Homeಮುಖಪುಟಮಂಡ್ಯ: ಪಿ.ಗಣಿಗ ರವಿಕುಮಾರ್ ಕಾಂಗ್ರೆಸ್ ಅಭ್ಯರ್ಥಿ - ಜೆಡಿಎಸ್‌ನೊಂದಿಗೆ ನೇರ ಪೈಪೋಟಿ

ಮಂಡ್ಯ: ಪಿ.ಗಣಿಗ ರವಿಕುಮಾರ್ ಕಾಂಗ್ರೆಸ್ ಅಭ್ಯರ್ಥಿ – ಜೆಡಿಎಸ್‌ನೊಂದಿಗೆ ನೇರ ಪೈಪೋಟಿ

- Advertisement -
- Advertisement -

ಇಂದು ಬಿಡುಗಡೆಯಾದ ಎರಡನೆ ಪಟ್ಟಿಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಪಿ.ಗಣಿಗ ರವಿ ಕುಮಾರ್‌ರವರಿಗೆ ಟಿಕೆಟ್ ಘೋಷಿಸಿದೆ. ಕಳೆದ ಬಾರಿ ಉತ್ತಮ ಪೈಪೋಟಿ ನೀಡಿ ಸೋಲು ಕಂಡಿದ್ದ ಅವರು ಈ ಬಾರಿ ಶತಾಯ ಗತಾಯ ಗೆಲ್ಲಲು ಕಸರತ್ತು ನಡೆಸಿದ್ದಾರೆ. ಅವರು ಸ್ಪರ್ಧೆಯ ಹಾದಿ ಹೇಗಿದೆ ಎಂಬುದರ ವಿವರ ಇಲ್ಲಿದೆ.

ಒಂದು ಉಪ ಚುನಾವಣೆ ಸೇರಿ ಒಟ್ಟು 16 ಚುನಾವಣೆಗಳು ಮಂಡ್ಯದಲ್ಲಿ ನಡೆದಿದ್ದು ಆರು ಬಾರಿ ಕಾಂಗ್ರೆಸ್ ಪಕ್ಷ ಗೆಲುವನ್ನು ಸಾಧಿಸಿದೆ. ಜೆಡಿಎಸ್ 3 ಬಾರಿ, ಜನತಾದಳ ಒಮ್ಮೆ, ಜನತಾಪಕ್ಷ 3 ಬಾರಿ, ಸ್ವತಂತ್ರ ಅಭ್ಯರ್ತಿಗಳು 2 ಬಾರಿ ಮತ್ತು ಎಜಿಪಿ ಪಕ್ಷ  ಒಮ್ಮೆ ಇಲ್ಲಿ ಗೆಲುವು ಸಾಧಿಸಿದ್ದಾರೆ. ಬಹುತೇಕ ಒಕ್ಕಲಿಗ ಸಮುದಾಯದವರೆ ಇಲ್ಲಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2004ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಎಂ.ಎಸ್. ಆತ್ಮಾನಂದರವರು ಕಣಕ್ಕಿಳಿಯುತ್ತಾರೆ. ಎಂ.ಶ್ರೀನಿವಾಸ್ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗುತ್ತಾರೆ. ಎಂ.ಶ್ರೀನಿವಾಸ್ ಅವರು 14,880 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಾರೆ.

2008ರ ವೇಳೆಗೆ ಕ್ಷೇತ್ರ ಪುನರ್‌ವಿಂಗಡಣೆಯಾಗುತ್ತದೆ. ಕೆರಗೋಡು ಕ್ಷೇತ್ರವನ್ನು ಮಂಡ್ಯ ಮತ್ತು ಮೇಲುಕೋಟೆ ಕ್ಷೇತ್ರಗಳಿಗೆ ಸೇರಿಸಲಾಗುತ್ತದೆ. ಅಲ್ಲಿ ಶಾಸಕರಾಗಿದ್ದ ಎಚ್.ಬಿ ರಾಮುರವರು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆ. ಜೆಡಿಎಸ್‌ನಿಂದ ಹಾಲಿ ಶಾಸಕ ಎಂ.ಶ್ರೀನಿವಾಸ್ ಕಣಕ್ಕಿಳಿಯುತ್ತಾರೆ. ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದ ಎಚ್.ಪಿ. ನಾಗೇಂದ್ರರವರ ಹತ್ಯೆಯಾಗಿರುತ್ತದೆ. ಅವರ ಪತ್ನಿ ವಿದ್ಯಾ ನಾಗೇಂದ್ರರವರಿಗೆ ಕಾಂಗ್ರೆಸ್ ಟಿಕೆಟ್ ಸಿಗದಿದ್ದುದರಿಂದ ಅವರು ಬಿಜೆಪಿ ಅಭ್ಯರ್ಥಿಯಾಗುತ್ತಾರೆ. ಮೂರು ಜನರ ನಡುವಿನ ತ್ರಿಕೋನ ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದ ಎಂ.ಶ್ರೀನಿವಾಸ್ ಅವರು 10,529 ಮತಗಳ ಅಂತರದಿಂದ ಸತತ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗುತ್ತಾರೆ. ಎಂ.ಶ್ರೀನಿವಾಸ್ 47,265 ಮತ ಪಡೆದರೆ, ವಿದ್ಯಾ ನಾಗೇಂದ್ರ 36,736 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆಯುತ್ತಾರೆ. ಎಚ್.ಬಿ. ರಾಮು, 31,407 ಮತ ಪಡೆದು ಮೂರನೇ ಸ್ಥಾನಕ್ಕೆ ಕುಸಿಯುತ್ತಾರೆ.

2013ರ ಚುನಾವಣೆ ವೇಳೆಗೆ ಹಾಲಿ ಶಾಸಕ ಎಂ.ಶ್ರೀನಿವಾಸ್ ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೆ. ಜೆಡಿಎಸ್ ಟಿಕೆಟ್ ಸಿಗದಿದ್ದರಿಂದ ಎಸ್.ಡಿ ಜಯರಾಂರವರ ಪುತ್ರ ಅಶೋಕ್ ಜಯರಾಂ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ. 2008ರಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಮತ್ತು 2009ರ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸೋಲುಂಡಿದ್ದ ಚಿತ್ರನಟ ಅಂಬರೀಶ್ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುತ್ತಾರೆ. ಕೊನೆ ಕ್ಷಣದಲ್ಲಿ ಜೆಡಿಎಸ್ ಪಕ್ಷವು ಎಸ್.ಡಿ ಜಯರಾಂರವರನ್ನು ಸಮಾಧಾನ ಪಡಿಸಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸುವಂತೆ ಮಾಡುತ್ತದೆ. ಆದರೂ ರೆಬೆಲ್ ಸ್ಟಾರ್ ಅಂಬರೀಷ್‌ರವರ ಗೆಲುವು ತಡೆಯಲು ಸಾಧ್ಯವಾಗುವುದಿಲ್ಲ. ಅವರು 42,937 ಮತಗಳ ಭಾರೀ ಅಂತರದ ಭರ್ಜರಿ ಜಯ ದಾಖಲಿಸುತ್ತಾರೆ.

ಅಂಬರೀಶ್‌ಅಂಬರೀಶ್‌ರವರು 90,329 ಮತ ಪಡೆದರೆ, ಎಂ. ಶ್ರೀನಿವಾಸ್ 47,392 ಮತಗಳಿಗೆ ಕುಸಿಯುತ್ತಾರೆ. ಬಿಜೆಪಿಯ ಟಿ.ಎಲ್. ರವಿಶಂಕರ್ ಕೇವಲ 3,094 ಮತಗಳಿಗೆ ಸೀಮಿತರಾಗುತ್ತಾರೆ. ಚುನಾವಣೆಯಿಂದ ಹಿಂದೆ ಸರಿದರೂ ಮತಪತ್ರದಲ್ಲಿ ಹೆಸರಿದ್ದ ಬಂಡಾಯ ಅಭ್ಯರ್ಥಿ ಅಶೋಕ್ ಜಯರಾಂರವರಿಗೆ 524 ಮತಗಳು ಬಿದ್ದಿದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಅಂಬರೀಶ್ ವಸತಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

2018ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಎಂ.ಶ್ರೀನಿವಾಸ್‌ರವರಿಗೆ ಟಿಕೆಟ್ ನೀಡುತ್ತದೆ. ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆರಗೋಡಿನ ಮಾಜಿ ಶಾಸಕ ಚಂದಗಾಲು ಎನ್.ತಮ್ಮಣ್ಣನವರ ಸಹೋದರ ಎನ್.ಶಿವಣ್ಣ ಬಿಜೆಪಿ ಸೇರಿ ಕಣಕ್ಕಿಳಿಯುತ್ತಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಹಾಲಿ ಶಾಸಕ ಅಂಬರೀಶ್ ಹಿಂದೇಟು ಹಾಕುತ್ತಾರೆ. ಹಾಗಾಗಿ ಕೊನೆ ಕ್ಷಣದಲ್ಲಿ ಪಿ.ಗಣಿಗ ರವಿಕುಮಾರ್‌ರವರಿಗೆ ಕಾಂಗ್ರೆಸ್ ಟಿಕೆಟ್ ಲಭಿಸುತ್ತದೆ. 5 ರೂಪಾಯಿ ವೈದ್ಯರೆನಿಸಿಕೊಂಡಿದ್ದ ಡಾ.ಶಂಕರೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸುತ್ತಾರೆ. ನಾಲ್ಕು ಜನರ ನಡುವಿನ ಕಾಳಗದಲ್ಲಿ ಜೆಡಿಎಸ್ ಪಕ್ಷದ ಎಂ.ಶ್ರೀನಿವಾಸ್‌ರವರಿಗೆ ಗೆಲುವು ಲಭಿಸುತ್ತದೆ. ಅವರು 69,421 ಮತಗಳನ್ನು ಪಡೆದರೆ, ಗಣಿಗ ರವಿಕುಮಾರ್ 47,813 ಮತಗಳನ್ನು ಪಡೆಯುತ್ತಾರೆ. ಬಿಜೆಪಿಯ ಶಿವಣ್ಣ 32,064 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡರು. ಪಕ್ಷೇತರ ಅಭ್ಯರ್ಥಿ ಡಾ.ಶಂಕರೇಗೌಡ 10,564 ಮತಗಳಿಗೆ ತೃಪ್ತಿಪಟ್ಟುಕೊಂಡರು.

ಅಂದಾಜು ಜಾತಿವಾರು ಮತಗಳು

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅಂದಾಜು 2,35,000 ಮತದಾರರಿದ್ದಾರೆ. ಅದರಲ್ಲಿ ಒಕ್ಕಲಿಗ ಮತಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಸಮಾರು 95,000 ಮತಗಳಿವೆ ಎನ್ನಲಾಗಿದೆ. ಎರಡನೇ ಸ್ಥಾನದಲ್ಲಿ ಪರಿಶಿಷ್ಟ ಜಾತಿ ಮತಗಳಿದ್ದು ಸುಮಾರು 33,000 ಮತಗಳಿವೆ. ಉಳಿದಂತೆ ಮುಸ್ಲಿಂ 23,000, ಲಿಂಗಾಯಿತ 13,000, ಕುರುಬ 13,000, ಎಸ್‌ಟಿ 8,000 ಮತಗಳಿವೆ. ಇತರೆ ಸಮುದಾಯದ ಸುಮಾರು 50,000 ಮತಗಳಿವೆ ಎನ್ನಲಾಗಿದೆ.

ಹಾಲಿ ಪರಿಸ್ಥಿತಿ

ಮೂರನೇ ಬಾರಿ ಶಾಸಕರಾಗಿರುವ ಎಂ ಶ್ರೀನಿವಾಸ್‌ರವರಿಗೆ ಅನಾರೋಗ್ಯ ಕಾಡುತ್ತಿದೆ. ಅವರಿಗೆ ಮಾತು ಆಡಲೂ ಕಷ್ಟದ ಪರಿಸ್ಥಿತಿಯಿದೆ ಎನ್ನಲಾಗುತ್ತಿತ್ತು. ಕೆಲವು ತಿಂಗಳುಗಳ ಹಿಂದೆಯಷ್ಟೇ ಅವರು ಐಟಿಐ ಕಾಲೇಜು ಪ್ರಿನ್ಸಿಪಾಲ್ ಕಪಾಳಕ್ಕೆ ಹೊಡೆದಿದ್ದ ವಿಡಿಯೋ ಹರಿದಾಡಿತ್ತು. ಯಾವುದಾದರೂ ಸಮಸ್ಯೆ ಹೇಳಿಕೊಂಡು ಹೋದರೆ ’ನಾನೀಗ ಝೀರೊ’ ಎಂದು ಶಾಸಕರು ಹೇಳುತ್ತಾರೆ ಎಂಬ ಆರೋಪಗಳಿವೆ. ಆರಂಭದಲ್ಲಿ ಶಾಸಕರಾದಾಗ ಜನರಿಗೆ ಸುಲಭವಾಗಿ ಸಿಗುತ್ತಿದ್ದ, ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದ ಅವರು ಸದ್ಯ ಸಂಪೂರ್ಣವಾಗಿ ನಿಷ್ಕ್ರಿಯರಾಗಿದ್ದಾರೆ. ಆಡಳಿತ ವಿರೋಧಿ ಅಲೆ ಅವರನ್ನು ಕಾಡುತ್ತಿದೆ. ಅಧಿಕಾರಿಗಳ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ. ಆದರೆ ಹಾಲಿ ಶಾಸಕರ ಕೋಟಾದಲ್ಲಿ ಯಾವಾಗ ಅವರಿಗೆ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಎಂದು ಘೋಷಿಸಲಾಯಿತೊ ಆಗಿನಿಂದ ಮತ್ತೆ ಸಕ್ರಿಯರಾಗಿಬಿಟ್ಟಿದ್ದಾರೆ. ಇಡೀ ದಿನ ಮಾತನಾಡಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು

ಯಾವಾಗ ಹಾಲಿ ಶಾಸಕ ಎಂ ಶ್ರೀನಿವಾಸ್‌ರವರಿಗೆ ಟಿಕೆಟ್ ಘೋಷಿಸಲಾಯಿತೋ ಆಗ ಅವರ ಅಳಿಯ, ಜಿ.ಪಂ ಮಾಜಿ ಸದಸ್ಯ ಯೋಗೇಶ್ ತನಗೇ ಈ ಟಿಕೆಟ್ ಎಂಬಂತೆ ಚುನಾವಣಾ ತಯಾರಿ ನಡೆಸಿದ್ದಾರೆ. ಕೊನೆ ಕ್ಷಣದಲ್ಲಿ ಎಂ ಶ್ರೀನಿವಾಸ್ ತಮ್ಮ ಟಿಕೆಟ್‌ಅನ್ನು ಅಳಿಯನಿಗೆ ವರ್ಗಾಯಿಸುತ್ತಾರೆ ಎಂದು ಜೆಡಿಎಸ್ ಕಾರ್ಯಕರ್ತರು ನಂಬಿದ್ದಾರೆ.

ಕೆ.ವಿ ಶಂಕರೇಗೌಡರ ಮೊಮ್ಮಗ, ಸಚ್ಚಿದಾನಂದರವರ ಪುತ್ರ ಕೆ.ಎಸ್ ವಿಜಯಾನಂದ ಸಹ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದು, ಆ ನಿಟ್ಟಿನಲ್ಲಿ ಪ್ರಯತ್ನ ನಡೆಸಿದ್ದಾರೆ. ತಮ್ಮ ತಾತ ಮತ್ತು ತಂದೆಯ ಹೆಸರಿನಿಂದ ಗೆಲುವು ಸಾಧಿಸುವ ಬಯಕೆ ಅವರದಾಗಿದೆ.

ಮನ್‌ಮುಲ್ ಅಧ್ಯಕ್ಷರಾಗಿರುವ ಬಿ.ಆರ್ ರಾಮಚಂದ್ರರವರು ಮತ್ತೊಬ್ಬ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಮೇಲುಕೋಟೆ ಶಾಸಕ ಸಿ.ಎಸ್ ಪುಟ್ಟರಾಜುರವರ ಬೆಂಬಲದೊಂದಿಗೆ ಟಿಕೆಟ್‌ಗಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಅದೇ ರೀತಿ ಜೆಡಿಎಸ್ ವಕ್ತಾರರಾದ ಮುದ್ದನಘಟ್ಟ ಮಹಾಲಿಂಗೇಗೌಡ ಸಹ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ.

ಡಾ.ಎಚ್ ಕೃಷ್ಣ ಮತ್ತು ರಾಧಾಕೃಷ್ಣ ಕೀಲಾರರವರು ಜೆಡಿಎಸ್ ಟಿಕೆಟ್ ಸಿಗುವುದಿಲ್ಲ ಎಂಬುದು ದೃಢವಾಗುತ್ತಲೇ ಪಕ್ಷ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಲ್ಲದೆ ಕಾಂಗ್ರೆಸ್ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್‌ಗಾಗಿ 16 ಆಕಾಂಕ್ಷಿಗಳಿದ್ದರು

ಕಳೆದ ಚುನಾವಣೆಯಲ್ಲಿ ತಡವಾಗಿ ಟಿಕೆಟ್ ಘೋಷಿಸಿದ ಕಾಂಗ್ರೆಸ್ ಪಕ್ಷ, ಸ್ವಯಂಕೃತ ಅಪರಾಧದಿಂದಾಗಿ ಮಂಡ್ಯ ಕ್ಷೇತ್ರವನ್ನು ಕಳೆದುಕೊಂಡಿತ್ತು. ಈ ಬಾರಿ ಮಂಡ್ಯದ ಕಾಂಗ್ರೆಸ್ ಟಿಕೆಟ್‌ಗಾಗಿ ಬರೋಬ್ಬರಿ 16 ಮಂದಿ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಕಳೆದ ಚುನಾವಣೆಯ ಪರಾಜಿತ ಅಭ್ಯರ್ಥಿ ಗಣಿಗ ರವಿಕುಮಾರ್ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಕಳೆದ ಬಾರಿ ಸೋತರೂ ಕ್ಷೇತ್ರಕ್ಕೆ ಬೆನ್ನು ಹಾಕದೆ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಜನರಿಗೆ ನೆರವಾಗಿದ್ದು, ಶತಾಯ ಗತಾಯ ಗೆಲ್ಲಲು ಕೆಲಸ ಮಾಡುತ್ತಿದ್ದಾರೆ.

ಪಿ.ಗಣಿಗ ರವಿಕುಮಾರ್‌

ಕಾರ್ಯಕರ್ತರನ್ನು ಮರೆತ ಬಿಜೆಪಿ

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುತ್ತೇವೆ ಎಂದು ಬಿಜೆಪಿ ಘೋಷಿಸಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಟಿಕೆಟ್ ವಂಚಿತರಾದ ಚಂದಗಾಲು ಶಿವಣ್ಣನವರಿಗೆ ಟಿಕೆಟ್ ನೀಡಿತು. ಈ ಬಾರಿಯೂ ಜೆಡಿಎಸ್‌ನಿಂದ ವಲಸೆ ಬಂದಿರುವ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂರವರಿಗೆ ಬಿಜೆಪಿ ಟಿಕೆಟ್ ನೀಡುತ್ತದೆ ಎನ್ನಲಾಗಿದೆ. ಮದ್ದೂರಿನಲ್ಲಿಯೂ ಜೆಡಿಎಸ್ ತೊರೆದು ಬಂದ ವ್ಯಕ್ತಿಗೆ ಮತ್ತು ಶ್ರೀರಂಗಪಟ್ಟಣದಲ್ಲಿ ಕಾಂಗ್ರೆಸ್ ತೊರೆದುಬಂದ ವ್ಯಕ್ತಿಗೆ ಬಿಜೆಪಿ ಟಿಕೆಟ್ ನೀಡಲು ಸಿದ್ಧತೆ ನಡೆಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇನ್ನುಳಿದಂತೆ ಕಳೆದ ಬಾರಿ ಸೋತ ಚಂದಗಾಲು ಶಿವಣ್ಣ, ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ಡಾ.ಸಿದ್ದರಾಮಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ ಉಮೇಶ್, ಬೇಕರಿ ಅರವಿಂದ್ ಸಹ ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದಾರೆ.

ಸರ್ವೋದಯ ಕರ್ನಾಟಕ ಪಕ್ಷದಿಂದ ಮಧುಚಂದನ್ ಎಸ್.ಸಿ ಕಣಕ್ಕೆ

ವಿದೇಶದಲ್ಲಿನ ಉದ್ಯೋಗ ತೊರೆದು ಆರ್ಗಾನಿಕ್ ಮಂಡ್ಯ ಸಂಸ್ಥೆಯ ಮೂಲಕ ಗುರುತಿಸಿಕೊಂಡಿದ್ದ ಮಧುಚಂದನ್ ರೈತ ಸಂಘ ಕಟ್ಟುವಲ್ಲಿ ಸಕ್ರಿಯರಾಗಿದ್ದಾರೆ. ಕೀರೆಮಡಿ ಮಹಿಳಾ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿರುವ ಅವರು ಜನರು ಸರ್ಕಾರಿ ಕಚೇರಿಗಳ ಕೆಲಸಗಳನ್ನು ಸುಲಲಿತವಾಗಿ ಮಾಡಿಸಿಕೊಳ್ಳಲು ಅನುವಾಗುವಂತೆ ಸಹಾಯ ಮಾಡಿ ಕಾರ್ಯೋನ್ಮುಖರಾಗಿದ್ದಾರೆ. ಪೇಸಿಎಂ ಗದ್ದಲದಲ್ಲಿ ಅವರು ಪೇ ಫಾರ್ಮರ್ ಎಂಬ ಪ್ರಚಾರ ಮಾಡಿ ಗಮನ ಸೆಳೆದಿದ್ದರು. ಮೈಷುಗರ್ ಪುನಶ್ಚೇತನಕ್ಕಾಗಿ, ಕಬ್ಬು ಮತ್ತು ಭತ್ತದ ಬೆಳೆಗೆ ವೈಜ್ಞಾನಿಕ ಬೆಲೆಗಾಗಿ ಅವರು ಹಲವಾರು ಹೋರಾಟಗಳನ್ನು ಮುನ್ನಡೆಸಿದ್ದಾರೆ. ಕಳೆದ 75 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುವ ಮೂಲಕ ರೈತರ ವಿಷಯವನ್ನು ಚುನಾವಣೆಯ ವಿಷಯವನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ. ಅವರು ರೈತ ಸಂಘವನ್ನು ಕ್ಷೇತ್ರದಾದ್ಯಂತ ವಿಸ್ತರಿಸುತ್ತ ಪರ್ಯಾಯ ಚುನಾವಣಾ ತಯಾರಿ ನಡೆಸಿದ್ದಾರೆ. ಅವರಿಗೆ ಸರ್ವೋದಯ ಕರ್ನಾಟಕ ಪಕ್ಷ ಟಿಕೆಟ್ ಘೋಷಿಸಿದೆ.

ಸಾಧ್ಯತೆಗಳೇನು?

ಜೆಡಿಎಸ್ ಪಕ್ಷವು ಒಕ್ಕಲಿಗ ಮತಗಳು ತಮ್ಮ ಕೈಹಿಡಿಯುತ್ತವೆ ಎಂದು ನಂಬಿಕೊಂಡಿದೆ. ಆದರೆ ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಅಧಿಕೃತವಾದರೆ ಟಿಕೆಟ್ ವಂಚಿತರು ಯಾವ ರೀತಿ ಒಳೇಟು ನೀಡುತ್ತಾರೆ ಎಂಬುದನ್ನು ಊಹಿಸಲು ಕಷ್ಟ. ಕಳೆದ ಲೋಕಸಭಾ ಚುನಾವಣೆಗೆ ದೇವೇಗೌಡರ ಕುಟುಂಬದ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಿ ಸೋತಿದ್ದು, ಅವರು ನಂತರ ರಾಮನಗರದ ಕಡೆ ಮುಖ ಮಾಡಿದ್ದು ಕಾರ್ಯಕರ್ತರ ಬಲ ಕುಗ್ಗುವಂತೆ ಮಾಡಿದೆ.

ಇನ್ನು ಕಾಂಗ್ರೆಸ್ ಪಕ್ಷವು, ಹಾಲಿ ಶಾಸಕರ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚಿನ ವಿಧಾನ ಪರಿಷತ್ ಚುನಾವಣೆಗಳ ಜಯದ ಅಲೆ ಪಕ್ಷವನ್ನು ಗೆಲುವಿನ ದಡ ಸೇರಿಸುತ್ತದೆ ಎಂಬ ವಿಶ್ವಾಸದಲ್ಲಿದೆ. ಗಣಿಗ ರವಿಕುಮಾರ್ ಕಳೆದ ಚುನಾವಣೆಯ ಸೋಲಿನ ಅನುಕಂಪದಲ್ಲಿ ಈ ಬಾರಿ ಗೆಲ್ಲಬಹುದು ಎಂದು ಯೋಚಿಸಿದ್ದಾರೆ. ಆದರೆ ಕಾಂಗ್ರೆಸ್‌ನಲ್ಲಿ ಗಟ್ಟಿ ಕಾರ್ಯಕರ್ತರಿಗಿಂತ ನಾಯಕರೇ ತುಂಬಿರುವುದು ಅವರ ವೀಕ್ ಪಾಯಿಂಟ್ ಆಗಿದೆ. ಇನ್ನು ಮಂಡ್ಯದಲ್ಲಿ ಜನ ಅಭ್ಯರ್ಥಿ ನೋಡಿ ಮತ ಹಾಕಿದ್ದಾರೆಯೇ ಹೊರತು ಬಿಜೆಪಿಗಾಗಿ ಮತ ಹಾಕಿದ ಇತಿಹಾಸವಿಲ್ಲ. ಇನ್ನು ಮಧುಚಂದನ್‌ರವರ ಬೆನ್ನಿಗೆ ರೈತಸಂಘವಿದೆ. ಚತುಷ್ಕೋನ ಸ್ಪರ್ಧೆ ಏರ್ಪಡುವ ಸಂಭವವಿದ್ದು, ಮುಖ್ಯವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರಾನೇರ ಕದನ ನಡೆಯುವ ಸೂಚನೆ ಕಂಡುಬರುತ್ತಿದೆ.

ಇದನ್ನೂ ಓದಿ: ಬಿಜೆಪಿ ಸೇರಿದ ಎಲ್.ಆರ್ ಶಿವರಾಮೇಗೌಡ: ನಾಗಮಂಗಲ ಕ್ಷೇತ್ರದ ಸ್ಥಿತಿಗತಿ ಹೀಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...