Homeಮುಖಪುಟಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

ಉತ್ತರ ಪ್ರದೇಶ: ಪೊಲೀಸ್ ಭದ್ರತೆಯಲ್ಲೇ ದುಷ್ಕರ್ಮಿಗಳ ಗುಂಡೇಟಿಗೆ ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಬಲಿ

- Advertisement -
- Advertisement -

ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿದ್ದಾರೆ.

ಗ್ಯಾಂಗ್‌ಸ್ಟರ್‌ ಅತೀಕ್‌, ಅಶ್ರಫ್‌ ಮೇಲೆ ಗುಂಡಿನ ದಾಳಿ ನಡೆಸುತ್ತಿರುವ ದೃಶ್ಯ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕೃತ್ಯ ಎಸಗಿದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೂವರು ಆರೋಪಿಗಳನ್ನು ಅರುಣ್ ಮೌರ್ಯ, ಲವಲೇಶ್ ತಿವಾರಿ ಮತ್ತು ಸನ್ನಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಪತ್ರಿಕಾ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.

ಅತಿಕ್ ಅಹಮದ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಶೂಟರ್ ಲವಲೇಶ್ ತಿವಾರಿ ತಂದೆ ಯಜ್ಞ ತಿವಾರಿ ಮಾತನಾಡಿ, ”ನಮಗೂ ಅವನಿಗೂ ಯಾವುದೇ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ಮಾಧ್ಯಮದವರ ಎದುರೇ ಪತ್ರಕರ್ತರ ಸೋಗಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅತೀಕ್‌ ಮತ್ತು ಅಶ್ರಫ್‌ ಮೇಲೆ ಏಕಾಏಕಿ ದಾಳಿ ನಡೆಸಿದರು. ತೀರಾ ಹತ್ತಿರದಲ್ಲಿಯೇ ದಾಳಿ ನಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಡರಾತ್ರಿ ನಡೆದ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಜಾಗರೂಕರಾಗಿರಲು ಮತ್ತು ರಾಜ್ಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಸೂಚನೆ ನೀಡಿದ್ದಾರೆ. ಘಟನೆಯ ನಂತರ, ಎಲ್ಲಾ 75 ಯುಪಿ ಜಿಲ್ಲೆಗಳಲ್ಲಿ ಸಿಆರ್‌ಪಿಸಿ ಸೆಕ್ಷನ್ 144ಅನ್ನು ವಿಧಿಸಲಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ರಂಜಾನ್ ಪ್ರಾರ್ಥನಾ ಸಭೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ

ಘಟನೆಯ ಬಗ್ಗೆ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಯೋಗಿ ಆದಿತ್ಯನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಯುಪಿ ಗೃಹ ಕಾರ್ಯದರ್ಶಿ ಸಂಜಯ್ ಪ್ರಸಾದ್, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್ ಕೆ ವಿಶ್ವಕರ್ಮ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಯಾಗ್‌ರಾಜ್ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು ಈ ಬಗ್ಗೆ ಮೇಲ್ವಿಚಾರಣೆ ಮಾಡಲು ಮತ್ತು ಈ ನಿಟ್ಟಿನಲ್ಲಿ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಜನರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ರಾಜ್ಯ ಪೊಲೀಸ್ ಸಾಮಾಜಿಕ ಮಾಧ್ಯಮ ತಂಡಕ್ಕೆ ಆದೇಶಿಸಿದ್ದಾರೆ.

ಈ ಘಟನೆ ಕುರಿತು ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದು, ”ಬಿಜೆಪಿ ಭಾರತವನ್ನು ಮಾಫಿಯಾ ಗಣರಾಜ್ಯವನ್ನಾಗಿ ಮಾಡಿದೆ ಎಂದು ಇಲ್ಲಿಯೂ ಹೇಳುತ್ತೇನೆ, ವಿದೇಶದಲ್ಲೂ ಹೇಳುತ್ತೇನೆ, ಎಲ್ಲೆಲ್ಲೂ ಹೇಳುತ್ತೇನೆ ಏಕೆಂದರೆ ಇದು ಸತ್ಯ. ಬಂಧನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಮತ್ತು ಕ್ಯಾಮೆರಾಗಳ ಮುಂದೆಯೇ ಗುಂಡಿಕ್ಕಿ ಕೊಂದರು- ಇದು ಕಾನೂನು ನಿಯಮಗಳ ಸಾವು” ಎಂದಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, “ಉತ್ತರ ಪ್ರದೇಶದಲ್ಲಿ ಅಪರಾಧ ಉತ್ತುಂಗಕ್ಕೇರಿದೆ ಮತ್ತು ಅಪರಾಧಿಗಳು ಬೆಚ್ಚಿಬೀಳುತ್ತಿಲ್ಲ. ಪೊಲೀಸ್ ಸರ್ಪಗಾವಲಿನ ನಡುವೆ ಯಾರನ್ನಾದರೂ ಗುಂಡಿಕ್ಕಿ ಕೊಲ್ಲಬಹುದು, ಆಗ ಸಾಮಾನ್ಯರ ಪಾಡೇನು? ಇದರಿಂದ ಸಾರ್ವಜನಿಕರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಕೆಲವರು ಉದ್ದೇಶಪೂರ್ವಕವಾಗಿ ಇಂತಹ ವಾತಾವರಣ ಸೃಷ್ಟಿಸುತ್ತಿರುವಂತೆ ಕಾಣುತ್ತಿದೆ”

ಅತೀಕ್-ಅಶ್ರಫ್ ಹತ್ಯೆ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಾತನಾಡಿದ್ದು, ”ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಮತ್ತು ಈ ಬಗ್ಗೆ ತಂಡವನ್ನು ರಚಿಸಿ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ಗೆ ನಾನು ಒತ್ತಾಯಿಸುತ್ತೇನೆ. ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ತೆಗೆದುಹಾಕಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್‌ ಅವರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಆರೋಪಿಗಳಾಗಿದ್ದರು.

ಗುರುವಾರ ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ನಡೆಸಿದ ಎನ್‌ಕೌಂಟರ್‌ನಲ್ಲಿ ಉಮೇಶ್‌ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್‌ ಅಹ್ಮದ್‌ನ ಪುತ್ರ ಅಸಾದ್‌ ಹಾಗೂ ಆತನ ಸಹಚರ ಗುಲಾಮ್‌  ಹತ್ಯೆಯಾಗಿದ್ದರು. ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಮೇಲೆ ಉಮೇಶ್‌ ಪಾಲ್‌ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...