Homeಕರ್ನಾಟಕಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜು: ಟೋಲ್ ಹೆಚ್ಚಳಕ್ಕೆ ಜೆಡಿಎಸ್ ಕಿಡಿ

ಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜು: ಟೋಲ್ ಹೆಚ್ಚಳಕ್ಕೆ ಜೆಡಿಎಸ್ ಕಿಡಿ

- Advertisement -
- Advertisement -

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಹೆಚ್ಚಳಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜಾಗಿದೆ ಎಂದು ಕಿಡಿಕಾರಿದೆ.

ಈ ಕುರಿತು ಪಕ್ಷದ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ್ದು, “ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಉದ್ಘಾಟನೆ ಆಗಿ ಕೇವಲ ಹದಿನೇಳು ದಿನವೂ ಆಗಿಲ್ಲ, ಆಗಲೇ ಟೋಲ್ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಕಾರು, ಜೀಪು, ವ್ಯಾನುಗಳ ಏಕಮುಖ ಸಂಚಾರಕ್ಕೆ ಈ ಹಿಂದೆ ಇದ್ದ 135 ರೂ. ಶುಲ್ಕವನ್ನು‌ 165 ರೂ.ಗಳಿಗೆ ಏರಿಸಲಾಗಿದೆ. ಲೂಟಿ ಹೊಡೆಯಲು ರಾಷ್ಟ್ರೀಯ ಹೆದ್ದಾರಿ ‌ಪ್ರಾಧಿಕಾರ ಸಜ್ಜಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಈ ಎಕ್ಸ್‌ಪ್ರೆಸ್‌ ಹೆದ್ದಾರಿ ಜಗತ್ತಿನ ಅತಿ ದೊಡ್ಡ ಸಾಧನೆ ಎಂದು ಬೀಗುತ್ತಿದ್ದ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈ ರೀತಿ ಮನಬಂದಂತೆ ಟೋಲ್ ಶುಲ್ಕ ಹೆಚ್ಚಳದ ಬಗ್ಗೆ ಮಾತೇ ಆಡುವುದಿಲ್ಲ. ಜನರ ತೆರಿಗೆ ಹಣದಲ್ಲಿ ರಸ್ತೆ ನಿರ್ಮಿಸಿ, ಜನರಿಂದಲೇ ಮಿತಿ ಇಲ್ಲದೆ ಟೋಲ್ ಶುಲ್ಕ ಪೀಕುವ ಕೊಳಕು ರಾಜಕಾರಣವಿದು ಎಂದು ಜೆಡಿಎಸ್ ಹೇಳಿದೆ.

ಜನಸಾಮಾನ್ಯರು ಬಳಸುವ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವಾಗ ಎಲ್ಲ ಲಘು ಹಾಗೂ ಭಾರಿ ವಾಹನಗಳ ಟೋಲ್ ಶುಲ್ಕ ಹೆಚ್ಚಿಸುವುದು ಯಾವ ಸೀಮೆಯ ನಿರ್ಧಾರ? ಮತ್ತೊಮ್ಮೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಲಿದೆ. ಇದು ಜನದ್ರೋಹಿಯಾದ ನಡೆ. ಈ ಡಬಲ್ ಎಂಜಿನ್ ಬಿಜೆಪಿ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಬಿಡದು ಎಂದು ಟ್ವೀಟ್‌ನಲ್ಲಿ ತಿಳಿಸಲಾಗಿದೆ.

ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಟೋಲ್ ಹೆಚ್ಚಳದ ಕುರಿತು ಟ್ರೋಲ್‌ಗಳು ಆರಂಭವಾಗಿವೆ. “ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹದಿನೇಳೇ ದಿನಕ್ಕೆ ಟೋಲ್ ದರ ಹೆಚ್ಚಳ..! ಇದಲ್ಲವೇ ನಿಜವಾದ ಬದಲಾವಣೆಯ ಸಾಧನೆ ಅನ್ನೋದು..? ವಾವ್ ಮೋದೀಜೀ ವಾವ್..!” ಎಂದು ದೀಪು ಗೌಡ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಮೈಸೂರು-ಬೆಂಗಳೂರು ರೋಡ್ ಮಾಡಿರೋದು ಜನರ ಅನುಕೂಲಕ್ಕಾಗಿ ಅನ್ನೋದು ಶುದ್ಧ ಸುಳ್ಳು, ಜನರಿಂದ ಸುಲಿಗೆ ಮಾಡೋದಷ್ಟೇ ಈ ಬಿಜೆಪಿ ಸರ್ಕಾರದ ಉದ್ದೇಶ. ರಸ್ತೆ ಉದ್ಘಾಟನೆಯಾದ 17 ದಿನದಲ್ಲಿ ಟೋಲ್ ಹೆಚ್ಚಳ ಮಾಡಿದ್ದಾರೆ ಅಂದರೇ ಇದು ಸುಲಿಗೆ ಅಲ್ಲದೇ ಇನ್ನೇನೂ ಅಲ್ಲ ಎಂದು ಪ್ರತಾಪ್ ಕಣಗಲ್ ಹೇಳಿದ್ದಾರೆ.

Service ರೋಡ್ ಕೊಡದೆ ಹೀಗೆ ಹಗಲು ದರೋಡೆ ನಡೆಸುತ್ತ ಇರೋದು ಎಷ್ಟು ಸರಿ ಎಂದು ಕೃಷ್ಣರವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಹೊರೆ: 15 ದಿನಗಳಲ್ಲೇ ಬೆಂಗಳೂರು-ಮೈಸೂರು ರಸ್ತೆ ಟೋಲ್ ದರ ಹೆಚ್ಚಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...