Homeಮುಖಪುಟಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

ಬೆಂಗಳೂರಿನ ಬಹುತೇಕ ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ: ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವದಂತಿಗೆ ತೆರೆ

- Advertisement -
- Advertisement -

ಸಚಿವರಾದ ವಿ.ಸೋಮಣ್ಣ ಮತ್ತು ಕೆ.ಸಿ ನಾರಾಯಣಗೌಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ ಇಂದು ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಮೂಲಕ ಸೋಮಣ್ಣನವರು ಕಾಂಗ್ರೆಸ್ ಸೇರುತ್ತಾರೆ ಎಂಬ ವಂದಂತಿಗೆ ತೆರೆ ಎಳೆದಿದೆ. ಆದರೆ ಕೆ.ಆರ್ ಪೇಟೆಯ ಟಿಕೆಟ್ ಘೋಷಣೆ ಮಾಡದೆ ಬಾಕಿ ಉಳಿಸಿಕೊಂಡಿದೆ.

ಇತ್ತೀಚೆಗೆ ಬಿಜೆಪಿಯೊಂದಿಗೆ ಮುನಿಸಿಕೊಂಡಿದ್ದ ವಿ.ಸೋಮಣ್ಣನವರು ವಿಜಯ ಸಂಕಲ್ಪ ಯಾತ್ರೆಯಿಂದ ಅರ್ಧಕ್ಕೆ ಹೊರನಡೆದಿದ್ದರು. ಅಲ್ಲದೆ ಚಾಮರಾಜನಗರದಲ್ಲಿನ ಬಿಜೆಪಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಹಾಗಾಗಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳು ಹರಡಿದ್ದವು. ಅವರು ತಮಗೆ ಮತ್ತು ತಮ್ಮ ಪುತ್ರ ಅರುಣ್ ಸೋಮಣ್ಣ ಇಬ್ಬರಿಗೂ ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತಿದ್ದಾರೆ ಎನ್ನಲಾಗಿತ್ತು. ಆದರೆ ಸೋಮಣ್ಣನವರು ಪ್ರತಿನಿಧಿಸುವ ಗೋವಿಂದರಾಜನಗರ, ಅವರ ಮಗ ಬಯಸಿದ್ದ ರಾಜಾಜಿನಗರ ಅಥವಾ ಹನೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಇಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಲ್ಲಿಗೆ ಸೋಮಣ್ಣನವರು ಕಾಂಗ್ರೆಸ್ ಸೇರುವ ಚರ್ಚೆ ಕೊನೆಗೊಂಡಿದೆ.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಶಾಸಕ ಪ್ರಿಯಾಕೃಷ್ಣರವರ ಹೆಸರನ್ನು ಅಂತಿಮಗೊಳಿಸಿದೆ. ರಾಜಾಜಿನಗರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪುಟ್ಟಣ್ಣನವರನ್ನು ಅಭ್ಯರ್ಥಿಯನ್ನಾಗಿ ಮಾಡಿದೆ. ಅಲ್ಲದೆ ಹನೂರು ಕ್ಷೇತ್ರಕ್ಕೆ ಆರ್‌.ನರೇಂದ್ರ ಮತ್ತು ಚಾಮರಾಜನಗರ ಕ್ಷೇತ್ರಕ್ಕೆ ಸಿ.ಪುಟ್ಟರಂಗಶೆಟ್ಟಿಯವರ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.

ಇನ್ನು ಕೆ.ಆರ್‌ ಪೇಟೆ ಶಾಸಕರಾಗಿರುವ ಸಚಿವ ನಾರಾಯಣ ಗೌಡರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿತ್ತು. ಆದರೆ ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳಲು ಕಾರ್ಯಕರ್ತರು ಬಿಟ್ಟಿಲ್ಲ. ಅಲ್ಲದೆ ಅಲ್ಲಿ ಜೆಡಿಎಸ್ ಟಿಕೆಟ್ ವಂಚಿತ ಬಿ.ಎಲ್ ದೇವರಾಜುರವರು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದೆ. ಈ ನಡುವೆ ಬಿ.ಎಸ್ ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಅವರು ಪಕ್ಷ ತ್ಯಜಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...