Homeಮುಖಪುಟಜಿಎಸ್‌ಟಿ ಬೆಂಬಲಿಸಿದ್ದು ನಾವು ಮಾಡಿದ ದೊಡ್ಡ ತಪ್ಪು: ಮಮತಾ ಬ್ಯಾನರ್ಜಿ

ಜಿಎಸ್‌ಟಿ ಬೆಂಬಲಿಸಿದ್ದು ನಾವು ಮಾಡಿದ ದೊಡ್ಡ ತಪ್ಪು: ಮಮತಾ ಬ್ಯಾನರ್ಜಿ

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಂಗೀಕಾರವನ್ನು ಬೆಂಬಲಿಸುವ ನಿರ್ಧಾರವು ನಾವು ಮಾಡಿದ ದೊಡ್ಡ ತಪ್ಪು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ವಾಗ್ದಾಳಿ ನಡೆಸಿದರು.

”ಜಿಎಸ್‌ಟಿ ಬಂದರೆ ಎಲ್ಲ ರಾಜ್ಯಗಳಿಗೂ ಲಾಭವಾಗಬಹುದು ಎಂದು ಅದನ್ನು ಬೆಂಬಲಿಸಿದ್ದೆವು ಆದರೆ ಕೇಂದ್ರವು ಎಲ್ಲ ಹಣವನ್ನು ಕಸಿದುಕೊಳ್ಳುತ್ತಿದೆ. ಈಗ ಅವರು ಕೇಂದ್ರದಿಂದ ರಾಜ್ಯಗಳಿಗೆ ಬರಬೇಕಿದ್ದ ಎಲ್ಲಾ ಹಣವನ್ನು ಸ್ಥಗಿತಗೊಳಿಸಿದ್ದಾರೆ” ಎಂದು ಹೇಳಿದರು.

ಹಣಕಾಸು ಆಯೋಗವು ನಿರ್ಧರಿಸಿದ ಸೂತ್ರದ ಆಧಾರದ ಮೇಲೆ ಕೇಂದ್ರವು ರಾಜ್ಯಗಳಿಗೆ ಹಣವನ್ನು ವಿತರಿಸಬೇಕು. ಕೇಂದ್ರವು ಸಂಗ್ರಹಿಸುವ ಎಲ್ಲಾ ತೆರಿಗೆಗಳಲ್ಲಿ ಶೇಕಡಾ 41ರಷ್ಟು ಹಣವನ್ನು ರಾಜ್ಯಗಳಿಗೆ ನೀಡಬೇಕು ಎಂದು ಆಯೋಗವು ನಿರ್ಧರಿಸಿತ್ತು.

ಇದನ್ನೂ ಓದಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

22 ಜಿಲ್ಲೆಗಳ 30,000 ಹಳ್ಳಿಗಳಲ್ಲಿ ಮುಂದಿನ ಐದು ತಿಂಗಳಲ್ಲಿ 12,000 ಕಿಲೋಮೀಟರ್‌ಗಿಂತಲೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ದುರಸ್ತಿ ಮಾಡುವ ಮತ್ತು ನಿರ್ಮಿಸುವ ಗುರಿ ಹೊಂದಿರುವ ಸರ್ಕಾರದ ಪಥಶ್ರೀ-ರಸ್ತೆಶ್ರೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಅವರು ಮಾತನಾಡಿದ್ದಾರೆ.

2024ರ ಲೋಕಸಭಾ ಚುನಾವಣೆಗೆ ಮುನ್ನ ಮುಂದಿನ ತಿಂಗಳು ರಾಜ್ಯದಲ್ಲಿ ಪಂಚಾಯತ್ ಚುನಾವಣೆಯ ನಡೆಯಲಿದೆ. ಇದು ಎಲ್ಲಾ ರಾಜಕೀಯ ಪಕ್ಷಗಳಿಗೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ. ಮುಖ್ಯಮಂತ್ರಿಗಳ ಕಚೇರಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮಗಳ ಸಂದರ್ಭದಲ್ಲಿ, ಹಳ್ಳಿಗಳ ರಸ್ತೆಗಳು ಕಳಪೆಯಾಗಿವೆ ಎನ್ನುವ ದೂರುಗಳೇ ಹೆಚ್ಚಾಗಿ ಬಂದಿವೆ.

ಹಾಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಕೇಂದ್ರದ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಾರ್ಚ್ 29ರಿಂದ ಮಾರ್ಚ್ 30ರ ಸಂಜೆಯವರೆಗೆ ಕೋಲ್ಕತ್ತಾದ ಬಿಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಧರಣಿ ಪ್ರತಿಭಟನೆ ನಡೆಸುವುದಾಗಿ ಬ್ಯಾನರ್ಜಿ ಘೋಷಿಸಿದ್ದಾರೆ.

ಬುಧವಾರದಿಂದ ಧರಣಿ ಸತ್ಯಾಗ್ರಹ ನಡೆಸುತ್ತೇನೆ. ಕೇಂದ್ರದಿಂದ ಹಣ ಬಿಡುಗಡೆ ಮಾಡಬೇಕು. ಪ್ರಜಾಪ್ರಭುತ್ವವನ್ನು ಏಕೆ ಹತ್ತಿಕ್ಕಲಾಗುತ್ತಿದೆ ಎಂಬುದಕ್ಕೂ ಅವರು ಉತ್ತರಿಸಬೇಕಾಗಿದೆ ಎಂದು ಅವರು ಹೇಳಿದರು.

ಜುಲೈ 1, 2017 ರಂದು GST ಪ್ರಾರಂಭಿಸಲಾಯಿತು. ಆಗ ತೃಣಮೂಲ ಕಾಂಗ್ರೆಸ್ ಈ ಹೊಸ ತೆರಿಗೆ ಪದ್ಧತಿಯ ಪರಿಚಯವನ್ನು ಬೆಂಬಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...