Homeಮುಖಪುಟಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

- Advertisement -
- Advertisement -

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಲು ಆಹ್ವಾನಿಸುತ್ತೇವೆ. ಈ ಪಂಥಾಹ್ವಾನವನ್ನು ಸ್ವೀಕಾರ ಮಾಡುವರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್‌ನ ಶೂದ್ರ ನಾಯಕರ ವಿರುದ್ಧ ಬಿಜೆಪಿಯ ಶೂದ್ರ ನಾಯಕರನ್ನು ಛೂ ಬಿಡುವುದು ಏಕೆ? ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಬಂದು ಸ್ಪರ್ಧೆ ಮಾಡಿ ನೋಡಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದುವರೆಗೂ ವಿ.ಸೋಮಣ್ಣನವರು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರನ್ನು ಸಿದ್ದರಾಮಯ್ಯನವರನ್ನು ಎದುರಿಸಲು ಬಿಜೆಪಿ ಕಳುಹಿಸಿದೆ. ಆದರೆ ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರು ಗೆಲುವು ಸುಲಭವಲ್ಲ ಎಂದು ಅರಿತು ಚಾಮರಾಜನಗರದಲ್ಲಿಯೂ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ.

ಅದೇ ರೀತಿ ಆರ್ ಅಶೋಕ್‌ರವರು ಕನಕಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಅಲ್ಲಿ ಗೆಲುವು ಸುಲಭವಲ್ಲ ಎಂದು ತಿಳಿದು ಪದ್ಮನಾಭನಗರದಲ್ಲಿ ಅಶೋಕ್‌ರವರಿಗೆ ಟಿಕೆಟ್ ನೀಡಲಾಗಿದೆ.

ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, “ನಾಗಪುರದ ವಂಶದವರು ಇತರರನ್ನ ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ” ಎಂದು ಸವಾಲು ಹಾಕಿದೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆ ಜೋರಾಗಿದೆ. ಬಿಜೆಪಿಗೆ ಕೌಂಟರ್ ಆಗಿ ಡಿ.ಕೆ ಸುರೇಶ್ ಪದ್ಮನಾಭನಗರದಲ್ಲಿ, ಯತೀಂದ್ರ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಸ್ಪರ್ಧಿಸಲೇಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ.

ಸಿದ್ದರಾಮಯ್ಯ, ರಾಹುಲ್ ಗಾಂಧಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ಸೋಲಿನ ಭಯ ಕಾರಣ. ಅದೇ ನರೇಂದ್ರ ಮೋದಿ, ಆಶೋಕ, ಸೋಮಣ್ಣ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ದೇಶಭಕ್ತಿ ಕಾರಣ. ನಮ್ಮಲ್ಲಿ standard ಅನ್ವಯವಾಗುವುದು ಕಾಂಗ್ರೇಸಿಗೆ ಮಾತ್ರ. ಬಿಜೆಪಿಗೆ ಯಾವುದೇ standard ಇಲ್ಲ, ಅಲ್ವಾ? ಎಂದು ಅಲ್ಮೇಡ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ನಂದು ಈಗಲೂ ಅದೇ ಮಾತು. ದಮ್ಮು, ತಾಕತ್ತು ಇದ್ದಿದ್ದರೆ ಸಿದ್ಧರಾಮಯ್ಯ ವಿರುದ್ಧ ಸಂತೋಷನನ್ನೂ, ಡಿಕೆಶಿ ವಿರುದ್ಧ ತೇಜಸ್ವಿಯನ್ನೂ ನಿಲ್ಲಿಸಬೇಕಿತ್ತು ಎಂದು ದಿನೇಶ್ ಕುಮಾರ್ ದಿನೂ ಸವಾಲು ಹಾಕಿದ್ದರು.

“ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಯ್ಕೆಯಾದರೂ ಸಹ ವಿ. ಸೋಮಣ್ಣವರ ಸ್ಥಿತಿ ದಯನೀಯವಾಗಿದೆ.
ಈ ರೀತಿ ಕೊಡುವುದಕ್ಕಿಂತ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ ಎಂದು ಜಗದೀಶ್ ಶೆಟ್ಟರ್ ನಿಟ್ಟುಸಿರು ಬಿಡುತ್ತಿರಬಹುದು. ಹಾಲಿ ಶಾಸಕರಾಗಿದ್ದ ಅವರನ್ನು ಗೋವಿಂದರಾಜ ನಗರದಿಂದ ಕಿತ್ತು ಚಾಮರಾಜನಗರಕ್ಕೆ ತಂದು ಕೂಡಿಸಿ ಗೋಳಾಡಿಸಿದ್ದನ್ನು ಹೇಗೋ ನುಂಗಿಕೊಳ್ಳಬಹುದು. ಆದರೆ ‘ಬೇಡ್ರೋ ಬೇಡ್ರಪ್ಪ’ ಅಂತ ಕೇಳಿಕೊಂಡರೂ ವರುಣಾದಲ್ಲಿ ತಳ್ಳಿ ಆಟವಾಡುತ್ತಿರುವುದು ನೋಡಿದರೆ ಬೆಕ್ಕಿಗೆ ಚೆಲ್ಲಾಟ… ಎಂಬಂತಾಗಿದೆ ಸೋಮಣ್ಣವರ ಸ್ಥಿತಿ ಈ ನಗು ಇನ್ನೆಲ್ಲಿ? ಬ್ರಾಹ್ಮಣರಿಗೆಲ್ಲಾ ಸೇಫ್ ಕ್ಷೇತ್ರಗಳು… ಬ್ರಾಹ್ಮಣೇತರರಿಗೆ ರಿಸ್ಕ್ ಆಂಗಳ…. ಬಿಜೆಪಿಯ ಚಾತುರ್ವರ್ಣ ನೀತಿ….” ಎಂದು ಶ್ರೀಪಾದ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿ.ಸೋಮಣ್ಣ ಮತ್ತು ಆರ್.ಅಶೋಕ್ ಸುರಕ್ಷಿತ ಕ್ಷೇತ್ರ ಉಳಿಸಿಕೊಂಡೇ ವರುಣಾ ಮತ್ತು ಕನಕಪುರ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ. ನಿರಾಯಾಸ ಗೆಲುವು! ಎಂದು ಚಂದ್ರಕಾಂತ ವಡ್ಡುರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ; ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...