Homeಮುಖಪುಟಇನ್ನೂ ಪತ್ತೆಯಾಗದ ಖಲಿಸ್ತಾನಿ ಹೋರಾಟಗಾರ ಅಮೃತಪಾಲ್ ಸಿಂಗ್‌; 10 ಸಹಚರರಿಗೆ ನ್ಯಾಯಾಂಗ ಬಂಧನ

ಇನ್ನೂ ಪತ್ತೆಯಾಗದ ಖಲಿಸ್ತಾನಿ ಹೋರಾಟಗಾರ ಅಮೃತಪಾಲ್ ಸಿಂಗ್‌; 10 ಸಹಚರರಿಗೆ ನ್ಯಾಯಾಂಗ ಬಂಧನ

- Advertisement -
- Advertisement -

ಪಂಜಾಬ್‌ನಲ್ಲಿ ನಡೆಯುತ್ತಿರುವ ಖಲಿಸ್ತಾನಿ ಬೆಂಬಲಿಗರು ಮತ್ತು ಪೊಲೀಸರ ನಡುವಿನ ಘರ್ಷಣೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್‌ನ ಅಜ್ನಾಲಾ ನ್ಯಾಯಾಲಯ ಶನಿವಾರ ಅಮೃತಪಾಲ್ ಸಿಂಗ್ ಅವರ 10 ಸಹಚರರನ್ನು ಏಪ್ರಿಲ್ 6 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಮತ್ತೊಬ್ಬ ಆರೋಪಿ ಸುಖಪ್ರೀತ್ ಸಿಂಗ್‌ನನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ 10 ಜನರು, ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ವಾರಿಸ್ ಪಂಜಾಬ್ ದೇ ತಂಡದ ಸದಸ್ಯರನ್ನು ಬಿಡಿಸಲು ಫೆಬ್ರವರಿಯಲ್ಲಿ ಅಜ್ನಾಲಾ ಪೊಲೀಸ್ ಠಾಣೆಯೊಳಗೆ ನುಗ್ಗಿ ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು ಎನ್ನುವ ಆರೋಪ ಹೊತ್ತಿದ್ದಾರೆ.

ಫೆಬ್ರವರಿ 23 ರಂದು, ಅಮೃತಪಾಲ್ ಸಿಂಗ್ ಅವರ ಸಾವಿರಾರು ಬೆಂಬಲಿಗರು ಕತ್ತಿಗಳು ಮತ್ತು ಬಂದೂಕುಗಳೊಂದಿಗೆ ಅಜ್ನಾಲಾ ಪೊಲೀಸ್ ಠಾಣೆಗೆ ಪ್ರವೇಶಿಸಿದರು ಮತ್ತು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮತ್ತು ಅಪಹರಣದ ಆರೋಪದಲ್ಲಿ ಬಂಧಿಸಲ್ಪಟ್ಟ ಲವ್ಪ್ರೀತ್ ತೂಫಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸರಿಗೆ ಬೆದರಿಕೆ ಹಾಕಿದ್ದರು.

ಬೆಂಬಲಿಗರು ಕತ್ತಿ, ಬಂದೂಕು ಝಳಪಿಸುತ್ತಾ ಪೊಲೀಸ್ ಠಾಣೆಯ ಹೊರಗೆ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದಾಟಿ ಒಳ ನುಗ್ಗಿದ್ದರು. ಈ ಘಟನೆಯ ಕುರಿತು ವಾರಿಸ್ ಪಂಜಾಬ್ ದೇ ಸದಸ್ಯರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಅಜ್ನಾಲಾ ನ್ಯಾಯಾಲಯ ಇಂದು ಅವರಲ್ಲಿ 10 ಜನರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಈ ನಡುವೆ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಒಂದು ವಾರ ಕಳೆಯುತ್ತಿದ್ದರೂ ಪೊಲೀಸರಿಗೆ ಪತ್ತೆಯಾಗಿಲ್ಲ. ದೇಶ ಬಿಟ್ಟು ಹೋಗುತ್ತಾನೆ ಎಂದು ಹೇಳಲಾಗಿತ್ತು. ಹಾಗಾಗಿ ಭಾರತ-ನೇಪಾಳ ಗಡಿಯಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.

ಮತ್ತೊಂದಡೆ, ಅಮೃತಪಾಲ್ ಅವರು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ದೆಹಲಿ ಮತ್ತು ಅದರ ಗಡಿಯಲ್ಲಿ ದೆಹಲಿ ಪೊಲೀಸರು ಮತ್ತು ಪಂಜಾಬ್ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...