಮತ್ತು ಗುರ್ಜರ್ ವೀರ ಮಹಿಳೆ ರಾಮ್‌ಪ್ಯಾರಿ ಗುರ್ಜರ್‌ ಎಂಬ ಪಾತ್ರಗಳನ್ನು ಚುನಾವಣಾ ರಂಗಕ್ಕೆ ಎಳೆದು ತರಲಾಗಿದೆ.

ಈ ಹಲವು ಪ್ರಕರಣಗಳಲ್ಲಿ ಬಿಜೆಪಿ ಹೇಳುವಂತೆ ಈ ವೀರರು ನಿಜವಾಗಿಯೂ ಅಸ್ತಿತ್ವದಲ್ಲಿಲ್ಲ ಎಂದು ಇತಿಹಾಸಕಾರರು ಹೇಳುತ್ತಾರೆ. ಆದಾಗ್ಯೂ ಹಿಂದುತ್ವ ಪಕ್ಷವು ಅಂತಹ ವಾಸ್ತವಿಕ ಸತ್ಯಗಳನ್ನು ಅಲ್ಲಗಳೆಯುತ್ತಲೇ ಬಂದಿದೆ.

ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ಮಂಡ್ಯ ಜಿಲ್ಲೆಗೆ ಮೋದಿ ಆಗಮಿಸಲಿದ್ದ ಹಿನ್ನೆಲೆಯಲ್ಲಿ ‘ಕಾಲ್ಪನಿಕ ವ್ಯಕ್ತಿ’ಗಳಾದ ಉರಿಗೌಡ, ನಂಜೇಗೌಡರ ಹೆಸರಿನ ಮಹಾದ್ವಾರವನ್ನು ತೆರೆದು ನಗೆಪಾಟಲಿಗೀಡಾಯಿತು. ಸ್ಥಳೀಯರು, ವಿರೋಧ ಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮಹಾದ್ವಾರವನ್ನು ತೆರವು ಮಾಡಲಾಯಿತು. ಇಷ್ಟೆಲ್ಲ ಆದರೂ ಬಿಜೆಪಿ ನಾಯಕರು ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರಿಗೌಡ, ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು” ಎಂದು ಬಿಂಬಿಸುವ ವ್ಯರ್ಥ ಪ್ರಯತ್ನ ಮಾಡುತ್ತಲೇ ಇದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ‘ಟಿಪ್ಪು ನಿಜಕನಸುಗಳು’ ಎಂಬ ನಾಟಕವನ್ನು ರಚಿಸಿ, ಅಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಯಾವುದೇ ದಾಖಲೆಗಳಿಲ್ಲದೆ, ಸುಳ್ಳಿನ ನಾಟಕ ಕಟ್ಟಿ ಜಾತಿ ರಾಜಕಾರಣ ಮಾಡಲು ಮುಂದಾಗಿರುವುದನ್ನು ಜನರು ಗುರುತಿಸಲಾರಂಭಿಸಿದ್ದಾರೆ.

ಒಬ್ಬ ರಾಜಪ್ರಭುತ್ವ ಕಾಲದ ಮುಸ್ಲಿಂ ಸುಲ್ತಾನನನ್ನು ವರ್ತಮಾನದಲ್ಲಿ ನಿಲ್ಲಿಸಿ ಆತ ಹಿಂದೂ ವಿರೋಧಿಯಾಗಿದ್ದ, ಒಕ್ಕಲಿಗರ, ಚಿತ್ರದುರ್ಗದ ನಾಯಕರ, ಕ್ರಿಶ್ಚಿಯನ್ನರ, ಕೊಡವರ, ಬ್ರಾಹ್ಮಣರ ಹಾಗೂ ಕನ್ನಡದ ವಿರೋಧಿಯಾಗಿದ್ದ. ಟಿಪ್ಪುವನ್ನು ಬೆಂಬಲಿಸುವವರು ಇವರೆಲ್ಲರ ವಿರೋಧಿ ಎಂಬುದನ್ನು ಸುಳ್ಳುಸುಳ್ಳೇ ಸಾಧಿಸುವುದು ಇಲ್ಲಿನ ಉದ್ದೇಶ. ಕೃತಿಯಲ್ಲಿ ಮತ್ತೆಮತ್ತೆ ಪುನರಾವರ್ತಿತವಾಗುವ ಜಾತಿ ಉದ್ದೇಶಿತ ಸಾಲುಗಳೇ ಇದನ್ನು ಮಾರ್ದನಿಸುತ್ತದೆ. ಇದು ಹಿಂದೂ ರಾಷ್ಟ್ರ, ಮುಸ್ಲಿಮರು ದ್ವಿತೀಯ ದರ್ಜೆಯಲ್ಲಿ ಬದುಕಬೇಕು ಎಂಬ ಸಂವಿಧಾನ ವಿರೋಧಿ ಆಶಯವನ್ನು ಅಡ್ಡಂಡ ಕಾರ್ಯಪ್ಪ ಇಲ್ಲಿ ಪ್ರತಿಪಾದಿಸಿದ್ದರು. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಕೊಂದರು ಎಂದು ನಾಟಕದ ಮೂಲಕ ಪ್ರಚಾರ ಮಾಡಿದರು. (ನಾಟಕದ ವಿಮರ್ಶೆಯನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿರಿ.)

ಆದರೆ, ಉರಿಗೌಡ ಮತ್ತು ನಂಜೇಗೌಡ ಎಂಬ ವ್ಯಕ್ತಿಗಳು ನಿಜವಾಗಿಯೂ ಅಸ್ತಿತ್ವದಲ್ಲಿ ಇಲ್ಲ. ಒಕ್ಕಲಿಗ ಮತದಾರರನ್ನು ಸೆಳೆಯಲು ಬಿಜೆಪಿಯು ಅವರನ್ನು ಸೃಷ್ಟಿಸಿದೆ ಎಂದು ಐತಿಹಾಸ ತಜ್ಞರು ಹೇಳುತ್ತಾರೆ. ನಾಲ್ಕನೇ ಆಂಗ್ಲೋ-ಮೈಸೂರು ಯುದ್ಧದ ಸಮಯದಲ್ಲಿ ಬ್ರಿಟಿಷರೊಂದಿಗೆ ಹೋರಾಡುವಾಗ ಟಿಪ್ಪುವಿನ ಮರಣವಾಗಿದೆ ಎಂದು ಇತಿಹಾಸ ಕೃತಿಗಳು ಹೇಳುತ್ತವೆ.

“ಬಿಜೆಪಿಯು ಸಮುದಾಯ ಆಧಾರಿತ ಪ್ರಚಾರ ಮಾಡಿ ಮತಗಳನ್ನು ಪಡೆಯಲು ಈ ಎರಡು ಪಾತ್ರಗಳು ಮತ್ತು ಹೆಸರುಗಳನ್ನು ಸೃಷ್ಟಿಸಿದೆ ಎಂದು ನನಗೆ 100% ಖಚಿತವಾಗಿದೆ” ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ಹೇಳುತ್ತಾರೆ.

ಗುರ್ಜರ್‌ ಟಾರ್ಗೆಟ್‌

ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳ ರೀತಿಯಲ್ಲಿಯೇ ಬಿಜೆಪಿಯು ಉತ್ತರ ಭಾರತದಲ್ಲಿ ನಿರ್ದಿಷ್ಟ ಜಾತಿಗಳಿಗೆ ಸೇರಿದ ಮಧ್ಯಕಾಲೀನ ವ್ಯಕ್ತಿಗಳನ್ನು ಮುನ್ನೆಲೆಗೆ ತಂದಿದೆ.

ಬಿಜೆಪಿಯ ಮಾಜಿ ನಾಯಕ, ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಅವರು, “ಗುರ್ಜರ್ ಹೋರಾಟಗಾರ್ತಿ ರಾಮ್‌ಪ್ಯಾರಿ ಗುರ್ಜರ್‌ ಮತ್ತು ಟರ್ಕಿಯ ಆಕ್ರಮಣಕಾರ ತೈಮೂರ್ ವಿರುದ್ಧದ ಹೋರಾಟ”ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮಧ್ಯಕಾಲೀನ ಭಾರತದಲ್ಲಿ ಮೀರತ್ ಮತ್ತು ಹರಿದ್ವಾರದ ನಡುವಿನ ಪ್ರದೇಶದಲ್ಲಿ, ಧೈರ್ಯಶಾಲಿ ಮಹಿಳೆ ರಾಂಪ್ಯಾರಿ ಗುರ್ಜರ್ 40,000 ಜನರ ಸೈನ್ಯವನ್ನು ಕಟ್ಟಿದರು. ತೈಮೂರ್ ವಿರುದ್ಧ ಹೋರಾಡಿದರು” ಎಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದನಕರ್‌ ಹೇಳಿದ್ದಾರೆ.

ಜನವರಿಯಲ್ಲಿ ರಾಜಸ್ಥಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ರಾಮಪ್ಯಾರಿ ಗುರ್ಜರ್‌ ಶೌರ್ಯವನ್ನು ಹೊಗಳಿದ್ದರು. ಅನೇಕ ರಾಜ್ಯಗಳಲ್ಲಿ ಇತರ ಹಿಂದುಳಿದ ವರ್ಗದಲ್ಲಿನ ಗುರ್ಜರ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಮಪ್ಯಾರಿ ಗುರ್ಜರ್‌ ಕುರಿತು ಮಾತನಾಡಲಾರಂಭಿಸಿದ್ದಾರೆ.

“ರಾಷ್ಟ್ರ ಮತ್ತು ಸಂಸ್ಕೃತಿಯ ಸೇವೆಯಲ್ಲಿ ಗುರ್ಜರ್ ಸಮುದಾಯದ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಅಪಾರ ಕೊಡುಗೆಯನ್ನು ಈ ಇತಿಹಾಸ ನಮಗೆ ತಿಳಿಸುತ್ತದೆ” ಎಂದು ಮೋದಿ ಬಣ್ಣಿಸಿದ್ದರು.

“ಇಂತಹ ಅಸಂಖ್ಯಾತ ಹೋರಾಟಗಾರರು ನಮ್ಮ ಇತಿಹಾಸದಲ್ಲಿ ಅರ್ಹವಾದ ಸ್ಥಾನವನ್ನು ಪಡೆಯಲು ಸಾಧ್ಯವಾಗದಿರುವುದು ದೇಶದ ದೌರ್ಭಾಗ್ಯ. ಆದರೆ ಹೊಸ ಭಾರತವು ಕಳೆದ ದಶಕಗಳ ಈ ತಪ್ಪುಗಳನ್ನು ಸರಿಪಡಿಸುತ್ತಿದೆ” ಎಂದು ತಿಳಿಸಿದ್ದರು.

ರಾಮ್‌ಪ್ಯಾರಿ ಗುರ್ಜರ್‌ ಅವರ ಶೌರ್ಯದ ಬಗ್ಗೆ ಬಂದಿರುವ ಈ ಕತೆಯು 1398ರ ಯುದ್ಧದ ಬಗ್ಗೆ ಉಲ್ಲೇಖಿಸುತ್ತವೆ. ರಾಮ್‌ಪ್ಯಾರಿ ಗುರ್ಜರ್ ಅವರಿಗೆ ಸೇರಿದ್ದ ಮಹಾಪಂಚಾಯತ್‌ ಸೈನ್ಯದ ಡೆಪ್ಯುಟಿ ಜನರಲ್ ಹರ್ವೀರ್ ಸಿಂಗ್ ಗುಲಿಯಾ ಎಂಬವರು, ತೈಮೂರ್ ಅನ್ನು ಈಟಿಯಿಂದ ಹೊಡೆದನೆಂದು ಪ್ರತಿಪಾದಿಸಲಾಗಿದೆ. ಆ ಹೋರಾಟದಲ್ಲಿ ತೈಮೂರ್‌ ಹತನಾದನು ಎಂದು ಈ ಕಥೆಯ ಮೂಲಕ ಹೇಳಲಾಗುತ್ತಿದೆ.

ಇದನ್ನೂ ಓದಿರಿ: ಟಿಪ್ಪು ಹಾಸನಕ್ಕೆ ”ಕೈಮಾಬಾದ್” ಹೆಸರಿಟ್ಟಿದ್ದ: ಉರಿಗೌಡ, ನಂಜೇಗೌಡ ಬಳಿಕ ಮತ್ತೊಂದು ವಿವಾದ ಹುಟ್ಟುಹಾಕಿದ ಸಿಟಿ ರವಿ

ಆದರೆ ಇತಿಹಾಸಕಾರರು ತಿಳಿಸುವುದೇ ಬೇರೆ. “1405ರಲ್ಲಿ ಚೀನಾದ ಮಿಂಗ್ ಸಾಮ್ರಾಜ್ಯದ ವಿರುದ್ಧ ಮಿಲಿಟರಿ ಕಾರ್ಯಾಚರಣೆಯಲ್ಲಿದ್ದಾಗ ತೈಮೂರ್‌‌, ಕಠಿಣ ಚಳಿಗಾಲದ ನಡುವೆ ಅನಾರೋಗ್ಯಕ್ಕೆ ತುತ್ತಾಗಿ ಕೊನೆಯುಸಿರೆಳೆದನು” ಎಂದು ಇತಿಹಾಸಕಾರರು ಹೇಳುತ್ತಾರೆ.

“[1398] ಯುದ್ಧದಲ್ಲಿ ತೈಮೂರ್ ಗಾಯಗೊಂಡನು. ವಾತಾವರಣದ ಪರಿಸ್ಥಿತಿ, ಆಯಾಸಗೊಂಡ ಸೈನ್ಯ ಮತ್ತು ಸೈನ್ಯದಲ್ಲಾದ ಅನೇಕ ಸಾವುಗಳ ಕಾರಣ ಈ ಪ್ರದೇಶದಿಂದ ಹೊರಗೆ ಹೊರಟನು ಎಂದು ನಮಗೆ ‘ಜಾಫರ್-ನಮಾ’ ಜೀವನ ಚರಿತ್ರೆಯಿಂದ ತಿಳಿಯುತ್ತದೆ” ಎಂದು ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಧ್ಯಕಾಲೀನ ಭಾರತೀಯ ಇತಿಹಾಸ ಬೋಧಿಸುವ ಸಹಾಯಕ ಪ್ರಾಧ್ಯಾಪಕರಾದ ಮನಿಶಾ ಚೌಧರಿ ಸ್ಪಷ್ಟಪಡಿಸಿದ್ದಾರೆ.

“ಆದರೆ, ಆ ಯುದ್ಧದಲ್ಲಿ ಗಾಯಗೊಂಡು ತೈಮೂರ್‌ ಸಾವಿಗೀಡಾಗಿದ್ದಾನೆ ಎಂಬುದು ಅಸಂಭವವಾಗಿದೆ. ಏಕೆಂದರೆ ಅವರು ಮಧ್ಯಂತರ ಅವಧಿಯಲ್ಲಿ ತುಂಬಾ ಸಕ್ರಿಯರಾಗಿದ್ದನು ಎಂದು ನಮಗೆ ತಿಳಿದಿದೆ” ಎಂದಿದ್ದಾರೆ.

“ರಾಂಪ್ಯಾರಿ ಗುರ್ಜರ್ ಯುದ್ಧದಲ್ಲಿ ಹೋರಾಡಿದ್ದಾರೆ ಎಂಬುದರ ಕುರಿತು ಉಲ್ಲೇಖಗಳಿಲ್ಲ. ನಾವು ಈ ಬಗ್ಗೆ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಘಟನೆಗಳು ಮಾತ್ರ ಮುಖ್ಯ” ಎಂದು ಚೌದರಿ ತಿಳಿಸಿದ್ದಾರೆ.

(ಟಿಪ್ಪಣಿ: ಈ ವರದಿಯಲ್ಲಿ ಅನೇಕ ಅಂಶಗಳನ್ನು ‘ಸ್ಕ್ರಾಲ್‌.ಇನ್‌’ನಲ್ಲಿ ಪ್ರಕಟವಾಗಿರುವ ಲೇಖನದಿಂದ ಆಯ್ದು ಬಳಸಿಕೊಳ್ಳಲಾಗಿದೆ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...