Homeಕರ್ನಾಟಕಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರಿದ ಅರಸೀಕೆರೆಯ ಮಾಜಿ ಶಾಸಕ ಶಿವಲಿಂಗೇಗೌಡ

- Advertisement -
- Advertisement -

ಕೆಲವು ದಿನಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರುವ ತವಕದಲ್ಲಿದ್ದರು. ಅದರಂತೆ ಭಾನುವಾರ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.

ಅರಸೀಕೆರೆಯ ಜೇನುಕಲ್‌ ಕ್ರೀಡಾಂಗಣದಲ್ಲಿ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕೆ.ಎಂ. ಶಿವಲಿಂಗೇಗೌಡರಿಗೆ ಕಾಂಗ್ರೆಸ್‌ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ”ಶಿವಲಿಂಗೇಗೌಡರನ್ನು ಸುಮಾರು 10 ವರ್ಷಗಳಿಂದ ಕಾಂಗ್ರೆಸ್‌ಗೆ ಕರೆತರಲು ಪ್ರಯತ್ನಿಸಿದ್ದರೂ ಆಗಿರಲಿಲ್ಲ. ನನ್ನ ಮತ್ತು ಸಿದ್ದರಾಮಯ್ಯನವರ ಮಾತಿಗೂ ಅವರು ಒಪ್ಟಿರಲಿಲ್ಲ. ಅಂತಿಮವಾಗಿ ಕ್ಷೇತ್ರದ ಜನರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್ ಸೇರುತ್ತಿರುವುದು ಸಂತಸದ ವಿಷಯ” ಎಂದರು.

”ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆ ಸಮಾವೇಶ ಎಂದರೆ ಇತಿಹಾಸ ಸೃಷ್ಟಿಯಾಗುತ್ತಿದೆ. ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಗೆ ಕೆ.ಎಂ. ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಿರುವುದಕ್ಕೆ ಅಧಿಕೃತವಾಗಿ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ” ಎಂದರು.

”ಹೋರಾಟ ಮಾಡುವವರು ಗೆದ್ದೇ ಗೆಲ್ಲುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದಾರೆ. ದೇವರು ಕೊಟ್ಟ ಅವಕಾಶವನ್ನು ಉಪಯೋಗಿಸಿಕೊಳ್ಳುವುದು ಸಾಧನೆ. ನಂಬಿಕೆ ಮೇಲೆ ಎಲ್ಲರೂ ಬದುಕುತ್ತಿದ್ದೇವೆ. ದೇಶದ ಶಕ್ತಿ ಕಾಂಗ್ರೆಸ್. ಸಾಮಾಜಿಕ ಬದ್ದತೆ, ಬಡವರು ಮತ್ತು ರೈತರನ್ನು ಸಬಲರನ್ನಾಗಿಸುವುದು ಕಾಂಗ್ರೆಸ್ ಉದ್ದೇಶ. ರಾಜ್ಯದ ಹಿತಕ್ಕಾಗಿ ಸ್ವಾಭಿಮಾನ ಬದಿಗೊತ್ತಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಡುತ್ತಿದ್ದೇವೆ” ಎಂದು ಹೇಳಿದರು.

”ಮೇ 10 ಕೇವಲ ಮತದಾನ ಮಾಡುವ ದಿನವಲ್ಲ, ಅದು ಕಾಂಗ್ರೆಸ್ ಅಧಿಕಾರಕ್ಕೆ ತರುವ ದಿನವಾಗಿದೆ, ಎಲ್ಲರೂ ತೀರ್ಮಾನಿಸುವ ದಿನ. ಕಮಲ ಕೆರೆಯಲ್ಲಿದ್ದರೆ ಚೆನ್ನ, ಜೆಡಿಎಸ್ ಹೊಲದಲ್ಲಿದ್ದರೆ ಚೆನ್ನ, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಚೆನ್ನ. ಈ ನಿಟ್ಟಿನಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ರಾಜೀನಾಮೆ; ಕಾಂಗ್ರೆಸ್ ಸೇರುವ ಸಾಧ್ಯತೆ

”ಯಾರೂ ಹಸಿದುಕೊಂಡು ಇರಬಾರದು ಎಂದು ಕಾಂಗ್ರೆಸ್ 10 ಕೆ.ಜಿ. ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ₹2 ಸಾವಿರ ನೀಡಲು ನಿರ್ಧರಿಸಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯಡಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ದರಾಗಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ”ಎತ್ತಿನಹೊಳೆ ನೀರಾವರಿ ಯೋಜನೆ ತಾಲ್ಲೂಕಿಗೆ ಕೊಟ್ಟಿದ್ದು ಕಾಂಗ್ರೆಸ್, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಎತ್ತಿನಹೊಳೆ ನೀರಾವರಿ ಯೋಜನೆ ಹಣ ಲೂಟಿ ಮಾಡುವ ಯೋಜನೆಯಾಗಿದೆ. ಇದರ ಉದ್ಘಾಟನೆ ಸಮಾರಂಭಕ್ಕೆ ಹೋಗಬೇಡ ಎಂದು ನನ್ನ ಮೇಲೆ ಒತ್ತಡ ಹಾಕಿದ್ದರು. ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಜೆಡಿಎಸ್ ಶಾಸಕನಾಗಿ ನಾನೊಬ್ಬನೇ ಅಂದು ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭಕ್ಕೆ ಹೋಗಿದ್ದೆ. ಸದನದಲ್ಲಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಕ್ಕೆ ಜೆಡಿಎಸ್‌ನವರು ನನ್ನನ್ನು ವಿರೋಧಿಸಲು ಆರಂಭಿಸಿದರು” ಎಂದು ತಿಳಿಸಿದರು.

”ಬಿಜೆಪಿ ಭ್ರಷ್ಟಾಚಾರದ ಪಕ್ಷವಾಗಿದೆ. ಬಿಜೆಪಿಯಂಥ ನೀತಿಗೆಟ್ಟ ಸರ್ಕಾರ ಯಾವುದೂ ಇಲ್ಲ. ಬಿಜೆಪಿ ಅಭ್ಯರ್ಥಿ ಎಂದು ಬಂದಿರುವ ವ್ಯಕ್ತಿ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಸಿಲಿಂಡರ್ ಬೆಲೆ ಹಾಗೂ ಗೊಬ್ಬರದ ಬೆಲೆ ಏರಿಕೆ ಮಾಡುತ್ತಿದೆ. ರೈತರು ಹಾಗೂ ಸಾಮಾನ್ಯ ಜನರು, ಬಡವರನ್ನು ಸುಲಿಗೆ ಮಾಡುತ್ತಿರುವುದೇ ಬಿಜೆಪಿ ಸರ್ಕಾರದ ಸಾಧನೆ. ಕೊಬ್ಬರಿ ಬೆಂಬಲ ಬೆಲೆ ನಿಗದಿಯಲ್ಲಿ ರೈತರಿಗೆ ಅನ್ಯಾಯ ಮಾಡುತ್ತಿದೆ. ಆದಾನಿ, ಅಂಬಾನಿ ಸೇರಿದಂತೆ ದೊಡ್ಡ ಕಾರ್ಪೋರೇಟ್ ಕಂಪೆನಿಗಳನ್ನು ಬೆಳೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದಿನೇ ದಿನೇ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ” ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ”ಕಾಂಗ್ರೆಸ್‌ ಪಕ್ಷ ನಮ್ಮೂರಿಗೆ ಬಂದು ನನ್ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ಅದೇ ರೀತಿ ನಿಮ್ಮೂರಿಗೆ ಬಂದು ಶಿವಲಿಂಗೇಗೌಡರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತಿದ್ದೇವೆ. ನಿನಗೆ ನೀರಿಗೆ ಹಾಕಲ್ಲ, ಹಾಲಿಗೆ ಹಾಕೇ ಹಾಕುತ್ತೇವೆ. ನಿನ್ನ ಮತ್ತು ನಿನ್ನ ಕ್ಷೇತ್ರವನ್ನೂ ಕ್ಷೇಮವಾಗಿ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

”ಜೆಡಿಎಸ್‌ನಲ್ಲಿ ಎಚ್.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಹೇಳಿದ್ದನ್ನು ಕೇಳಿಕೊಂಡು ಇರಬೇಕು. ಪ್ರಶ್ನೆ ಮಾಡಿದವರನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತಾರೆ. ಶಿವಲಿಂಗೇಗೌಡರಿಗೂ ಅದನ್ನೇ ಮಾಡಿದ್ದು” ಎಂದರು..

”ಶಿವಲಿಂಗೇಗೌಡರು ಜೆಡಿಎಸ್ ಶಾಸಕರಾಗಿದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳ ಜೊತೆ ಉತ್ತಮ ಒಡನಾಟ ಇಟ್ಟುಕೊಂಡು ಹೆಚ್ಚು ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದರು.

”ಎತ್ತಿನಹೊಳೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಂಜೂರು ಮಾಡಿಸಿಕೊಂಡು ಜನರ ಸೇವೆ ಮಾಡಿದ್ದಾರೆ ಕ್ಷೇತ್ರದ ಜನತೆಗೆ ಕುಡಿಯುವ ನೀರನ್ನು ಕೊಟ್ಟಿದ್ದು ಶಿವಲಿಂಗೇಗೌಡ. ಎತ್ತಿನಹೊಳೆ ನೀರಾವರಿ ಯೋಜನೆ ಉದ್ಘಾಟನೆ ಸಮಾರಂಭಕ್ಕೆ ಶಿವಲಿಂಗೇಗೌಡ ಹೊರತಪಡಿಸಿ, ಉಳಿದ ಜೆಡಿಎಸ್ ಶಾಸಕರು ಸಮಾರಂಭಕ್ಕೆ ಬರಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಎತ್ತಿನಹೊಳೆ ನೀರಾವರಿ ಯೋಜನೆ ವಿರೋಧಿಸಿದ್ದರು. ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದ ನಂತರ ಬಂದ ಬೇರೆ ಪಕ್ಷಗಳ ಸರ್ಕಾರಗಳು ಎತ್ತಿನಹೊಳೆ ಯೋಜನೆಗೆ ಹಣ ಮಂಜೂರು ಮಾಡುತ್ತಿಲ್ಲ” ಎಂದು ಸಿದ್ದರಾಮಯ್ಯ ದೂರಿದರು.

ಈ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಪ್ರಕಾಶ್ ರಾಠೋಡ್, ಮಾಜಿ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷ ಶಿವಶಂಕರಸ್ವಾಮಿ, ಪಟೇಲ್ ಶಿವಪ್ಪ, ಸಿ.ಎಸ್ ಪುಟ್ಟೇಗೌಡ, ಗೋಪಾಲಸ್ವಾಮಿ, ಬಾಗೂರು ಮಂಜೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ್, ಮೆಟ್ರೊ ಬಾಬು, ಮಹಿಳಾ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾ ಚಂದನ್, ಜಿಲ್ಲಾ ಹಾಗೂ ತಾಲ್ಲೂಕು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...