Homeಕರ್ನಾಟಕನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

ನಟ ಚೇತನ್‌ಗೆ ಜಾಮೀನು; ಇಂದು ರಾತ್ರಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಕಲ್ಪಿತ ಇತಿಹಾಸ ಸೃಷ್ಟಿಗೆ ಕಾರಣವಾಗಿದ್ದ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಕುರಿತು ಉಲ್ಲೇಖಿಸುತ್ತಾ, ‘ಹಿಂದುತ್ವವನ್ನು ಸುಳ್ಳಿನ ಮೇಲೆ ಕಟ್ಟಲಾಗಿದೆ’ ಎಂದು ಪೋಸ್ಟ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಅವರಿಗೆ ಇಂದು (ಗುರುವಾರ) ಜಾಮೀನು ದೊರೆತಿದೆ.

ಬೆಂಗಳೂರು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಸುನಿಲ್ ಗುನ್ನಾಪುರ ಮತ್ತು ವಕೀಲರ ತಂಡ ಚೇತನ್‌ ಪರವಾಗಿ ವಾದ ಮಂಡಿಸಿದ್ದಾರೆ.

“ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು, ಇಂದು ರಾತ್ರಿ ಚೇತನ್‌ ಅವರು ಬಿಡುಗಡೆಯಾಗುವ ಸಾಧ್ಯತೆ ಇದೆ” ಎಂದು ಮೂಲಗಳು ತಿಳಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದರು. ಬಳಿಕ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಚೇತನ್‌ ಅವರನ್ನು ಒಪ್ಪಿಸಲಾಗಿತ್ತು.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಚೇತನ್‌ ಪೋಸ್ಟ್‌ ಮಾಡಿದ್ದೇನು?

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು. 1992ರಲ್ಲಿ: ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು. ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ – ಇದು ಕೂಡ ಒಂದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತೆ” ಎಂದು ಚೇತನ್‌ ಪೋಸ್ಟ್ ಮಾಡಿದ್ದರು.

ಮತ್ತೊಂದು ಪೋಸ್ಟ್‌ನಲ್ಲಿ “ಉರಿಗೌಡ ಮತ್ತು ನಂಜೇಗೌಡರ ಸೃಷ್ಟಿ ಮತ್ತು ಚಿತ್ರಣವನ್ನು ಒಕ್ಕಲಿಗರ ಸಂಘ ವಿರೋಧಿಸುತ್ತದೆ. 2 ಕಾರಣಗಳು : 1. ಸ್ವಾತಂತ್ರ್ಯ ಹೋರಾಟಗಾರನನ್ನು (ಟಿಪ್ಪು) ಕೊಂದ ಖಳನಾಯಕರಾಗಲು ಬಯಸುವುದಿಲ್ಲ; 2. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ವೈಮನಸ್ಸು ಸೃಷ್ಟಿಸಲು ಬಯಸುವುದಿಲ್ಲ
ಒಕ್ಕಲಿಗ ಲಾಬಿಗಳು ಜಾತಿ ಆಧಾರಿತ ವೋಟ್ ಬ್ಯಾಂಕ್ ಅನ್ನು ಹಿಂದುತ್ವಕ್ಕೆ ಕಳೆದುಕೊಳ್ಳಲು ಬಯಸದಿರುವುದು ಚುನಾವಣಾದಲ್ಲಿ ಕೂಡ ಒಂದು ಮುಖ್ಯ ಕಾರಣವಾಗಿದೆ” ಎಂದು ಚೇತನ್ ಬರೆದಿದ್ದರು.

ಮೂರನೇಯದಾಗಿ, “20 ಮಾರ್ಚ್ 1927 ರಲ್ಲಿ, ಬಾಬಾಸಾಹೇಬ್ ಮತ್ತು ಸಾವಿರಾರು ದಲಿತರು ಮಹಾಡ್ ನಗರದ ಚೌಡರ್ ಕೆರೆಯಲ್ಲಿ ನೀರು ಕುಡಿದರು. ಅಸ್ಪೃಶ್ಯರು ಬ್ರಾಹ್ಮಣ್ಯದ ಅಡಿಯಲ್ಲಿ ಸಾರ್ವಜನಿಕವಾಗಿ ನೀರಿನಿಂದ ವಂಚಿತರಾಗುವುದನ್ನು ಅವರೆಲ್ಲರು ವಿರೋಧಿಸಿದರು. 2023 ಕರ್ನಾಟಕದಲ್ಲಿ, ನಾವು ಮಹಾಡ್ ಸತ್ಯಾಗ್ರಹದಲ್ಲಿ ಪ್ರದರ್ಶಿಸಿದ ಸೈದ್ಧಾಂತಿಕ ಸಮಾನತೆಯು, ನಮ್ಮ ಅತ್ಯಂತ ಹಿಂದುಳಿದವರ ಬಗ್ಗೆ ಕಾಳಜಿ, ಮತ್ತು ನಿಸ್ವಾರ್ಥ ಧೈರ್ಯವನ್ನು ನಾವು ಪುನರಾವರ್ತಿಸಬೇಕು” ಎಂಬ ಪೋಸ್ಟ್ ಹಾಕಿದ್ದರು. ಈ ಮೂರು ಪೋಸ್ಟ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಚೇತನ್‌ ಅವರ ಬಂಧನವು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗಿದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ವಕೀಲರಾದ ಜಿ.ಟಿ.ನರೇಂದ್ರಕುಮಾರ್‌ ಪ್ರತಿಕ್ರಿಯಿಸಿ, “ವ್ಯಕ್ತಿಯೊಬ್ಬನ ವಿರುದ್ಧ ದೂರು ನೀಡಿದಾಕ್ಷಣ ಪೊಲೀಸರು ಬಂಧಿಸುವುದು ಮತ್ತು ದಂಡಾಧಿಕಾರಿಗಳ ನ್ಯಾಯಾಲಯಗಳು ತಮ್ಮ ವಿವೇಚನಾಧಿಕಾರವನ್ನು ಬಳಸದೆ ಜೇಲಿಗಟ್ಟುವುದು- ಇವುಗಳಿಗೆ ಸುಪ್ರೀಂ ಕೋರ್ಟ್ ಅಂಕುಶ ಹಾಕಬೇಕು, ಸ್ಪಷ್ಟ ನಿರ್ದೇಶನಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಸಂವಿಧಾನಾತ್ಮಕವಾಗಿ ಭಾರತೀಯ ಪ್ರಜೆಗಳಿಗೆ ನೀಡಲಾಗಿರುವ ಅನೇಕ ಮೂಲಭೂತ ಹಕ್ಕುಗಳಿಗೆ ಬೆಲೆ ಇಲ್ಲದಂತಾಗಿ ಮತ್ತೆ 1975 – 77 ರ ನಡುವಿನ ತುರ್ತು ಪರಿಸ್ಥಿತಿಯತ್ತ ದೇಶ ಜಾರುವ ಆತಂಕವಿದೆ” ಎಂದು ಎಚ್ಚರಿಸಿದ್ದಾರೆ.

ಹಿರಿಯ ವಕೀಲರಾದ ಸಿ.ಎಸ್‌.ದ್ವಾರಕನಾಥ್‌ ಪ್ರತಿಕ್ರಿಯಿಸಿ, “ಚೇತನ್ ಹೇಳಿರುವುದರಲ್ಲಿ ಬಂಧಿಸುವಂತದ್ದು ಏನಿದೆ? ನಾನು ಎಫ್‌ಐಆರ್‌‌ ನೋಡಿದೆ, ಅದರಲ್ಲಿ ಏನೂ ಹುರುಳಿಲ್ಲ. ಇಂತದ್ದೇ ಕ್ಷುಲ್ಲಕ ಕಾರಣಗಳಿಗೆ ಬಂಧಿಸುವುದಾದರೆ ಇಡೀ ಕರ್ನಾಟಕವನ್ನೇ ಒಂದು ಬಂದೀಖಾನೆಯಾಗಿ ಪರಿವರ್ತಿಸಬೇಕಾಗುತ್ತದೆ” ಎಂದು ಟೀಕಿಸಿದ್ದಾರೆ.

ಮುಂದುವರಿದು, “ಇದು ಭಾರತ ಸಂವಿಧಾನದ ಅನುಚ್ಛೇದ 19(1)(a) ಅನ್ನ ಸ್ಪಷ್ಟವಾಗಿ ಉಲ್ಲಂಘಿಸಿದೆ. ಇಲ್ಲಿ ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ನಟ ಚೇತನ್ ಕುರಿತು ನಮ್ಮ ವ್ಯಕ್ತಿಗತ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ಆದರೆ ಈ‌ ಸಂದರ್ಭದಲ್ಲಿ ಎಲ್ಲಾ ಪ್ರಜಾಪ್ರಭುತ್ವವಾದಿಗಳು, ಸಂವಿಧಾನದಲ್ಲಿ ನಂಬಿಕೆಯಿರುವವರು ಚೇತನ್‌ ಜೊತೆಯಲ್ಲಿ ನಿಲ್ಲಬೇಕಿದೆ. ಸಂವಿಧಾನದ ಆಶಯಗಳನ್ನು‌ ಉಳಿಸಿಕೊಳ್ಳಬೇಕಿದೆ ಮತ್ತು ಸರ್ಕಾರದ ಸಂವಿಧಾನ ವಿರೋಧಿ ಪ್ಯಾಸಿಸಂ ಧೋರಣೆಯನ್ನು ಖಂಡಿಸಬೇಕಿದೆ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...