ಲಂಚ ಪ್ರಕರಣದ ಆರೋಪಿ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದ್ದರಿಂದ ಮಾರ್ಚ್ 27ರಂದು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಆನಂತರ ಅವರನ್ನು ನ್ಯಾಯಾಲಯ ತನಿಖೆಗಾಗಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿತ್ತು. ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಕೆಎಸ್‌ಡಿಎಲ್ ವರ್ಕ್ ಆರ್ಡರ್ ನೀಡಲು ಲಂಚ ಪಡೆದಿರುವ ಪ್ರಕರಣದಲ್ಲಿ ಎಓನ್ ಆರೋಪಿಯಾದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಾರ್ಚ್ 7 ರಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ವಯಸ್ಸು ಮತ್ತು ಆರೋಗ್ಯವನ್ನು ಗಮನಿಸಿ ಜಾಮೀನು ನೀಡಲಾಗಿದೆ ಎಂದು ಉಚ್ಚರಿಸಿತ್ತು. ಆದರೆ ಅಲ್ಲಿಯವರೆಗೂ ತಲೆ ಮರೆಸಿಕೊಂಡಿದ್ದ ಮಾಡಾಳ್ ವಿರೂಪಾಕ್ಷ ಜಾಮೀನು ಸಿಗುತ್ತಲೇ ಬೃಹತ್ ರೋಡ್ ಶೋ ನಡೆಸಿದ್ದರು.
ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ರವರು ಚನ್ನಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಅವರ ತಂದೆಯ ಬಂಧನವಾದರೆ ಅವರಿಗೆ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗುತ್ತಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..


