Homeಕರ್ನಾಟಕಬಿಜೆಪಿಯ ಮತ್ತೊಂದು ವಿಕೆಟ್ ಪತನ ಸಾಧ್ಯತೆ; ಸಂಗಣ್ಣ ಕರಡಿ ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಹೆಜ್ಜೆ?

ಬಿಜೆಪಿಯ ಮತ್ತೊಂದು ವಿಕೆಟ್ ಪತನ ಸಾಧ್ಯತೆ; ಸಂಗಣ್ಣ ಕರಡಿ ಬಿಜೆಪಿ ಬಿಟ್ಟು ಜೆಡಿಎಸ್‌ನತ್ತ ಹೆಜ್ಜೆ?

- Advertisement -
- Advertisement -

ವಿಧಾನಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಪಕ್ಷ ತೊರೆಯುವ ನಾಯಕರ ಸಂಖ್ಯೆ ದಿನನಿತ್ಯ ಹೆಚ್ಚಾಗುತ್ತಲೇ ಇದೆ. ಮಾಜಿ ಉಪಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಬಿಜೆಪಿಗೆ ರಾಜೀನಾಮೆ ತೀರ್ಮಾಣದ ಬೆನ್ನಲ್ಲೇ ಇದೀಗ ಹಾಲಿ ಸಂಸದರೊಬ್ಬರು ಬಿಜೆಪಿ ಬಿಡುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡಲು ಪಕ್ಷದ ವರಿಷ್ಠರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಂಸದ ಸಂಗಣ್ಣ ಕರಡಿ ಭಾನುವಾರ ಬೆಂಬಲಿಗರ ಹಾಗೂ ಹಿತೈಷಿಗಳ ಸಭೆ ಕರೆದಿದ್ದಾರೆ. ಈ ಸಭೆಯ ಬಳಿಕ ಅವರು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಸಮಧಾನಗೊಂಡಿರುವ ಸಂಗಣ್ಣ ಅವರಿಗೆ ಶನಿವಾರ ತಡರಾತ್ರಿ ಫೋನ್‌ ಕರೆ ಮಾಡಿ ”ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರ ಕೈಗೊಳ್ಳಬೇಡಿ. ಭಾನುವಾರ ಎಲ್ಲವೂ ಪರಿಹಾರವಾಗಲಿದೆ” ಎಂದಿದ್ದಾರೆ. ಹಾಗಾಗಿ ಸಂಗಣ್ಣ ಕರಡಿ ಅವರು ವರಿಷ್ಠರಿಂದ ಏನು ಸಂದೇಶ ಬರಲಿದೆ ಎನ್ನುವುದನ್ನೂ ತಿಳಿದುಕೊಳ್ಳಲು ಕಾಯುತ್ತಿದ್ದಾರೆ.

”ರಾಜ್ಯ ನಾಯಕರು ಈ ಮೊದಲು ನನಗೆ ಟಿಕೆಟ್‌ ನೀಡಲಾಗುವುದು ಎಂದು ಭರವಸೆ ಕೊಟ್ಟಿದ್ದರು. ಬೊಮ್ಮಾಯಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ನನಗೇ ಟಿಕೆಟ್‌ ನೀಡುವಂತೆ ಕೇಂದ್ರ ನಾಯಕರಿಗೆ ಶಿಫಾರಸು ಮಾಡಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆಯ ವರದಿ ಕೂಡ ನನ್ನ ಪರವಾಗಿಯೇ ಬಂದಿದೆ. ಆದ್ದರಿಂದ ನನಗೇ ಟಿಕೆಟ್‌ ಕೊಡಬೇಕು” ಎಂದು ಸಂಗಣ್ಣ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ

ಆದರೆ ವರಿಷ್ಠರು ‘ಹಾಲಿ ಸಂಸದರು ಮತ್ತು ಅವರ ಕುಟುಂಬಕ್ಕೆ ಟಿಕೆಟ್ ನೀಡುವುದಿಲ್ಲ’ ಎಂದು ಹೇಳಿದ್ದು ಕರಡಿ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಬಿಜೆಪಿ ತೊರೆದು ಪಕ್ಷೇತರ ಅಥವಾ ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಒಲವು ಹೊಂದಿದ್ದಾರೆ ಎಂದು ಹೇಲಲಾಗುತ್ತಿದೆ. ಇದೇ ಕಾರಣಕ್ಕಾಗಿ ಜೆಡಿಎಸ್‌ ಕೊಪ್ಪಳ ಕ್ಷೇತ್ರದ ಟಿಕೆಟ್‌ ಘೋಷಣೆ ಬಾಕಿ ಉಳಿಸಲಾಗಿದೆ ಎಂದು ಜೆಡಿಎಸ್‌ ಮುಖಂಡರು ತಿಳಿಸಿದ್ದಾರೆ.

ಸಂಗಣ್ಣ ಕರಡಿ ರಾಜಕೀಯ ಹಾದಿ..

ಸಂಗಣ್ಣ ಕರಡಿ ಅವರು 1994ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.  ಆ ನಂತರ 1999ರಲ್ಲಿ ಜೆಡಿಯು, 2008ರಲ್ಲಿ ಜನತಾದಳ, 2011ರ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದರು. 2004 ಮತ್ತು 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋತರು. ಬಳಿಕ 2014ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾದ ಕರಡಿ, 2019ರಲ್ಲಿ ಪುನರಾಯ್ಕೆಯಾದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ರಾಜಕಾರಣದಲ್ಲಿ ಹಿಂದಿನ ಮೂರು ದಶಕಗಳಲ್ಲಿ ನಡೆದ 7 ಚುನಾವಣೆಗಳಲ್ಲಿ ಸಂಗಣ್ಣ 4 ಬಾರಿ ಶಾಸಕರಾದರೆ, ಕಾಂಗ್ರೆಸ್‌ನ ಹಿಟ್ನಾಳ ಕುಟುಂಬದ ಕೆ. ಬಸವರಾಜ ಒಂದು ಸಲ ಮತ್ತು ರಾಘವೇಂದ್ರ ಹಿಟ್ನಾಳ ಎರಡು ಸಲ ಶಾಸಕರಾಗಿದ್ದಾರೆ. ಹೀಗಾಗಿ ಇಲ್ಲಿನ ರಾಜಕಾರಣ ಎರಡು ಕುಟುಂಬಗಳಿಗೆ ಮಾತ್ರ ಸೀಮಿತವಾಗಿದೆ. ಈ ಬಾರಿ ಇನ್ನೊಂದು ಕುಟುಂಬದ ಪಾಲಾಗಲು ಅವಕಾಶ ನೀಡಬಾರದು ಎಂದು ಸಂಗಣ್ಣ ಟಿಕೆಟ್‌ ತಮಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಮತ್ತೋರ್ವ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ವಿ. ಚಂದ್ರಶೇಖರ್‌ ಕೂಡ ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿ ಬೆಂಬಲಿಗರ ಸಭೆ ಕರೆದಿದ್ದಾರೆ. ಹೀಗಾಗಿ ಈ ಇಬ್ಬರೂ ನಾಯಕರ ನಡೆ ಕುತೂಹಲಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....