Homeಮುಖಪುಟಸಂಜಯ್ ರಾವತ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ

ಸಂಜಯ್ ರಾವತ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ

- Advertisement -
- Advertisement -

ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸಂಸದ ಸಂಜಯ್ ರಾವತ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ರಾವತ್ ಅವರಿಗೆ ಜೀವ ಬೆದರಿಕೆ ಬಂದಿರುವ ಕುರಿತು ಶುಕ್ರವಾರ ರಾತ್ರಿಯೇ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪಂಜಾಬ್ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಪರವಾಗಿ ಸಂದೇಶ ಬಂದಿದೆ. ಈ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಬೆದರಿಕೆ ಸಂದೇಶದ ಕುರಿತು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ದೂರು ನೀಡಿದ ಬಳಿಕ ಪ್ರತಿಕ್ರಿಯಿಸಿದ ಸಂಜಯ್ ರಾವತ್ ಅವರು, ”ನಿನ್ನೆ ರಾತ್ರಿ ನನಗೆ ಕರೆ ಬಂದಿತ್ತು. ಬೆದರಿಕೆ ಕರೆ ಬಗ್ಗೆ ನಾನು ಪೊಲೀಸರಿಗೆ ತಿಳಿಸಿದ್ದೇನೆ, ಆದರೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಇಂತಹ ಬೆದರಿಕೆಗಳ ಬಗ್ಗೆ ನಾನು ಸರ್ಕಾರ ಮತ್ತು ಗೃಹ ಸಚಿವರಿಗೆ ತಿಳಿಸಿದಾಗ ಅವರು ಸ್ಟಂಟ್ ಮಾಡುತ್ತಿದಿದೀರಿ ಎಂದು ನನ್ನನ್ನು ಅಣಕಿಸುತ್ತಾರೆ. ಗಲಭೆ, ಗೂಂಡಾಗಿರಿ ಮತ್ತು ಭಯೋತ್ಪಾದನೆಯನ್ನು ಪ್ರಾಯೋಜಿಸುವಲ್ಲಿ ಸರ್ಕಾರ ನಿರತವಾಗಿದೆ” ಎಂದು ರಾವುತ್ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: ಚುನಾವಣಾ ಆಯೋಗದೊಂದಿಗೆ ₹ 2,000 ಕೋಟಿ ಡೀಲ್ ಮಾಡಿದ ಶಿಂಧೆ ಬಣ: ಸಂಜಯ್ ರಾವತ್ ಆರೋಪ

”ನನಗೆ ಈ ಹಿಂದೆಯೂ ಬೆದರಿಕೆ ಒಡ್ಡಲಾಗಿತ್ತು. ಆದರೆ, ಈ ವಿಷಯವನ್ನು ರಾಜ್ಯ ಗೃಹ ಸಚಿವರು ನಟನೆ ಎಂದು ಗೇಲಿ ಮಾಡಿದ್ದರು. ರಾಜ್ಯ ಸರ್ಕಾರವು ವಿರೋಧ ಪಕ್ಷದ ನಾಯಕರಿಗೆ ಭದ್ರತೆ ಒದಗಿಸುವ ಕುರಿತು ಗಂಭೀರವಾಗಿಲ್ಲ” ಎಂದು ರಾವತ್ ಅವರು ಆರೋಪಿಸಿದ್ದಾರೆ.

ಈ ಬೆದರಿಕೆಯಿಂದ ನಾನು ವಿಚಲಿತನಾಗಿಲ್ಲ ಮತ್ತು ನನ್ನ ಭದ್ರತೆಯನ್ನು ಹಿಂಪಡೆದಾಗ ನಾನು ಆ ಕುರಿತು ಯಾವುದೇ ಪತ್ರ ಬರೆದಿರಲಿಲ್ಲ ಎಂದೂ ಅವರು ಹೇಳಿದ್ದಾರೆ.

ಪಂಜಾಬ್ ಗಾಯಕ ಸಿಧು ಮೂಸೆವಾಲಾ ಹತ್ಯೆ ಹಿಂದಿನ ಸೂತ್ರಧಾರಿ ಎಂದು ಹೇಳಲಾಗಿರುವ ಲಾರೆನ್ಸ್ ಬಿಷ್ಣೋಯ್ ಕುಖ್ಯಾತ ಅಪರಾಧಿಯಾಗಿದ್ದು, ಆತ ಗಾಯಕ ಸಿಧು ಮೂಸೆವಾಲಾರ ತಂದೆ ಬಾಲ್‌ಕೌರ್ ಸಿಂಗ್ ಹಾಗೂ ಖ್ಯಾತ ನಟ ಸಲ್ಮಾನ್ ಖಾನ್‌ಗೂ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿದ್ದಾನೆ.

ಈ ಬಗ್ಗೆ ಮುಂಬೈ ಪೊಲೀಸರು ಮಾತನಾಡಿದ್ದು, ”ರಾವತ್ ಅವರು ನೀಡಿರುವ ಲಿಖಿತ ದೂರನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...