Homeಕರ್ನಾಟಕಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ''100% ಬದ್ಧತೆ''ಯ ಸರ್ಕಾರ ಬೇಕು: ಶಶಿ ತರೂರ್

ಕರ್ನಾಟಕದ ಜನತೆಗೆ 40% ಕಮಿಷನ್‌ ಸರ್ಕಾರ ಬೇಡ, ”100% ಬದ್ಧತೆ”ಯ ಸರ್ಕಾರ ಬೇಕು: ಶಶಿ ತರೂರ್

- Advertisement -
- Advertisement -

ಕರ್ನಾಟಕದ ಜನರು 40% ಕಮಿಷನ್‌ನಿಂದ ಬೇಸತ್ತಿದ್ದಾರೆ ಮತ್ತು ”ಶೇ 100 ರಷ್ಟು ಬದ್ಧತೆ”ಯನ್ನು ನೀಡುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಬಯಸುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಭಾನುವಾರ ಹೇಳಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರ ಮಟ್ಟದ ಆಡಳಿತದಲ್ಲಿನ ”ಗಂಭೀರ ಸಮಸ್ಯಗಳನ್ನು” ನಿಭಾಯಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಿರುವನಂತಪುರಂ ಸಂಸದ ತರೂರ್ಅವರು, ”ಈ ರಾಜ್ಯದ ಜನರು ಶೇಕಡಾ 40 ರಷ್ಟು ಕಮಿಷನ್‌ನಿಂದ ಬೇಸತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರಿಗೆ ಬೇಕಾಗಿರುವುದು 100 ಪ್ರತಿಶತ ಬದ್ಧತೆ ಮತ್ತು ಅದನ್ನೇ ನಾವು ನೀಡುತ್ತೇವೆ” ಎಂದು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿರುವಾಗ ಮತ್ತೆ ರಾಜ್ಯ ಬಿಜೆಪಿ ಸರ್ಕಾರದ 40% ಕಮೀಷನ್ ಆರೋಪವನ್ನು ಪುನರುಚ್ಚಿಸಿರುವ ತರೂರ್, ”ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಗುತ್ತಿಗೆದಾರರು, ಅನುದಾನರಹಿತ ಖಾಸಗಿ ಶಾಲೆಗಳು ಮತ್ತು ಕೆಲವು ಧಾರ್ಮಿಕ ಸಂಸ್ಥೆಗಳಿಂದ ಪಡೆದ ಅನುದಾನದಲ್ಲಿ ಶೇಕಡಾ 40 ರಷ್ಟು ಕಮಿಷನ್ ಸಂಗ್ರಹಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ದುರಾಡಳಿ ನಡೆಯುತ್ತಿದ್ದು, ಮೂಲಸೌಕರ್ಯಗಳ ವಿಚಾರದಲ್ಲಿ ಬೆಂಗಳೂರು ನಗರ ಮುಜುಗರಕ್ಕಿಡಾಗುತ್ತಿದೆ ಎಂದು ತರೂರ್ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಔಷಧಗಳ ಬೆಲೆ ಶೇ.12.12ರಷ್ಟು ಹೆಚ್ಚಳ: ಬಿಜೆಪಿ ವಿರುದ್ಧ ಕಿಡಿಕಾರಿದ ವಿಪಕ್ಷಗಳು

”ನಮ್ಮ ಸಂದೇಶವು ತುಂಬಾ ಸರಳವಾಗಿದೆ. ದುರದೃಷ್ಟವಶಾತ್, ನಾಲ್ಕು ವರ್ಷಗಳಿಂದ ನಾವು ಅತ್ಯಂತ ಕೆಟ್ಟ ಆಡಳಿತವನ್ನು ನೋಡಿದ್ದೇವೆ. ಈ ಕೆಟ್ಟ ಆಡಳಿತದಿಂದ ಬೇಸತ್ತಿರುವ ಜನರು ಅನಿವಾರ್ಯವಾಗಿ ಬೇರೆ ಸರ್ಕಾರ ಬೇಕು ಎಂದು ಬಯಸುತ್ತಿದ್ದಾರೆ” ಎಂದು ತರೂರ್ ಹೇಳಿದರು.

ಈ ರಾಜ್ಯ ಬಿಜೆಪಿ ಸರ್ಕಾರಕ್ಕೆ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಾಗಿಲ್ಲ ಹಾಗಾಗಿ ಆ ಅಗತ್ಯಗಳನ್ನು ಪೂರೈಸಲು ಕಾಂಗ್ರೆಸ್ ಪಕ್ಷವು ಈಗಾಗಲೇ ಹಲವಾರು ”ಗ್ಯಾರೆಂಟಿ ಭರವಸೆಗಳನ್ನು” ಹೊರತಂದಿದೆ ಎಂದು ಹೇಳಿದರು.

ರಾಜ್ಯದಲ್ಲಿನ ನಿರುದ್ಯೋಗಿ ಪದವೀಧರರು ಮತ್ತು ನಿರುದ್ಯೋಗಿ ಡಿಪ್ಲೊಮಾ-ಹೋಲ್ಡರ್‌ಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ಬೆಂಬಲ ನೀಡಲು ಕಾಂಗ್ರೆಸ್ ಯುವನಿಧಿ ಎನ್ನುವ ಯೋಜನೆಯನ್ನು ತರುತ್ತಿದೆ ಎಂದು ಅವರು ಹೇಳಿದರು. ಇದರಿಂದಾಗಿ ಅವರು ಹುಡುಕುತ್ತಿರುವ ಸಂದರ್ಭದಲ್ಲಿ ಸ್ವಾಭಿಮಾನದಿಂದ ಬದುಕಬಹುದು. ಇನ್ನು ಮನೆಯ ಹೆಣ್ಣುಮಕ್ಕಳನ್ನು ಗೌರವಿಸಲು ಗೃಹಲಕ್ಷ್ಮೀ ಯೋಜನೆ ತರಲಾಗುತ್ತಿದೆ. ಇದರಿಂದ ವೇತನವಿಲ್ಲದೇ ಮನೆಯಲ್ಲಿ ದುಡಿಯುತ್ತಿರುವ ಗೃಹಿಣಿಯರು ಸ್ವಲ್ಪ ಪರಿಹಾರವನ್ನು ಪಡೆಯಬಹುದು ಎಂದು ಅವರು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ, ”ಕಳೆದ ಕೆಲವು ತಿಂಗಳುಗಳಲ್ಲಿ ಹಲವಾರು ಶಾಸಕರು ಮತ್ತು ಎಂಎಲ್‌ಸಿಗಳು ಸಹ ಇತರ ಪಕ್ಷಗಳಿಂದ ಕಾಂಗ್ರೆಸ್‌ಗೆ ಸೇರಿದ್ದಾರೆ” ಎಂದು ತಿಳಿಸಿದರು.

”ಕರ್ನಾಟಕದ ಪರಿಸ್ಥಿತಿಯನ್ನು ಗಮನಿಸಿದರೆ, ಕಳೆದ ಕೆಲವು ತಿಂಗಳುಗಳಲ್ಲಿ ಐವರು ಶಾಸಕರು, ಇಬ್ಬರು ಎಂಎಲ್‌ಸಿಗಳು, 11 ಮಾಜಿ ಶಾಸಕರು, ನಾಲ್ವರು ಮಾಜಿ ಎಂಎಲ್‌ಸಿಗಳು ಮತ್ತು ಒಬ್ಬ ಮಾಜಿ ಸಂಸದರು ಕಾಂಗ್ರೆಸ್‌ಗೆ ಸೇರಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತದೆ ಎಂದು ಇತರ ಪಕ್ಷದವರಿಗು ತಿಳಿದಿದೆ ಎಂದು ಅವರು ಹೇಳಿದರು.

ಆದರೆ, ಬಿಜೆಪಿಗೆ ಸೇರ್ಪಡೆಯಾದ ಕಾಂಗ್ರೆಸ್ ಸದಸ್ಯರ ಬಗ್ಗೆ ನನಗೆ ನಿರಾಸೆಯಾಗಿದೆ. ಅವರು ಕಾಂಗ್ರೆಸ್ ಬಿಡುವಾಗ ಅದೇ ಮೌಲ್ಯಗಳನ್ನು ಹೊಂದಿರುವ ಬೇರೆ ಯಾವ ಪಕ್ಷಕ್ಕಾದರೂ ಸೇರಬಹುದಿತ್ತು. ಆದರೆ ಕೋಮುವಾದಿ ಬಿಜೆಪಿ ಪಕ್ಷ ಸೇರಿದ್ದಾರೆ. ವಿರುದ್ಧವಾದ ಮೌಲ್ಯಗಳು ಮತ್ತು ತತ್ವಗಳನ್ನು ಹೊಂದಿರುವ ಪಕ್ಷಕ್ಕೆ ಅವರು ಹೇಗೆ ಹೋಗುತ್ತಾರೆ ಎಂದು ಅವರು ಆಶ್ಚರ್ಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...