Homeಕರ್ನಾಟಕಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

- Advertisement -
- Advertisement -

“ಒಳಮೀಸಲಾತಿ ಜಾರಿಯಾಗಿದೆ ಎಂದು ಸುಳ್ಳು ಜಾಹೀರಾತು ನೀಡದಿರಿ” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ’ಯ ಪ್ರಧಾನ ಸಂಚಾಲಕ ಎಸ್.ಮಾರಪ್ಪ ಮನವಿ ಒತ್ತಾಯಿಸಿದ್ದಾರೆ.

ಜಸ್ಟಿಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಸಮಿತಿಯು ಕಳೆದ 111 ದಿನಗಳಿಂದ ಬೆಂಗಳೂರಿನ ಫ್ರೀಡಂಪಾರ್ಕ್‌‌ನಲ್ಲಿ ನಡೆಸುತ್ತಿದ್ದ ಹೋರಾಟವನ್ನು ಶನಿವಾರ ತಾತ್ಕಾಲಿಕವಾಗಿ ಕೈಬಿಡಲಾಯಿತು. ಸಮಾರೋಪ ಸಮಾರಂಭದ ವೇಳೆ ಮಾಧ್ಯಮಗಳೊಂದಿಗೆ ಮಾರಪ್ಪನವರು ಮಾತನಾಡಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಸರ್ಕಾರದ ನಿರ್ಣಯ ಗೊಂದಲದ ಗೂಡಾಗಿದೆ. ಇದನ್ನು ಬಗೆಹರಿಸಬೇಕಿದೆ. ಆದರೆ ಒಳ ಮೀಸಲಾತಿ ಈಗಾಗಲೇ ಜಾರಿಯಾಗಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡುವುದು ತಪ್ಪು” ಎಂದು ತಿಳಿಸಿದರು.

“ಒಳಮೀಸಲಾತಿ ಜಾರಿ ಮಾಡಿ ಸಾಮಾಜಿಕ ನ್ಯಾಯ ನೀಡಿದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಹಾಗೂ ಕೇಂದ್ರ ಸಚಿವರಾದ ಶ್ರೀ ಅಮಿತ್‌ ಶಾ ಜೀ ಮತ್ತು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಸಂಪುಟದ ಎಲ್ಲ ಸದಸ್ಯರಿಗೂ ಹಾಗೂ ಸಮುದಾಯದ ಮುಖಂಡರಿಗೂ ಹೃದಯಪೂರ್ವಕ ಧನ್ಯವಾದಗಳು” ಎಂಬ ಒಕ್ಕಣೆಯೊಂದಿಗೆ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಲಾಗುತ್ತಿದೆ. ‘ಮಾದಿಗ ಮಹಾಸಭಾ, ಬೆಂಗಳೂರು’ ಎಂಬ ಹೆಸರಲ್ಲಿ ಜಾಹೀರಾತು ಪ್ರಕಟವಾಗುತ್ತಿದೆ. ಜಾರಿಯೇ ಆಗದಿರುವ ಮೀಸಲಾತಿ ಹೆಚ್ಚಳದಲ್ಲಿ ಮೀಸಲಾತಿ ಹಂಚಿಕೆ ಮಾಡಿರುವುದು ಗೊಂದಲ ಸೃಷ್ಟಿಸಿದೆ. ಹೀಗಿರುವಾಗ ಬಿಜೆಪಿ ನಾಯಕರ ಫೋಟೋಗಳೊಂದಿಗೆ ಜಾಹೀರಾತನ್ನು ನೀಡುತ್ತಿರುವ ಕುರಿತು ವೇದಿಕೆ ಕಳವಳ ವ್ಯಕ್ತಪಡಿಸಿದೆ.

ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿರುವ ಜಾಹೀರಾತು

“ಈ ನಡೆ ತಪ್ಪು. ವಿಜಯೋತ್ಸವ ಆಚರಿಸಿಕೊಳ್ಳುವುದಕ್ಕೆ ತಕರಾರು ಇಲ್ಲ. ಆದರೆ ಒಳಮೀಸಲಾತಿ ಇನ್ನೂ ಜಾರಿಯಾಗಿಲ್ಲ. ವಿಜಯೋತ್ಸವ ಮಾಡಿಕೊಳ್ಳುವ ಸಮಯ ಇದಲ್ಲ. ನಮ್ಮ ಕೆಲಸ ಇನ್ನೂ ಇದೆ. ಏನೇ ಹೇಳಿದರೂ ಜನಾಂಗಕ್ಕೆ ಸತ್ಯವನ್ನೇ ಹೇಳಬೇಕು. ರಾಜಕೀಯ ಮೈಲೇಜ್‌ಗಾಗಿ ಸುಳ್ಳುಗಳನ್ನು ಹೇಳಬಾರದು. ಈಗ ಆಗಿರುವ ಬೆಳವಣಿಗೆಗಳಲ್ಲಿ ವಿಜಯೋತ್ಸವ ಆಚರಿಸಿಕೊಳ್ಳುವಂತಹದ್ದು ಏನೂ ಇಲ್ಲ” ಎಂದು ಮಾರಪ್ಪ ಎಚ್ಚರಿಸಿದರು.

“ಒಳಮೀಸಲಾತಿ ಜಾರಿಗೊಳಿಸುವ ನಿರ್ಧಾರವನ್ನು ಸ್ವಾಗತಿಸುತ್ತೇವೆ, ಆದರೆ ಮೀಸಲಾತಿ ವರ್ಗೀಕರಣವನ್ನು ಗೊಂದಲದ ಗೂಡಾಗಿಸಲಾಗಿದೆ. ಮೂಲ ಸಮುದಾಯಗಳನ್ನು ಶೈಕ್ಷಣಿಕ, ಸಾಮಾಜಿಕ ಹಿನ್ನೆಲೆಯಲ್ಲಿ ಗುಂಪುಗಳಾಗಿ ವರ್ಗೀಕರಿಸಬೇಕೇ ಹೊರತು, ತಮಗೆ ಬೇಕಾದಂತೆ ಪಲ್ಲಟ ಮಾಡಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ ಮಾಡಿರುವ ಆದೇಶದಲ್ಲಿ ಆದಿಕರ್ನಾಟಕ (ಎ.ಕೆ.) ಮತ್ತು ಆದಿದ್ರಾವಿಡ (ಎ.ಡಿ.) ವರ್ಗೀಕರಣ ಅವೈಜ್ಞಾನಿಕವಾಗಿದೆ. ನಿರ್ದಿಷ್ಟ ಸಮುದಾಯವೇ ಎ.ಕೆ. ಅಥವಾ ಎ.ಡಿ. ಎಂದು ತಿಳಿಸುವುದಕ್ಕೆ ಇವರೇನು ತಜ್ಞರಾ? ಸರ್ಕಾರ ನೇಮಿಸಿದ ಸಚಿವ ಸಂಪುಟ ಉಪಸಮಿತಿಯಲ್ಲಿ ಯಾರಾದರೂ ತಜ್ಞರು ಇದ್ದರಾ?” ಎಂದು ಪ್ರಶ್ನಿಸಿದರು.

“ಮೈಸೂರು ಭಾಗದಲ್ಲಿ ಹೊಲೆಯ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಎ.ಕೆ.ಯಲ್ಲಿದೆ, ಬೆಂಗಳೂರಿನಿಂದ ಕೊಪ್ಪಳದವರೆಗೂ ಮಾದಿಗರು ಎ.ಕೆ.ಯಲ್ಲಿದ್ದಾರೆ. ಒಂದಿಷ್ಟು ಭಾಗದಲ್ಲಿ ಎ.ಡಿ.ಯಲ್ಲಿ ಹೊಲೆಯರಿದ್ದರೆ, ಮತ್ತೊಂದಿಷ್ಟು ಭಾಗದಲ್ಲಿ ಮಾದಿಗರಿದ್ದಾರೆ. ಆದರೆ ಆದಿಕರ್ನಾಟಕದವರೆಲ್ಲ ಹೊಲೆಯರು, ಆದಿ ದ್ರಾವಿಡರೆಲ್ಲ ಮಾದಿಗರು ಎಂದು ಸರ್ಕಾರ ಅವೈಜ್ಞಾನಿಕವಾಗಿ ನಿಲುವು ತಾಳಿದೆ” ಎಂದು ಟೀಕಿಸಿದರು.

“ಅಭಿವೃದ್ಧಿ ಹೊಂದಿದ ಕೆಲವು ಸಮುದಾಯಗಳನ್ನು ಗ್ರೂಪ್‌ 4ರಲ್ಲಿ ಸೇರಿಸಲಾಗಿದೆ. ಅಲ್ಲಿ ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯಗಳಿವೆ. ಬಲಾಢ್ಯರೊಂದಿಗೆ ಈ ಅಲೆಮಾರಿಗಳು ಸ್ಪರ್ಧೆ ಮಾಡಲು ಸಾಧ್ಯವೇ? ಈ ರೀತಿಯ ತೊಡಕುಗಳಿವೆ. ಇವು ಆಡಳಿತಾತ್ಮಕವಾಗಿ ಸರಿಪಡಿಸುವುದು ಕಷ್ಟವೇನಲ್ಲ” ಎಂದು ಅಭಿಪ್ರಾಯಪಟ್ಟರು.

“ಸಂವಿಧಾನದ ವಿಧಿ 341ಕ್ಕೆ ತಿದ್ದುಪಡಿಯಾಗುವವರೆಗೂ, ಲೋಕಸಭಾ ಚುನಾವಣೆಯವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ಈಗ ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ಸಚಿವ ಅಮಿತ್ ಷಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ನಮ್ಮ ಬೇಡಿಕೆಗಳನ್ನು ಇಡುತ್ತೇವೆ. ಸದ್ಯಕ್ಕೆ ಚುನಾವಣೆಯ ಹಿನ್ನೆಲೆಯಲ್ಲಿ ಹೋರಾಟವನ್ನು ಮೊಟಕುಗೊಳಿಸುತ್ತಿದ್ದೇವೆ, ಆದರೆ ಚುನಾವಣೆ ಮಧ್ಯದಲ್ಲಿ ನಮ್ಮ ಹೋರಾಟ ಆರಂಭಿಸುತ್ತೇವೆ” ಎಂದು ಸ್ಪಷ್ಟಪಡಿಸಿದರು.

ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಶಿವರಾಯ ಅಕ್ಕರಕಿ ಮಾತನಾಡಿ, “ನಮ್ಮ ವೇದಿಕೆಯ ವತಿಯಿಂದ ಯಾವುದೇ ರಾಜಕೀಯ ನಿಲುವುಗಳನ್ನು ತೆಗೆದುಕೊಂಡಿಲ್ಲ. ತಟಸ್ಥ ನೀತಿ ನಮ್ಮದಾಗಿದೆ. ಸಮುದಾಯದ ಜನತೆ ತಮಗೆ ಇಷ್ಟವಾದವರಿಗೆ ಬೆಂಬಲ ನೀಡಲಿದ್ದಾರೆ” ಎಂದು ಹೇಳಿದರು.

 

“ಒಂದು ಕಾಲದಲ್ಲಿ ಮಾದಿಗ ಸಮುದಾಯದ 24 ಶಾಸಕರು ಇದ್ದರು. ಇಂದು ನಮ್ಮ ಸಂಖ್ಯೆ ಕೇವಲ 5ಕ್ಕೆ ಬಂದು ನಿಂತಿದೆ. ರಾಜಕೀಯ ಪ್ರಾತಿನಿಧ್ಯದ ಕೊರತೆ ಆಗಿದೆ. ನಮ್ಮ ಸಮುದಾಯ ಹೆಚ್ಚಿನ ಸಂಖ್ಯೆ ಇರುವಲ್ಲಿ ನಮ್ಮವರನ್ನು ಗೆಲ್ಲಿಸಿಕೊಳ್ಳುವ ಕೆಲಸವನ್ನು ಮಾಡುತ್ತೇವೆ. ಜೊತೆಗೆ ಅಸ್ಪೃಶ್ಯ ಜನಾಂಗದ ಹೊಲೆಯ, ತ್ರಿಮಸ್ಥ ಚರ್ಮಕಾರ, ಮಾದಿಗ ಸಂಬಂಧಿತ ಯಾವುದೇ ಅಭ್ಯರ್ಥಿಯನ್ನು ಗೆಲ್ಲಿಸಲು ತೀರ್ಮಾನ ಮಾಡಿದ್ದೇವೆ” ಎಂದು ವಿವರಿಸಿದರು.

ಮುಖಂಡರಾದ ಕರಿಯಪ್ಪ ಗುಡಿಮನಿ, ನಂದಕುಮಾರ್‌, ಜೆ.ಡಿ.ರಾಜು, ಹನುಮೇಶ್ ಗುಂಡೂರು, ಪ್ರೊ.ಸಿ.ಕೆ.ಮಹೇಶ್‌, ವೆಂಕಟೇಶ್‌ ದೀಪಾಂಜಲಿನಗರ ಮೊದಲಾದವರು ಸಮಾರೋಪ ಸಮಾರಂಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...