Homeಕರ್ನಾಟಕ'ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!': ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

‘ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!’: ಮೋದಿ ನಡೆಸಿದ ಸಫಾರಿ ಕುರಿತು ಎಚ್‌ಡಿಕೆ ಟೀಕೆ

- Advertisement -
- Advertisement -

”ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷವಾದ ಬಿಜೆಪಿಯ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು, ಇದು ಬಿಜೆಪಿಯ (ಭರ)ವರಸೆ” ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಬಂಡೀಪುರದಲ್ಲಿ ಪ್ರಧಾನಿ ಮೋದಿ ನಡೆಸಿದ ಸಫಾರಿ ಹಾಗೂ ನಂದಿನಿ ಹಾಲಿನ ವಿಚಾರವಾಗಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ”ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ!” ಎಂದು ಟೀಕಿಸಿದ್ದಾರೆ.

”ಪ್ರಧಾನಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎಂದು ಸಚಿವ ಶ್ರೀ ಅಶ್ವತ್ಥ್ ನಾರಾಯಣ್ ಅವರ ಕುಹಕದ ಮಾತುಗಳನ್ನಾಡುತ್ತಾರೆ” ಎಂದು ಮೋದಿ ಅವರ ಕ್ಷಣಕ್ಕೊಮ್ಮೆ ಬದಲಾಯಿಸುವ ಅವರ ಬಟ್ಟೆಯ ಬಗ್ಗೆ ಹೆಚ್‌ಡಿಕೆ ಟೀಕಿಸಿದ್ದಾರೆ.

”ಇನ್ನೊಬ್ಬರು, ಸಿಟಿ ರವಿ ಎನ್ನುವ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತು ನಾವು ಮಾಡುತ್ತಿಲ್ಲ” ಎಂದು ಸಿಟಿ ರವಿ ಅವರಿಗೆ ತಿರುಗೇಟು ನೀಡಿದ್ದಾರೆ.

”ಅಸಲಿ ವಿಷಯ ಅದಲ್ಲ! ಈಗಲ್ಲ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು” ಎಂದು ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

”ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು” ಎಂದು ಕಿಡಿಕಾರಿದ್ದಾರೆ.

”ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಎಚ್‌ಡಿ ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು” ಎಂಬುದಾಗಿ ತಿಳಿಸಿದ್ದಾರೆ.

”ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು. ಈಗ ಪಾತ್ರಗಳು ಬದಲಾಗಿವೆ. ಸಿಟಿ ರವಿ, ಡಾ.ಸುಧಾಕರ್, ಡಾ. ಅಶ್ವತ್ಥ್ ನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ” ಎಂದು ಹೇಳಿದ್ದಾರೆ.

”ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ” ಎಂದು ಹೇಳಿದ್ದಾರೆ.

”ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ಎನ್ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಕೇಂದ್ರ ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ” ಎಂದು ಟೀಕಿಸಿದ್ದಾರೆ.

”ಕೈಗಾರಿಕೆ, ಐಟಿಬಿಟಿ, ವಿಜ್ಞಾನ, ಆವಿಷ್ಕಾರ, ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ  ಬಿಜೆಪಿಯ ಕುಟಿಲನೀತಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿಯ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ.
ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!!” ಎಂದು ಎಚ್ಚರಿಸಿದ್ದಾರೆ.

ಕುಮಾರಸ್ವಾಮಿ ಅವರು ಮುಂದುವರೆದು, ಸಿಆರ್‌ಪಿಎಫ್‌ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲೀಷ್‌ನಲ್ಲಿ ಮಾತ್ರ ಅವಕಾಶ ನೀಡಿರುವ ಬಗ್ಗೆಯೂ ಕಿಡಿಕಾರಿರುವ ಎಚ್‌ಡಿ ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

”9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತವೆಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಬರೆಯುವುದನ್ನು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ” ಎಂದು ಕಿಡಿಕಾರಿದ್ದಾರೆ.

”ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷಿನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶ. ಇದು ಸ್ಪಷ್ಟ” ಎಂದಿದ್ದಾರೆ.

”ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಲೇಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು” ಎಂದು ಆಕ್ರೋಶ ಹೊರಹಾಕಿದ್ದಾರೆ.

”ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ” ಎಂದು ಹೇಳಿದ್ದಾರೆ.

”ಮುಲಾಜಿಲ್ಲದೆ ಸಿಆರ್‌ಪಿಎಫ್ ನೇಮಕಾತಿಯ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು” ಎಂದು ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...