Homeಮುಖಪುಟಪವನ್ ಖೇರಾ ಕೇಸ್ ಲಕ್ನೋಗೆ ವರ್ಗಾವಣೆ, ಮಧ್ಯಂತರ ಜಾಮೀನು ಏ.10 ರವರೆಗೆ ವಿಸ್ತರಣೆ: ಸುಪ್ರೀಂ ಆದೇಶ

ಪವನ್ ಖೇರಾ ಕೇಸ್ ಲಕ್ನೋಗೆ ವರ್ಗಾವಣೆ, ಮಧ್ಯಂತರ ಜಾಮೀನು ಏ.10 ರವರೆಗೆ ವಿಸ್ತರಣೆ: ಸುಪ್ರೀಂ ಆದೇಶ

- Advertisement -
- Advertisement -

ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕೆ ಮಾಡಿದ್ದಕ್ಕೆ ದಾಖಲಾದ ಮೂರು ಪ್ರಕರಣಗಳನ್ನು ಲಕ್ನೋಗೆ ವರ್ಗಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ಜೊತೆಗೆ ಅವರ ಮಧ್ಯಂತರ ಜಾಮೀನನ್ನು ಏಪ್ರಿಲ್ 10 ರವರೆಗೆ ವಿಸ್ತರಿಸಿದೆ.

ಪವನ್ ಖೇರಾ ವಿರುದ್ಧ ಉತ್ತರ ಪ್ರದೇಶ ಮತ್ತು ಅಸ್ಸಾಂನಲ್ಲಿ ಎರಡು ಎಫ್‌ಐಆರ್ ದಾಖಲಾಗಿವೆ. ಫೆಬ್ರವರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕಾಂಗ್ರೆಸ್ ನಾಯಕ ಖೇರಾ ಅವರು, ಪ್ರಧಾನಿಯನ್ನು ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದಾರೆ – ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ – ಅವರನ್ನು ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರೊಂದಿಗೆ ಲಿಂಕ್ ಮಾಡುವ ಮೂಲಕ ವ್ಯಂಗ್ಯ ಮಾಡಿದ್ದಾರೆ.

ಅಮೆರಿಕದ ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಿಂದ ಉಂಟಾದ ಬಿಕ್ಕಟ್ಟಿನ ಬಗ್ಗೆ ಖೇರಾ ಅವರು ಮೋದಿ ಸರ್ಕಾರವನ್ನು ಟೀಕಿಸಿದರು, ಅದಾನಿ ಗ್ರೂಪ್ ವಂಚನೆ ಮಾಡಿದೆ ಎಂದು ಆರೋಪಿಸಿದರು. ಈ ಕಂಪನಿ ಸಂಸ್ಥಾಪಕ ಗೌತಮ್ ಅದಾನಿ ಬಗ್ಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಖೇರಾ ಅವರು ಫೆಬ್ರವರಿ 23ರಂದು ದೆಹಲಿ ವಿಮಾನ ನಿಲ್ದಾಣದ ಇಂಡಿಗೋ ವಿಮಾನದಲ್ಲಿ ಪಕ್ಷದ ಇತರ ನಾಯಕರೊಂದಿಗೆ ಕಾಂಗ್ರೆಸ್‌ನ ಸರ್ವಸದಸ್ಯ ಅಧಿವೇಶನಕ್ಕಾಗಿ ರಾಯಪುರಕ್ಕೆ ತೆರಳುತ್ತಿದ್ದರು. ಆ ವೇಳೆ ಅಸ್ಸಾಂ ಪೊಲೀಸರು ಅವರನ್ನು ಕೆಳಗಿಳಿಸಿ ಬಂಧಿಸಿದ್ದರು. ಅದೇ ದಿನ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

ಉತ್ತರ ಕ್ಯಾಚಾರ್ ಹಿಲ್ಸ್ ಸ್ವಾಯತ್ತ ಮಂಡಳಿಯ ಸದಸ್ಯ ಸ್ಯಾಮ್ಯುಯೆಲ್ ಚಾಂಗ್ಸನ್ ಅವರ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಖೇರಾ ಅವರ ಹೇಳಿಕೆಗಳು ”ಉನ್ನತ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯನ್ನು ಮಾನಹಾನಿ ಮತ್ತು ಅಪಖ್ಯಾತಿ ಮಾಡುವ ಮೂಲಕ ನಮ್ಮ ರಾಷ್ಟ್ರವನ್ನು ಕೀಳಾಗಿ ಮತ್ತು ಅಸ್ಥಿರಗೊಳಿಸುವ ವ್ಯಾಪಕ ಪಿತೂರಿಯ ಭಾಗವಾಗಿದೆ” ಎಂದು ಚಾಂಗ್ಸನ್ ಆರೋಪಿಸಿದ್ದಾರೆ.

ಸೋಮವಾರದ ವಿಚಾರಣೆಯಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಖೇರಾ ಅವರ ಮಧ್ಯಂತರ ಜಾಮೀನು ಮುಗಿದ ನಂತರ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...