Homeಕರ್ನಾಟಕಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ: ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ ಎಂದ ರಾಹುಲ್

- Advertisement -
- Advertisement -

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಇಂದು (ರವಿವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧಿಕೃತವಾಗಿ ಚಾಲನೆ ಕೊಟ್ಟಿದ್ಧಾರೆ. ಕೋಲಾರದ ಭಾಷಣದ ಕಾರಕ್ಕಾಗಿಯೇ ರಾಹುಲ್ ಗಾಂಧಿ ಸಂಸತ್ ಸ್ಥಾನ ಅನರ್ಹರಾಗಿದ್ದಾರೆ. ಇದೇ ಅದೇ ಕೋಲಾರದಿಂದ ರಾಹುಲ್ ಗಾಂಧಿ ಅವರ ಪ್ರಚಾರ ಅಭಿಯಾನ ಶುರುವಾಗಿದೆ.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಕರ್ನಾಟಕದಲ್ಲಿ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

”ಕರ್ನಾಟಕದ ಜನತೆಗೆ ಈಗಾಗಲೇ 4 ಭರವಸೆಯನ್ನು ನೀಡಿದ್ದೇವೆ.  ಮನೆ ಯಜಮಾನರಿಗೆ 2 ಸಾವಿರ ರೂ ಹಾಗೂ 200 ಯೂನಿಟ್ ಉಚಿತ ವಿದ್ಯುತ್, ಉಚಿತವಾಗಿ 10 ಕೆಜಿ ಅಕ್ಕಿ, ವಿದ್ಯಾವಂತ ನಿರುದ್ಯೋಗಿಗಳಿಗೆ ಕೆಲಸ, ಡಿಪ್ಲೊಮಾ ಪದವೀಧರರಿಗೆ 1,500 ರೂ., ಪದವೀಧರರಿಗೆ 3000 ಸಾವಿರ ರೂ ನೀಡಲಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಬೇಡಿಕೆಯನ್ನು ಈಡೇರಿಸುತ್ತೇವೆ, ನಾವು ಜನರ ಪರವಾಗಿ ಕೆಲಸ ಮಾಡುತ್ತೇವೆ” ಎಂದು ಭರವಸೆ ನೀಡಿದರು.

ರಾಜ್ಯ ಬಿಜೆಪಿ ಸರ್ಕಾರವನ್ನು ಶೇ. 40ರಷ್ಟು ಕಮಿಷನ್ ಸರ್ಕಾರ ಎಂದು ರಾಹುಲ್ ಗಾಂಧಿ ಆರೋಪಿಸಿದರು. ಅವರು ಮಾಡಿದ ಅಭಿವೃದ್ದಿ ಕೆಲಸಗಳೇನು? ಎಲ್ಲಾ ಅಭಿವೃದ್ಧಿ ಕೆಲಸಗಳಲ್ಲಿ ಕಮೀಷನ್ ಪಡೆಯುವುದು, ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿದೆ. ಅವರು ಲೂಟಿ ಹೊಡೆಯಲು ಅಧಿಕಾರಕ್ಕೆ ಬಂದಿದ್ದಾರೆ ಎಂದು ಆರೋಪಿಸಿದರು.

ಸಮಾವೇಶದಲ್ಲಿ 1 ಲಕ್ಷ ಜನರು ಸೇರಿದ್ದಾರೆ, 2019ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಹಿನ್ನೆಲೆ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹಾಗೆಯೇ ಇಲ್ಲಿಂದಲೇ 2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ್ದು, ಎರಡು ದಿನಗಳ ಕಾಲ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಶ್ ಶೆಟ್ಟರ್; ಬೆಂಗಳೂರಿಗೆ ಬರಲು ಹೆಲಿಕಾಪ್ಟರ್ ಕಳುಹಿಸಿದ ಕಾಂಗ್ರೆಸ್

ನನಗೆ ಮುಖ್ಯಮಂತ್ರಿ ಸ್ಥಾನ ಬೇಡ: ಖರ್ಗೆ ಸ್ಪಷ್ಟನೆ

ಜಿಲ್ಲೆಯಲ್ಲಿ ರಾಜ್ಯ ಕಾಂಗ್ರೆಸ್ ಆಯೋಜಿಸಿದ ಜೈ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ”ರಾಜ್ಯದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿ ಆಗಲಿ, ಆ ಸ್ಥಾನ ನನಗೆ ಬೇಡ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಷ್ಟೇ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

”ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ನಾಯಕರು ತಲೆ ಕೆಡಿಸಿಕೊಳ್ಳಬೇಡಿ. ರಾಜ್ಯದ ಜನರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ. ಪಕ್ಷಕ್ಕೆ ಬಹುಮತ ಬಂದಾಗ ಸಿಎಂ ಬಗ್ಗೆ ಶಾಸಕರು ನಿರ್ಧರಿಸುತ್ತಾರೆ. ಡಬಲ್​ ಇಂಜಿನ್​ ಸರ್ಕಾರ ಅಂತಾರೆ, ಹೊಸ ಯೋಜನೆ ತಂದಿಲ್ಲ. ಹಳೇ ಡಬ್ಬಿಗೆ ಹೊಸ ಇಂಜಿನ್​ ಕಲರ್​ ಹಚ್ಚುತ್ತಿದ್ದಾರೆ. ಈ ಬಿಜೆಪಿ ಸರ್ಕಾರ ತೆಗೆಯದಿದ್ದರೆ ಯಾವುದೇ ಅಭಿವೃದ್ಧಿ ಆಗಲ್ಲ” ಎಂದರು.

”ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಅನೇಕ ಜನರನ್ನು ಭೇಟಿಯಾಗಿ ಜನರ ದುಃಖ ದುಮ್ಮಾನ ಕೇಳಿದ್ದಾರೆ ಎಂದು ಹೇಳಿದ ಖರ್ಗೆ, ಕೋಲಾರ ಜಿಲ್ಲೆ ಬಂಗಾರದ ಜಿಲ್ಲೆ. ಮೂರೇ ಮೂರು ಬಂಗಾರದ ಗಣಿಗಳು ಕರ್ನಾಟಕದಲ್ಲೇ ಇವೆ. ಇಡೀ ದೇಶದ ಬಂಗಾರ ಇರೋದು ಸಿಗುವುದು ಇಲ್ಲಿಂದಲೇ. ಕೋಲಾರದಲ್ಲಿ ಬರಗಾಲಕ್ಕೆ ತುತ್ತಾದ ಜಿಲ್ಲೆ ನೀರಾವರಿಗಾಗಲಿ ಕೃಷಿ ಗಾಗಲಿ ಅಷ್ಟೊಂದು ಮಹತ್ವ ಕೊಡುತ್ತಾ ಇರಲಿಲ್ಲ. ಅನೇಕ ಶಾಸಕರು ಒಗ್ಗಟ್ಟಾಗಿ ಕಾಂಗ್ರೆಸ್ ಸರ್ಕಾರ ಇದ್ದಾಗ ಕೆರೆಗಳನ್ನು ತುಂಬಿಸಿದ್ದು ಕಾಂಗ್ರೆಸ್ ಪಕ್ಷ. ಲಕ್ಷಾಂತರ ಎಕರೆ ಇದರಿಂದ ನೀರಾವರಿ ಆಗುತ್ತಿದೆ” ಎಂದರು.

”ರೇಷ್ಮೆಗೂ ಪ್ರಸಿದ್ಧ ಬಂಗಾರಕ್ಕೂ ಪ್ರಸಿದ್ಧವಾಗಿರುವ ಜಿಲ್ಲೆಯಿಂದ ಕಾಂಗ್ರೆಸ್ ಪ್ರಚಾರ ಪ್ರಾರಂಭ ಮಾಡಿದ್ದೇವೆ. ಇಲ್ಲಿಂದ ಯಶಸ್ಸು ಖಚಿತವಾಗಲಿದೆ ಎಂದು ಹೇಳಿದ ಖರ್ಗೆ, 40 ಪರ್ಸೆಂಟ್ ಸರ್ಕಾರದ ಮೇಲೆ ಜನ ರೊಚ್ಚಿಗೆದ್ದು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡುತ್ತಾರೆ. ಸ್ವಯಂ ಪ್ರೇರಿತರಾಗಿ ಜನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿರುವುದು ನಮಗೆ ಲಾಭ ಇದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...