Homeಮುಖಪುಟಸುದೀಪ್ ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ, ಜನರ ಟೀಕೆಗೆ ಸಿದ್ದರಾಗಿ: ಪ್ರಕಾಶ್ ರಾಜ್

ಸುದೀಪ್ ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ, ಜನರ ಟೀಕೆಗೆ ಸಿದ್ದರಾಗಿ: ಪ್ರಕಾಶ್ ರಾಜ್

- Advertisement -
- Advertisement -

ಕನ್ನಡ ಚಿತ್ರ ನಟ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿಯವರು ಮತ್ತು ಅವರು ಹೇಳಿದವರ ಪರ ಮುಂದಿನ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ಘೋಷಿಸಿದ್ದಕ್ಕೆ ಬಹುಭಾಷ ನಟ ಪ್ರಕಾಶ್ ಪ್ರತಿಕ್ರಿಯಿಸಿದ್ದಾರೆ. ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ, ಜನರ ಟೀಕೆಗೆ ಸಿದ್ದರಾಗಿ ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.

“ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ.ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ ..ಇನ್ನು ಮುಂದೆ ನಿಮ್ಮನ್ನೂ .. ನಿಮ್ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ” ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆ ಸುದೀಪ್ ಬಿಜೆಪಿ ಸೇರ್ಪಡೆ ವಿಚಾರ ಸುಳ್ಳು ಸುದ್ದಿ ಎಂದು ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. “ಸುದೀಪ್ ಬಿಜೆಪಿ ಸೇರ್ಪಡೆ ಎಂಬುದು ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ BJP ಪಕ್ಷ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಸಂವೇದನಶೀಲ ನಾಗರೀಕರಾಗಿದ್ದು, ಈ ಸಂಚಿಗೆ ಬಲಿಯಾಗುವುದಿಲ್ಲ” ಎಂದಿದ್ದರು.

ಇದಕ್ಕೆ ಪತ್ರಿಕಾಗೋಷ್ಟಿಯಲ್ಲಿ ಉತ್ತರಿಸಿದ್ದ ಸುದೀಪ್, “ಪ್ರಕಾಶ್ ರಾಜ್‌ರವರು ಅದ್ಭುತ ಕಲಾವಿದರು. ಅವರೊಟ್ಟಿಗೆ ರನ್ನ ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಮುಂದೆ ಆದಷ್ಟು ಬೇಗ ಅವರೊಟ್ಟಿಗೆ ಸಿನಿಮಾದಲ್ಲಿ ಕೆಲಸ ಮಾಡಬೇಕು ಎಂದು ಕಾಯುತ್ತಿದ್ದೇನೆ” ಎಂದಿದ್ದರು.

ಇದನ್ನೂ ಓದಿ: ಮಾಮ ಬಸವರಾಜ ಬೊಮ್ಮಾಯಿಯವರಿಗೆ ಬೆಂಬಲ ಕೊಡುತ್ತೇನೆ: ನಟ ಸುದೀಪ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

0
ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ 2019ಕ್ಕೆ ಹೋಲಿಕೆ ಮಾಡಿದರೆ ಮುಸ್ಲಿಂ ಸಮುದಾಯಕ್ಕೆ ಈ ಬಾರಿ ಕಡಿಮೆ ಪ್ರಾತಿನಿಧ್ಯ ನೀಡಿರುವುದು ಕಂಡು ಬಂದಿದೆ. ಪ್ರಮುಖ ರಾಷ್ಟ್ರೀಯ ಪಕ್ಷ ಬಿಜೆಪಿ ಕೇವಲ ಓರ್ವ ಮುಸ್ಲಿಂ...