Homeಕರ್ನಾಟಕಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

- Advertisement -
- Advertisement -

“ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ‘ಎನ್‌ಡಿಟಿವಿ’ ಸುಳ್ಳನ್ನು ಹಬ್ಬಿಸಿ‍ದ್ದು ಇದನ್ನೇ ಕನ್ನಡ ಮಾಧ್ಯಮಗಳು ಕೂಡ ವರದಿ ಮಾಡಿವೆ.

ಸಿದ್ದರಾಮಯ್ಯನವರು ತಮ್ಮ ಸಂದರ್ಶನದಲ್ಲಿ ಹೇಳಿರುವುದೇ ಒಂದಾದರೆ, ಅದಾನಿ ಒಡೆತನದ ಎನ್‌ಡಿಟಿವಿ ವರದಿ ಮಾಡಿರುವ ವಿಚಾರವೇ ಇನ್ನೊಂದಾಗಿದೆ. ಸಿದ್ದರಾಮಯ್ಯನವರು ಹೇಳದೆ ಇರುವ ಸಂಗತಿಯನ್ನು ಸೇರಿಸಿ ವರದಿ ಪ್ರಕಟಿಸಲಾಗಿದೆ. ಆದರೆ ಇದನ್ನೇ ‘ಕನ್ನಡಪ್ರಭ’ದಂತಹ ಪತ್ರಿಕಾ ಸಂಸ್ಥೆಗಳು ವರದಿ ಮಾಡಿವೆ. ಸಿದ್ದರಾಮಯ್ಯನವರು ವಿರೋಧ ವ್ಯಕ್ತಪಡಿಸಿದ ಬಳಿಕ ಹೆಡ್‌ಲೈನ್ ಹಾಗೂ ವರದಿಯನ್ನು ಎನ್‌ಡಿಟಿವಿ ತಿದ್ದಿದೆಯಾದರೂ ಸುಳ್ಳು ಈಗಾಗಲೇ ಊರು ಸುತ್ತಾಡಿಕೊಂಡು ಬಂದಿದೆ.

ಎನ್‌ಡಿಟಿವಿ ನಡೆಸಿದ ವಿಡಿಯೊ ಸಂದರ್ಶನದಲ್ಲಿ ಸಿದ್ದರಾಮಯ್ಯನವರು ಅನೇಕ ವಿಷಯಗಳನ್ನು ಮಾತನಾಡಿದ್ದಾರೆ. ಕೋಲಾರ ಮತ್ತು ವರುಣಾದಲ್ಲಿ ಸ್ಪರ್ಧಿಸುವ ಕುರಿತು, ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆ ಮತ್ತು ಕೋಮುವಾದಿ ರಾಜಕಾರಣದ ಕುರಿತು ಮಾತನಾಡುತ್ತಾರೆ. ಜೊತೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವುದಾಗಿಯೂ ಹೇಳುತ್ತಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿರಬಹುದು. ನಾನು ಆಕಾಂಕ್ಷಿಯಾಗಿದ್ದೇನೆ, ಡಿ.ಕೆ.ಶಿವಕುಮಾರ್‌ ಅವರೂ ಆಕಾಂಕ್ಷಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ನಡೆಯುತ್ತವೆ. ಇದರಲ್ಲಿ ಯಾವುದೇ ತಪ್ಪಿಲ್ಲ” ಎನ್ನುತ್ತಾರೆ. ಅದಕ್ಕೆ ಸಂದರ್ಶಕಿ ಕೂಡ ದನಿಗೂಡಿಸುತ್ತಾರೆ.

ಮುಂದುವರಿದು ಸಿದ್ದರಾಮಯ್ಯನವರು, “ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಮತ್ಯಾರೋ ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ. ಅಂತಿಮವಾಗಿ ಆಯ್ಕೆಯಾದ ಎಂಎಲ್‌ಎಗಳು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ. ಇದು ಪ್ರಜಾಪ್ರಭುತ್ವದ ಮಾದರಿ” ಎನ್ನುತ್ತಾರೆ.

“ಒಂದು ವೇಳೆ ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಹೈಕಮಾಂಡ್ ನಿರ್ಧರಿಸಿದರೆ?” ಎಂದು ಸಂದರ್ಶಕಿ ಕೇಳುತ್ತಾರೆ. ಮುಂದುವರಿದು, “ಇಲ್ಲ, ಅದು ಹಾಗಾಗುವುದಿಲ್ಲ. ಹೈಕಮಾಂಡ್ ಕೂಡ ತನ್ನಷ್ಟಕ್ಕೆ ತಾನೇ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ನಿರ್ಧಾರದ ಮೇಲೆ ಮುಂದುವರಿಯುತ್ತದೆ” ಎನ್ನುತ್ತಾರೆ.

ಹೀಗೆ ಸಿದ್ದರಾಮಯ್ಯನವರು ಮಾತನಾಡಿದ್ದರೆ, ಬೇರೆಯದ್ದೇ ರೀತಿಯಲ್ಲಿ ವರದಿ ಮಾಡಲಾಗಿದೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ” ಎಂದು ಸಿದ್ದರಾಮಯ್ಯನವರು ಎನ್‌ಡಿಟಿವಿ ಸಂದರ್ಶನದಲ್ಲಿ ತಿಳಿಸಿದ್ದಾರೆಂದು ‘ಕನ್ನಡಪ್ರಭ’ ದಿನಪತ್ರಿಕೆ ಮುಖಪುಟದಲ್ಲಿ ವರದಿ ಮಾಡಿದೆ.

ಎನ್‌ಡಿಟಿವಿ ತನ್ನ ವರದಿಯಲ್ಲಿ “ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್ ನೀಡುವುದಿಲ್ಲ” ಎಂಬ ಸಾಲನ್ನು ಸೇರಿಸಿದೆ. ವಿರೋಧ ವ್ಯಕ್ತವಾದ ಬಳಿಕ ವರದಿಯನ್ನು ತಿದ್ದಿದೆ.

ತಿರುಚಲ್ಪಟ್ಟಿರುವ ವರದಿ
ತಿದ್ದಲ್ಪಟ್ಟ ವರದಿ

“ಇಲ್ಲ, ಹಾಗೇ ಆಗಲು ಸಾಧ್ಯವಿಲ್ಲ. ಏಕೆಂದರೆ ನಾವು ಪ್ರಜಾಪ್ರಭುತ್ವ ದಾರಿಯಲ್ಲಿ ನಡೆಯಬೇಕು. ತನ್ನಷ್ಟಕ್ಕೆ ತಾನೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ಅಭಿಪ್ರಾಯದಂತೆ ಹೋಗಬೇಕಾಗುತ್ತದೆ” ಎಂದು ಸಿದ್ದರಾಮಯ್ಯನವರು ಹೇಳಿರುವುದಾಗಿ ಎನ್‌ಡಿಟಿವಿ ವರದಿಯನ್ನು ತಿದ್ದಿದೆ.

ಎನ್‌ಡಿಟಿವಿ ಮಾಡಿರುವ ಸುಳ್ಳು ಸುದ್ದಿಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ಗಳನ್ನು ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. “ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು” ಎಂದು ಆಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...