Homeಮುಖಪುಟಉರಿಗೌಡ - ನಂಜೇಗೌಡ ಸುಳ್ಳು ಎಂದ ನಟ ಚೇತನ್ ಬಂಧನ: ವ್ಯಾಪಕ ಆಕ್ರೋಶ

ಉರಿಗೌಡ – ನಂಜೇಗೌಡ ಸುಳ್ಳು ಎಂದ ನಟ ಚೇತನ್ ಬಂಧನ: ವ್ಯಾಪಕ ಆಕ್ರೋಶ

- Advertisement -
- Advertisement -

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ, ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು ಎಂಬುದು ಸುಳ್ಳು ಎಂದು ಪೋಸ್ಟ್ ಹಾಕಿದ್ದಕ್ಕೆ ನಟ ಚೇತನ್‌ರವರನ್ನು ಬಂಧಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

“ಯಾವ ಆಯಾಮದಲ್ಲಿ ಈ ಪೋಸ್ಟ್ ಚೇತನ್‌ವರ ಬಂಧನಕ್ಕೆ ಕಾರಣವಾಗುತ್ತದೆ? ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುವವರ ಕತೆ ಇದು” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂಬ ಟ್ವೀಟ್ ಸಂಬಂಧಿಸಿ ಚೇತನ್ ಅಹಿಂಸಾ ಬಂಧನವಾಗಿದೆ. ಸಾಕಷ್ಟು ವಿಚಾರಗಳಲ್ಲಿ ಅವರ ಹೇಳಿಕೆಗಳ ಬಗ್ಗೆ ನನಗೆ ಭಿನ್ನಾಭಿಪ್ರಾಯವಿದೆ. ಆದರೆ ಈ ರೀತಿಯ ವಾಕ್ ಸ್ವಾತಂತ್ರ್ಯ ಕಸಿಯುವ ಬಂಧನಗಳನ್ನು ಖಂಡಿಸುತ್ತೇನೆ. ಚೇತನ್ ಹಿಂದುತ್ವದ ವಿಚಾರದಲ್ಲಿ ಮಾಡಿರುವ ಈ ಟ್ವೀಟ್ ಸಂಪೂರ್ಣ ಸತ್ಯದಿಂದ ಕೂಡಿದೆ. ಇದಕ್ಕೆ ನನ್ನ ಬೆಂಬಲವಿದೆ” ಎಂದು ಸಾಮಾಜಿಕ ಕಾರ್ಯಕರ್ತರಾದ ಭಾಗ್ಯ ನಾರಾಯಣರವರು ಬರೆದಿದ್ದಾರೆ.

ನಟ, ಸಾಮಾಜಿಕ ಹೋರಾಟಗಾರರು ಆದ Chetan Ahimsa ಅವರನ್ನು ಬಂದಿಸಲಾಗಿದೆ. ಸುಳ್ಳಿನ ಮೇಲೆ ಕಟ್ಟಿದಂತ ಹಿಂದುತ್ವದ ವಿರುದ್ದ ಪೋಸ್ಟ್ ಹಾಕಿರುವುದಕ್ಕೆ ಚೇತನ್ ರವರು ಬಂದನವಾಗಿದ್ದಾರೆ. ಅವರ ಮಾತುಗಳು ಮತ್ತು ಹೇಳಿಕೆಗಳು ಯಾವುದೇ ಜಾತಿ ಧರ್ಮ ಹಾಗೂ ಒಂದು ಗುಂಪಿನ ವಿರೋಧವಾಗಿರುವುದಿಲ್ಲ. ಸತ್ಯತೆ ಮತ್ತು ಹೇಳಿಕೆಯ ಸಾಕ್ಷಿ ಆಧಾರದ ಮೇಲೆ ಕೂಡಿರುತ್ತದೆ. ಈ ರೀತಿ ನಡೆ ಪ್ರಜಾಪ್ರಭುತ್ವದ ಅಭಿವ್ಯಕ್ತಿ ಸ್ವಾತಂತ್ರದ ಹತ್ತಿಕ್ಕುವ ಕೆಲಸವಾಗುತ್ತದೆ. ಅವರ ಚಿಂತನೆಗಳು ಹೋರಾಟಗಳನ್ನು ಈ ಮೂಲಕ ಎಂದಿಗೂ ಕೊನೆಗಣಿಸಲು ಸಾಧ್ಯವಿಲ್ಲ. ಅವುಗಳ ಶಕ್ತಿ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಉನೈಸ್ ಉನ್ನಾಸ್ ಎಂಬುವವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಿಂದುತ್ವದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಕನ್ನಡದ ನಟ ಚೇತನ್ ಅಹಿಂಸಾರವರನ್ನು ಶೇಷಾದ್ರಿಪುರಂ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ

ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು

1992 ರಲ್ಲಿ : ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು

ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ -> ಇದು ಕೂಡ ಒಂದು ಸುಳ್ಳು

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ ಎಂದು ಚೇತನ್ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು
2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು

ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ. 2022ರ ಫೆಬ್ರವರಿಯಲ್ಲಿಯೂ ಸಹ ಹೈಕೋರ್ಟ್ ನ್ಯಾಯಾಧೀಶರ ತೀರ್ಪಿನ ಕುರಿತು ವರ್ಷಗಳ ಹಿಂದೆ ಚೇತನ್ ಟ್ವೀಟ್ ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ಚೇತನ್‌ರವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಆಧಾರವಿಲ್ಲದ ಉರಿಗೌಡ, ನಂಜೇಗೌಡರ ಕತೆಗಳಿಂದ ಸಮುದಾಯದ ಭಾವನೆಗೆ ಧಕ್ಕೆ: ನಿರ್ಮಲಾನಂದನಾಥ ಸ್ವಾಮೀಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...