ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ”ಗಾಂಧಿ ತತ್ವಕ್ಕೆ ಎಸಗಿದ ದ್ರೋಹ” ಎಂದು ಭಾರತ ಮೂಲದ ಅಮೆರಿಕದ ಕಾಂಗ್ರೆಸ್ ಸದಸ್ಯ ರೋ ಖನ್ನಾ ಹೇಳಿದ್ದಾರೆ.
‘ಮೋದಿ ಸರ್‌ನೇಮ್’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ 24 ಗಂಟೆಯೊಳಗೆ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ.
”ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರಹಾಕಿರುವುದು ಗಾಂಧಿ ತತ್ವಗಳಿಗೆ ಮತ್ತು ಭಾರತದ ಮೌಲ್ಯಗಳಿಗೆ ಎಸಗಿದ ದೊಡ್ಡ ದ್ರೋಹವಾಗಿದೆ” ಎಂದು ರೋ ಖನ್ನಾ ಟ್ವೀಟ್ ಮಾಡಿದ್ದಾರೆ. ರೋ ಖನ್ನಾ ಅವರು ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಸಿಲಿಕಾನ್ ವ್ಯಾಲಿಯನ್ನು ಪ್ರತಿನಿಧಿಸುತ್ತಿದ್ದಾರೆ.
The expulsion of Rahul Gandhi from parliament is a deep betrayal of Gandhian philosophy and India’s deepest values. This is not what my grandfather sacrificed years in jail for. @narendramodi you have the power to reverse this decision for the the sake of Indian democracy. https://t.co/h85qlYMn1J
— Ro Khanna (@RoKhanna) March 24, 2023
”ನನ್ನ ಅಜ್ಜ (ಮಹಾತ್ಮ ಗಾಂಧಿ) ಹಲವು ವರ್ಷಗಳ ಕಾಲ ಜೈಲಿನಲ್ಲಿ ಇದ್ದದ್ದು, ತ್ಯಾಗ ಮಾಡಿದ್ದು ಇದಕ್ಕಾಗಿ ಅಲ್ಲ” ಎಂದು ಖನ್ನಾ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಲೋಕಸಭೆ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿರುವ ಖನ್ನಾ, ”ಭಾರತೀಯ ಪ್ರಜಾಪ್ರಭುತ್ವದ ಪರವಾಗಿ ನಿರ್ಧಾರ ಹಿಂತೆಗೆದುಕೊಳ್ಳುವ ಶಕ್ತಿ ನಿಮಗೆ ಇದೆ” ಎಂದು ತಿಳಿಸಿದ್ದಾರೆ.
ಭಾರತ ಸರ್ಕಾರದ ನಡೆಯನ್ನು ಖಂಡಿಸಿರುವ ಅಮೆರಿಕದ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್‌ನ ಉಪಾಧ್ಯಕ್ಷ ಜಾರ್ಜ್ ಅಬ್ರಹಾಂ ಅವರು, ”ಇದು ಭಾರತದ ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವ ಮೂಲಕ, ಮೋದಿ ಸರ್ಕಾರವು ಎಲ್ಲೆಡೆ ಭಾರತೀಯರ ವಾಕ್ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
— George Abraham (@geolona) March 25, 2023
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲ್ಕು ಬಾರಿ ಲೋಕಸಭೆ ಸಂಸದರಾಗಿ ಆಯ್ಕೆಯಾಗಿದ್ದರು.
ಪ್ರಧಾನಿ ಮೋದಿ ಬಗ್ಗೆ ರಾಹುಲ್ ಗಾಂಧಿ ಹೇಳಿದ್ದೇನು?
‘ಮೋದಿ’ ಎಂಬ ಸರ್‌ನೇಮ್ (ಉಪನಾಮ) ಬಳಸಿದ್ದಕ್ಕಾಗಿ 2019ರಲ್ಲಿ ರಾಹುಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ದೂರು ನೀಡಿದ್ದರು. ಕರ್ನಾಟಕದಲ್ಲಿ ಚುನಾವಣಾ ಪೂರ್ವ ರ್‍ಯಾಲಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ”ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಸಾಮಾನ್ಯವಾಗಿ ಇರುವುದು ಹೇಗೆ?” ಎಂದು ಪ್ರಶ್ನಿಸಿದ್ದರು. ಇದು ವಿವಾದಕ್ಕೆ ಗುರಿಯಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್‌ನ ಮುಖ್ಯ ನ್ಯಾಯಾಂಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷ ಸಜೆ ನೀಡಿರುವ ಕಾರಣ ಅವರ ಲೋಕಸಭಾ ಸದಸ್ಯತ್ವ ರದ್ದಾಗಿದೆ ಎಂದು ಲೋಕಸಭಾ ಕಾರ್ಯಾಲಯವು ಅಧಿ ಸೂಚನೆಯಲ್ಲಿ ತಿಳಿಸಿದೆ. ತೀರ್ಪು ಪ್ರಕಟವಾದ 2023ರ ಮಾರ್ಚ್ 23ರಿಂದಲೇ ಅನರ್ಹತೆ ಅನ್ವಯ ಎಂದೂ ಹೇಳಲಾಗಿದೆ.
ಉನ್ನತ ನ್ಯಾಯಾಲಯವು ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆ ನೀಡದೇ ಇದ್ದರೆ, ರಾಹುಲ್ ಅವರು ಮುಂದಿನ ಎಂಟು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.



Govt taken wrong decision