Homeಮುಖಪುಟಬುಡಕಟ್ಟು ಸಮುದಾಯ ಎನ್ನುವ ಕಾರಣಕ್ಕೆ ಚಿತ್ರಮಂದಿರ ಪ್ರವೇಶ ನಿರಾಕರಣೆ: ಆರೋಪ

ಬುಡಕಟ್ಟು ಸಮುದಾಯ ಎನ್ನುವ ಕಾರಣಕ್ಕೆ ಚಿತ್ರಮಂದಿರ ಪ್ರವೇಶ ನಿರಾಕರಣೆ: ಆರೋಪ

- Advertisement -
- Advertisement -

ಬುಡಕಟ್ಟು ಸಮುದಾಯ ಸೇರಿದ ಕುಟುಂಬ ಎನ್ನುವ ಕಾರಣಕ್ಕೆ ಟಿಕೆಟ್‌ ಖರೀದಿ ಮಾಡಿದ್ದರೂ ಕೂಡ ಅವರಿಗೆ ಚಿತ್ರಮಂದಿರಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಇದೀಗ ವಿವಾದಕ್ಕೀಡಾಗಿದೆ. ಈ ಘಟನೆ ಚೆನೈನಲ್ಲಿ ನಡೆದಿದೆ.

ಈ ವಿಚಾರವಾಗಿ ಗುರುವಾರ ಚೆನೈನಲ್ಲಿ ಗಲಾಟೆ ಭುಗಿಲೆದ್ದಿತು, ಅಲ್ಲಿಯ ಜನ ಪ್ರಶ್ನೆ ಮಾಡಿದಾಗಲೂ ಚಿತ್ರಮಂದಿರದ ಆಡಳಿತ ಮಂಡಳಿಯು ಸೆನ್ಸಾರ್ ನಿಯಮಗಳಿಗೆ ಬದ್ಧವಾಗಿದೆ ಎಂದು ಹೇಳಿತು.

ಘಟನೆ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಟ್ವಿಟ್ಟರ್‌ನಲ್ಲಿ ಅನೇಕರು ಚಿತ್ರಮಂದಿರದ ವಿರುದ್ಧ ಟ್ವೀಟ್ ಮಾಡಿ ಪ್ರಶ್ನೆ ಮಾಡಿದರು. ”ಆ ಕುಟುಂಬ ನಿರ್ದಿಷ್ಟ ನರಿಕುರವರ್ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಅವರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆಯೇ?” ಎಂದು ಅನೇಕರು ಕೇಳಿದರು. ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರಮಂದಿರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಯಿತು.

ಆ ನಂತರ ಥಿಯೇಟರ್ ಆಡಳಿತವು ಸಿಲ್ಮಬರಸನ್ ನಟಿಸಿದ ಹೊಸದಾಗಿ ಬಿಡುಗಡೆಯಾದ ತಮಿಳು ಚಿತ್ರ ”ಪಾತು ಥಾಲಾ”ವನ್ನು ವೀಕ್ಷಿಸಲು ಎಲ್ಲರಿಗೂ ಅವಕಾಶ ಮಾಡಿಕೊಟ್ಟಿತು.

ಆ ಕುಟುಂಬಕ್ಕೆ ಚಿತ್ರಮಂದಿರ ಪ್ರವೇಶಕ್ಕೆ ಅವಕಾಶ ನೀಡಲು ಅಲ್ಲಿನ ಸಿಬ್ಬಂದಿ ನಿರಾಕರಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಎಲ್ಲೆಡೆ ಆಕ್ರೋಶಕ್ಕೆ ವ್ಯಕ್ತವಾಗುತ್ತಿದೆ. ಆ ವಿಡಿಯೋದಲ್ಲಿ ಕೆಲವರು, ಆ ಕುಟುಂಬ ಸದಸ್ಯರನ್ನು ಒಳ ಹೋಗಲು ಅನುಮತಿಸಿ ಎಂದು ಸಿಬ್ಬಂದಿಗೆ ಹೇಳುತ್ತಿರುವುದು ಕೇಳಿಸುತ್ತದೆ.

ಆ ಬಳಿಕ ಘಟನೆ ಕುರಿತು ರೋಹಿಣಿ ಸಿಲ್ವರ್‌ ಸ್ಕ್ರೀನ್ಸ್‌ ಥಿಯೇಟರ್ ಸ್ಪಷ್ಟಣೆ ನೀಡಿದ್ದು, ”ಈ ಘಟನೆ ಪರಾಮರ್ಶಿಸಲಾಗುತ್ತಿದೆ. ಈ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಕಾನೂನಿನ ಅನುಸಾರ 12 ವರ್ಷ ಕೆಳಗಿನ ಮಕ್ಕಳಿಗೆ ಈ ಚಿತ್ರ ವೀಕ್ಷಿಸಲು ಅನುಮತಿಸಲು ಸಾಧ್ಯವಿಲ್ಲ. ಈ ನಿರ್ದಿಷ್ಟ ಕುಟುಂಬದವರು ತನ್ನ 2, 6, 8 ಹಾಗೂ 10 ವರ್ಷದ ಮಕ್ಕಳೊಂದಿಗೆ ಬಂದಿದ್ದರು. ಆದರೆ ಅಲ್ಲಿದ್ದ ಜನರು ಆಕ್ರೋಶ ವ್ಯಕ್ತಪಡಿಸಿ ಇದಕ್ಕೆ ಬೇರೆಯೇ ಅರ್ಥ ಕಲ್ಪಿಸಿದ್ದರಿಂದ ಸಮಸ್ಯೆ ತಪ್ಪಿಸಲು ಇಡೀ ಕುಟುಂಬಕ್ಕೆ ಚಿತ್ರ ವೀಕ್ಷಿಸಲು ಅನುಮತಿಸಲಾಯಿತು” ಎಂದು ಚಿತ್ರಮಂದಿರದ ಆಡಳಿತ ಹೇಳಿದೆ.

ಆ ನಂತರ ಥಿಯೇಟರ್ ಮ್ಯಾನೇಜ್‌ಮೆಂಟ್, ಕುಟುಂಬವು ಚಲನಚಿತ್ರವನ್ನು ಆನಂದದಿಂದ ವೀಕ್ಷಿಸುವ ವೀಡಿಯೋವನ್ನೂ ಬಿಡುಗಡೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...