Homeಕರ್ನಾಟಕಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸುವಾಗ ಶಿಕ್ಷೆಗೊಳಗಾದ ಓಲೆಕಾರ್ ಅನರ್ಹವೇಕಿಲ್ಲ? ಹೈಕೋರ್ಟ್ ಪ್ರಶ್ನೆ

ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸುವಾಗ ಶಿಕ್ಷೆಗೊಳಗಾದ ಓಲೆಕಾರ್ ಅನರ್ಹವೇಕಿಲ್ಲ? ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸುವಾಗ ಶಿಕ್ಷೆಗೊಳಗಾದ ಬಿಜೆಪಿ ಶಾಸಕ ನೆಹರೂ ಓಲೆಕಾರ್‌ರವರನ್ನು ಏಕೆ ಅನರ್ಹಗೊಳಿಸಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪ್ರಶ್ನಿಸಿದೆ.

ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ಜನಪ್ರತಿನಿಧಿಗಳ ವಿಶೇ‍ಷ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆ ಆದೇಶಕ್ಕೆ ತಡೆ ನೀಡುವಂತೆ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ನ ಕೆ.ನಟರಾಜನ್‌ರವರ ಏಕಸದಸ್ಯ ಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ.

ಅಧೀನ ನ್ಯಾಯಾಲಯದ ಆದೇಶವು ದೋಷಪೂರಿತವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗಾಗಿ ಶಿಕ್ಷೆಗೆ ತಡೆ ನೀಡಿದೆ. ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪುಗಳ ಅನ್ವಯ ಶಾಸಕ ಒಲೆಕಾರ್‌ರವರು ದೋಷಿ ಎಂಬ ಅಧೀನ ನ್ಯಾಯಾಲಯದ ಆದೇಶವನ್ನು ರದ್ದುಪಡಿಸುವಂತೆ ಶಾಸಕರ ಪರ ವಕೀಲರು ವಾದ ಮಂಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರಾದ ಕೆ.ನಟರಾಜನ್‌ರವರು. ‘ಅರ್ಜಿದಾರರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆಯೇ’ ಎಂದು ಪ್ರಶ್ನಿಸಿತು. ಓಲೆಕಾರ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದಾಗ, “ಏಕೆ ಇನ್ನೂ ಅನರ್ಹಗೊಳಿಸಿಲ್ಲ? ಬೇರೆಯವರನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ?” ಎಂದು ಮರು ಪ್ರಶ್ನಿಸಿತು.

ಅದಕ್ಕೆ ಉತ್ತರಿಸಿದ ಓಲೆಕಾರ್ ಪರ ವಕೀಲರು, “ಶಾಸಕರನ್ನು ಅನರ್ಹಗೊಳಿಸುವ ಅಧಿಕಾರ ಸ್ಪೀಕರ್‌ರವರಿಗಿದೆ. ಆ ಕುರಿತು ಅವರು ತೀರ್ಮಾನ ಕೈಗೊಳ್ಳುತ್ತಾರೆ. ಆದರೆ, ದೋಷಿಯೆಂಬ ಅಧೀನ ನ್ಯಾಯಾಲಯದ ಆದೇಶ ದೋಷಪೂರಿತವಾಗಿರುವುದರಿಂದ ಅದನ್ನು ರದ್ದಗೊಳಿಸಬೇಕೆಂದು ಮನವಿ ಮಾಡಿದರು.

ಲೋಕಾಯುಕ್ತ ವಕೀಲರ್ ಆಕ್ಷೇಪ ವ್ಯಕ್ತಪಡಿಸಿದರು. ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣದಲ್ಲಿ 2 ವರ್ಷಗಳ ಕಾಲ ಶಿಕ್ಷೆಗೆ ಒಳಗಾದರೆ ಅವರು ತನ್ನಿಂದ ತಾನೇ ಅನರ್ಹಗೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶಾಸಕ ನೆಹರು ಓಲೆಕಾರ್ ಕ್ರಿಮಿನಲ್ ಪಿತೂರಿ ನಡೆಸಿರುವ ಸಾಕ್ಷ್ಯಾಧಾರಗಳಿವೆ. ಅದರ ಆಧಾರದಲ್ಲಿ ತೀರ್ಪು ನೀಡಲಾಗಿದೆ. ಆದ ಕಾರಣ ಅವರ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಬೇಕು ಎಂದು ವಾದಿಸಿದರು. ಪೀಠ ವಾದ-ವಿವಾದಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದೆ.

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ದಿನದಿಂದ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ ಎಂದು ಲೋಕಸಭಾ ಸೆಕ್ರೆಟರಿಯೇಟ್‌ ಪ್ರಕಟಣೆ ಹೊರಡಿಸಿದ್ದಾರೆ.  ಆದರೆ ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತ ಪ್ರಕರಣದಲ್ಲಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ಗೆ 2023ರ ಫೆಬ್ರುವರಿಯಲ್ಲಿ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆದರೂ ಈವರೆಗೆ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿಲ್ಲ. ಇದು ನೆಹರುಗೆ ಒಂದು ನ್ಯಾಯ, ಗಾಂಧಿಗೊಂದು ನ್ಯಾಯವೇ ಎನ್ನುವ ಪ್ರಶ್ನೆ ಎದ್ದಿತ್ತು. ಕರ್ನಾಟಕ ಹೈಕೋರ್ಟ್ ಸಹ ಅದೇ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಶಿಕ್ಷೆಗೊಳಗಾದ ಜನಪ್ರತಿನಿಧಿಗಳ ಸ್ಥಾನ ರದ್ದು: ಶಾಸಕ ನೆಹರು ಓಲೇಕಾರ್‌ಗೊಂದು ನ್ಯಾಯ, ರಾಹುಲ್‌ಗೊಂದು ನ್ಯಾಯವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...