Homeಕರ್ನಾಟಕದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

ದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಮಹೇಶ ಜೋಶಿಯವರು ಮಹಿಳಾ ನೌಕರರೊಬ್ಬರಿಗೆ ವಂಚನೆ ಮಾಡಿದ್ದಾರೆಂಬ ಗುರುತರ ಆರೋಪ ಹೊರಬಿದ್ದಿದೆ.

ಪ್ರಕರಣವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೆಟ್ಟಿಲೇರಿದ್ದು, ಕಸಾಪ ಕಾರ್ಯದರ್ಶಿಗೆ ಇಲಾಖೆಯ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆಯಲ್ಲಿರುವ ಕೆ.ನಾಗರತ್ನಮ್ಮನವರು ಹಾಲಿ ಅಧೀಕ್ಷಕ ಹುದ್ದೆಯಲ್ಲಿದ್ದು, ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗೆ ಅರ್ಹರಾಗಿರುತ್ತಾರೆ. ಇವರು ಇರಬೇಕಾದ ಹುದ್ದೆಯಲ್ಲಿ ಇವರಿಗಿಂತ ಕಿರಿಯ ಹುದ್ದೆಯ ಪ್ರಥಮ ದರ್ಜೆ ಸಹಾಯಕ ಪಾರ್ಶ್ವನಾಥ ಅವರನ್ನು ಪ್ರಭಾರದಲ್ಲಿ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

“ವ್ಯವಸ್ಥಾಪಕ ಹುದ್ದೆಯನ್ನು ಕೆ.ನಾಗರತ್ನಮ್ಮ ಅವರಿಗೆ ನೀಡದೆ ಮಹೇಶ ಜೋಶಿಯವರು ವಂಚನೆ ಮಾಡಿದ್ದಾರೆ. ಮಹಿಳಾ ನೌಕರರಾದ ನಾಗರತ್ನಮ್ಮನವರಿಗೆ ರಕ್ಷಣೆ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ. ದಲಿತರ ರಕ್ಷಣೆಗಾಗಿ ಇರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಗಮನಕ್ಕೂ ಈ ವಿಷಯವನ್ನು ತರಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಸಾಹಿತ್ಯ ಪರಿಷತ್‌ನಲ್ಲಿ ಈ ದಲಿತ ಮಹಿಳೆ ಮಾನಸಿಕ ಅಪಮಾನಕ್ಕೆ ಗುರಿಯಾಗಿದ್ದಾರೆ. ಇದರ ಮೂಲಕ ದಲಿತ ಮಹಿಳೆಗೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಸದರಿ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಂಪೂರ್ಣ ವರದಿಯನ್ನು ತುರ್ತಾಗಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ಮನವಿಗಳನ್ನು ಕಸಾಪಕ್ಕೆ ವರ್ಗಾಯಿಸಿ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಿ ಅದರ ಪ್ರತಿಯನ್ನು ಇಲಾಖೆಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಆದರೆ ಇಲ್ಲಿಯವರೆಗೂ ತಮ್ಮಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಗಳು ಬಂದಿಲ್ಲ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಮಹಾಸಭಾವು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲೇ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯನ್ನು ಇತ್ಯರ್ಥ ಪಡಿಸಬೇಕಾಗಿರುವುದರಿಂದ ದಲಿತ ಮಹಾಸಭಾದವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಿರುವ ಮಾಹಿತಿಯನ್ನು ನೀಡಲಾಗಿದಯೇ? ಅಥವಾ ಇಲ್ಲವೇ ಎಂಬ ಬಗ್ಗೆ ಈ ಪತ್ರ ತಲುಪಿದ ದಿನವೇ ಕಳುಹಿಸಿಕೊಡಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿರಿ: ಶುರುವಾದ ಮಹೇಶ ಜೋಶಿ ಮಂತ್ರಗಳು!

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಹಿತಿ ಹಕ್ಕು ತಜ್ಞರಾದ ಜೆ.ಎಂ.ರಾಜಶೇಖರ ಅವರು, “ದಲಿತ ಮಹಿಳೆಗೆ ವಂಚನೆ ಸಂಬಂಧ ಮಹೇಶ ಜೋಷಿ ವಿರುದ್ಧ ತನಿಖೆಗೆ ದೂರು. ದಿನಕ್ಕೊಂದೊಂದು ರಾದ್ಧಾಂತ ಮೈಮೇಲೆಳೆದುಕೊಂಡು ಕಸಾಪ ಮಾನ, ಘನತೆ ಹರಾಜು ಹಾಕುತ್ತಿರುವ ಹೆಸರಾಂತ ನಾಡಿನ ಸಾಹಿತಿ! ಏನ್ ಗ್ರಹಚಾರನಪ ಛೇ ಛೇ ಛೇ!?” ಎಂದು ಟೀಕಿಸಿದ್ದಾರೆ.

ಮಹೇಶ ಜೋಶಿಯವರ ಸರ್ವಾಧಿಕಾರ

ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದರು. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...