Homeಕರ್ನಾಟಕಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

- Advertisement -
- Advertisement -

ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿನಾಕಾರಣ ಸುಳ್ಳು ಆರೋಪ ಮಾಡಿದ್ದು, ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಬುಧವಾರ(ಏ.12)ದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿವಿಯ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದಾರೆ.

ಕೇಂದ್ರೀಯ ವಿಶ್ವ ವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿ ನಂದಪ್ಪ ತನ್ನ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳು ಮತ್ತು ವಿಚಾರಣೆ ಹೆಸರಲ್ಲಿ ನೀಡುತ್ತಿರುವ ಮಾನಸಿಕ ಕಿರುಕುಳ ನಿಲ್ಲಿಸಬೇಕೆಂದು ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಿರತ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿ ನಂದಪ್ಪನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರ ನಟ ಚೇತನ್ ಅಹಿಂಸಾ ಅವರು ಸಂಶೋಧನಾ ವಿದ್ಯಾರ್ಥಿಯನ್ನು ಇಂದು ಭೇಟಿಯಾಗಿದ್ದು, ಆ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ”ವಿಶ್ವವಿದ್ಯಾನಿಲಯದ ಪ್ರಾಬಲ್ಯದ ಶಕ್ತಿಗಳಿಂದ ಅವರು ಮತ್ತು ಬಹುಜನ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಕಿರುಕುಳವನ್ನು ವಿರೋಧಿಸಿ 5 ದಿನಗಳ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿ ಹೋರಾಟಗಾರ ನಂದ ಕುಮಾರ್ ಅವರನ್ನು ನಾನು ಇಂದು ಕಲ್ಬುರ್ಗಿಯಲ್ಲಿ ಭೇಟಿಯಾದೆ. ನಂದ ಕುಮಾರ್ ಅವರ ಪಕ್ಕದಲ್ಲಿ ಬಾಬಾಸಾಹೇಬ್ ಮತ್ತು ಬಸವನ ಪುಸ್ತಕಗಳಿದ್ದವು – ಸತ್ಯವು ಮೇಲುಗೈ ಸಾಧಿಸುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿಶ್ವವಿದ್ಯಾಲಯವು ಸುಳ್ಳು ಆರೋಪ ಮಾಡಿದ್ದು, ಪ್ರಕರಣ ದಾಖಲಿಸಿದೆ. ಅಷ್ಟೇ ಅಲ್ಲದೆ ಅನಾವಶ್ಯಕವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಇದರಿಂದ ವೈಯಕ್ತಿಕ ಕಾರಣಗಳಿಗೆ ಹೊರಗೆ ಓಡಾಡುವಾಗ ಅನಗತ್ಯವಾಗಿ ತೊಂದರೆ ಆಗುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿಯ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಕೆಲವು ದಿನಗಳಿಂದ ಎಬಿವಿ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳಿಂದ ನನಗೆ ಹಿಂಸೆಯಾಗಿದೆ. ನನ್ನ ಜೊತೆ ಇನ್ನು ಇಬ್ಬರು ಸ್ನೇಹಿತರ ಮೇಲೂ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದಲ್ಲದೆ, ‘ಹೊರಗೆ ಸಿಗು ನೋಡಿಕೊಳ್ಳುತ್ತೇವೆ’ ಎಂದು ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯೂ ಅವರ ಪರವಾಗಿಯೇ ಇದೆ. ಆಡಳಿತ ಮಂಡಳಿಗೆ ನಾನೂ ಕೂಡ ದೂರು ನೀಡಿದ್ದು, ಕೆಲವು ಸಂಘಟನೆಗಳವರು ಅನಾವಶ್ಯಕವಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಮೇಲಿನ ಆರೋಪಗಳು ಸುಳ್ಳು. ವಿಚಾರಣೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನನಗೆ ನ್ಯಾಯ ದೊರೆಯುವವರೆಗೂ ಉಪವಾಸ ಸತ್ಯಾಗ್ರಹ ಮಾಡುತ್ತೇನೆಂದು ಈ ಮೊದಲೇ ತಿಳಿಸಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

”ಸಂಶೋಧನಾ ವಿದ್ಯಾರ್ಥಿ ನರೇಂದ್ರ ಕುಮಾರ್‌ ಸುಳ್ಳು ಆರೋಪ ಮಾಡಿ ನನ್ನ ವಿರುದ್ಧ ದೂರು ಸಲ್ಲಿಸಿದ್ದರು. ಶಿಸ್ತುಪಾಲನಾ ಸಮಿತಿಯು ವಿಚಾರಣೆಯ ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಅನುಪಸ್ಥಿತಿಯಲ್ಲಿ ಅಸಂಬದ್ಧ ಪ್ರಶ್ನೆಗಳನ್ನು ಕೇಳಿ ಗಂಟೆಗಟ್ಟಲೆ ವಿಚಾರಣೆ ನಡೆಸಿತು” ಎಂದು ಹೇಳಿದ್ದಾರೆ.

”ಶಿಸ್ತುಪಾಲನಾ ಅಧಿಕಾರಿಗಳು ವಿಚಾರಣೆ ವೇಳೆ, ದೂರಿಗೆ ಸಂಬಂಧಿತ ವಿಷಯಗಳನ್ನು ಕೇಳುವ ಹೊರತಾಗಿ ವೈಯಕ್ತಿಕ ವಿಚಾರಗಳ ಬಗ್ಗೆ ಕೇಳುತ್ತಾರೆ. ‘ನೀನು ಬೇರೆ ರಾಜ್ಯದವನಂತೆ ಕಾಣುತ್ತೀಯ, ದನದ ಮಾಂಸ ತಿನ್ನುತ್ತೀಯ. ಅದನ್ನು ಎಲ್ಲಿಂದ ತರ್ತೀರಾ’ ಎಂದು ನಿಂದಿಸುತ್ತಾರೆ. ಅನಗತ್ಯವಾಗಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ” ಎಂದು ನೋವು ತೋಡಿಕೊಂಡಿದ್ದಾರೆ.

”ವಿಶ್ವವಿದ್ಯಾಲಯದ ಕ್ಯಾಂಪಸ್ ಆವರಣ ಗಿಡ-ಮರಗಳಿಗೆ ಈಚೆಗೆ ಬೆಂಕಿ ತಗುಲಿತ್ತು. ಅದರ ಆರೋಪವನ್ನು ನನ್ನ ಮೇಲೆ ಹೊರಿಸಲಾಗಿದೆ. ಕಿರುಕುಳ ಕೊಟ್ಟು ಮಾನಸಿಕ ಒತ್ತಡ ನೀಡಲಾಗುತ್ತಿದೆ. ಇದರಿಂದಾಗಿ ಸಂಶೋಧನ ಕಾರ್ಯಗಳಿಗೂ ತೊಂದರೆ ಆಗುತ್ತಿದೆ. ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಇಲ್ಲದಿದ್ದರೆ ಕಾನೂನಿನ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...