Homeಮುಖಪುಟನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು...

ನಾನೇಕೆ ಕಾಂಗ್ರೆಸ್ ಸೇರಿದೆ? : ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು…

- Advertisement -
- Advertisement -

ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ಸೋಮವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ತಾನು ಏಕೆ ಕಾಂಗ್ರೆಸ್ ಸೇರಿದೆ ಎಂದು ಜಗದೀಶ್ ಶೆಟ್ಟರ್ ಟ್ವೀಟ್ ಮಾಡಿದ್ದಾರೆ.

ಇಂದು ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಅನೇಕರಿಗೆ ಆಶ್ಚರ್ಯವಾಗಿರಬಹುದು. ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕರಾಗಿದ್ದವರು ಕಾಂಗ್ರೆಸ್ ಸೇರುತ್ತಿರುವುದೇಕೆ ಎಂಬ ಪ್ರಶ್ನೆ ಸಹಜವಾಗಿ ಮೂಡುತ್ತಿದೆ. ಅನೇಕ ತಿಂಗಳಿಂದ ಹಿರಿಯ ನಾಯಕನಾಗಿ ನನಗೆ ಆಗಿರುವ ವೇದನೆ ಯಾರೂ ಅರ್ಥ ಮಾಡಿಕೊಂಡಿಲ್ಲ. ನಾನು ಬಿಜೆಪಿ ಪಕ್ಷ ಕಟ್ಟಿಬೆಳೆಸಿದ್ದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಸಂಘಟನೆ ಮಾಡಿದ್ದೆ. ಬಿಜೆಪಿ ನನಗೆ ಕೊಟ್ಟ ಸ್ಥಾನಮಾನ, ಅಧಿಕಾರಕ್ಕೆ ಪ್ರತಿಯಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಹುಬ್ಬಳ್ಳಿಯಲ್ಲಿ 6 ಬಾರಿ ಶಾಸಕನಾಗಿ ಗೆದ್ದಿದ್ದೇನೆ. ಈಗ 7ನೇ ಬಾರಿ ಸ್ಪರ್ಧೆ ಮಾಡಲಿದ್ದೇನೆ ಎಂದಿದ್ದಾರೆ.

ಕಳೆದ 2 ವರ್ಷಗಳಿಂದ ಕ್ಷೇತ್ರದಲ್ಲಿ ಹೋರಾಡುತ್ತಿದ್ದೇನೆ. ನನಗೆ ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಹಿರಿಯ ನಾಯಕನಿಗೆ ನೀಡಬೇಕಾದ ಗೌರವ ನೀಡಿಲ್ಲ ಎಂಬುದು ನೋವಾಗಿದೆ. ನಾನು ಚುನಾವಣೆ ನಿಲ್ಲುವುದು ಬೇಡವಾಗಿದ್ದರೆ ಒಂದು ವಾರ ಮುಂಚಿತವಾಗಿ ಹೇಳಿ ಮಾತುಕತೆ ನಡೆಸಿದ್ದರೆ ನಾನು ಅದಕ್ಕೆ ಒಪ್ಪುತ್ತಿದ್ದೆ. ನಾನು ಎಂದಿಗೂ ಅಧಿಕಾರಕ್ಕಾಗಿ ರಾಜಕಾರಣ ಮಾಡಿಲ್ಲ. ನಾನು ಸಂಘ ಪರಿವಾರದಿಂದ ಬ೦ದಿರುವ ವ್ಯಕ್ತಿ. ನನ್ನನ್ನು ಯಾಕೆ ಕಡೆಗಣಿಸಲಾಗುತ್ತಿದೆ ಎಂದು ಅರ್ಥವಾಗಿಲ್ಲ. ನನಗೆ ಜನರ ಆಶೀರ್ವಾದವಿದೆ. ನಾನು ಹಠಕ್ಕೆ ಬಿದ್ದು ಗೆಲ್ಲುವ ಅಗತ್ಯವಿಲ್ಲ. ನಾಮಪತ್ರ ಸಲ್ಲಿಸುವ ಹಿಂದಿನ ದಿನ ನನಗೆ ಟಿಕೆಟ್ ಇಲ್ಲ ಎಂದು ಹೇಳಿ, ಸಣ್ಣ ಹುಡುಗನಂತೆ ನಡೆಸಿಕೊಂಡರೆ ನನಗೆ ಹೇಗೆ ಭಾಸವಾಗಬೇಕು. ಇದರಿಂದ ಬಹಳ ಬೇಸರವಾಯಿತು. ನನ್ನ ಅಭಿಮಾನಿಗಳು, ಹಿತೈಶಿಗಳು ಬಂದು ನನಗೆ ಆಗಿರುವ ಅಪಮಾನಕ್ಕೆ ಬೇಸರ ಮಾಡಿಕೊಂಡರು. ನನ್ನ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ನಮ್ಮ ಹಿತೈಶಿ, ಜನರ ಅಭಿಪ್ರಾಯ ಪಡೆದು ಈ ತೀರ್ಮಾನ ಮಾಡಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ನನ್ನನ್ನು ಸ೦ಪರ್ಕಿಸಿ ಕಾಂಗ್ರೆಸ್ ಸೇರುವಂತೆ ಕರೆದರು. ನಾವು ಕಟ್ಟಿಬೆಳೆಸಿದ ಮನೆಯಿ೦ದ ನಮ್ಮನ್ನು ಹೊರ ದಬ್ಬಿದಾಗ ನಾನು ಸಹಜವಾಗಿ ಕಾಂಗ್ರೆಸ್ ಪಕ್ಷ ಸಿದ್ಧಾಂತ ನಂಬಿ ಬಹಳ ಸಂತೋಷದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯವಲ್ಲ ಪಕ್ಷ ಮುಖ್ಯ ಎಂದು ಕೆಲಸ ಮಾಡಿದ್ದೆವು. ಆದರೆ ಇಂದು ಕೆಲವು ವ್ಯಕ್ತಿಗಳಿಗಾಗಿ ಪಕ್ಷವನ್ನು ಕಟ್ಟಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಕೆಲವು ವ್ಯಕ್ತಿಗಳು ನಿಯಂತ್ರಿಸುತ್ತಿದ್ದಾರೆ. ಈ ವಿಚಾರ ಕೇಂದ್ರದ ನಾಯಕರ ಗಮನಕ್ಕೆ ಬಂದಿಲ್ಲ. ಕೆಲವು ವ್ಯಕ್ತಿಗಳ ಹಿತಾಸಕ್ತಿಗಾಗಿ ಬೇರೆಯವರಿಗೆ ಅವಮಾನ ಮಾಡಲಾಗುತ್ತಿದೆ. ನನಗೆ ಅಪಮಾನ ಮಾಡಿದ ನಂತರ ನನಗೆ ಬೇರೆ ಹುದ್ದೆ ನೀಡುವುದಾಗಿ ಹೇಳಿದರು ಎಂದು ಶೆಟ್ಟರ್ ಹೇಳಿದ್ದಾರೆ.

ನನಗೆ ಅಧಿಕಾರ ಮುಖ್ಯವಾಗಿದ್ದರೆ, ಬೊಮ್ಮಾಯಿ ಅವರ ಸರ್ಕಾರದಲ್ಲಿ ನನಗೆ ಮಂತ್ರಿ ಸ್ಥಾನ ಬೇಡ ಎಂದು ಸ್ವಯಂಕೃತ ಹೇಳಿಕೆ ನೀಡಿದ್ದೆ. ಅಧಿಕಾರ ಬೇಕಾಗಿದ್ದರೆ ಆಗಲೇ ಹಠಮಾಡಿ ಮಂತ್ರಿಗಿರಿ ಪಡೆಯುತ್ತಿದ್ದೆ. ಕೊನೆಯದಾಗಿ ನನಗೆ ಅಪಮಾನವಾಗಿದ್ದು, ಅದನ್ನು ಸರಿಪಡಿಸಲು ಶಾಸಕರಾಗಿ ಸ್ಪರ್ಧಿಸುತ್ತೇನೆ. ಆರು ತಿಂಗಳ ನಂತರ ಗೌರವಯುತವಾಗಿ ರಾಜೀನಾಮೆ ನೀಡುತ್ತೇನೆ ನಂತರ ನೀವು ಯಾರನ್ನು ಬೇಕಾದರೂ ಶಾಸಕರನ್ನಾಗಿ ಮಾಡಿಕೊಳ್ಳಿ ಎಂದು ಹೇಳಿದೆ ಆದರೂ ಅವರ ಒಪ್ಪಲಿಲ್ಲ. ನನ್ನನ್ನು ರಾಜಕೀಯವಾಗಿ ಗೌರವಯುತವಾಗಿ ಕಳುಹಿಸಿ ಎ೦ದು ಕೇಳಿದರೂ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನಗೆ ಯಡಿಯೂರಪ್ಪನವರ ಮೇಲೆ ಬಹಳ ಗೌರವವಿದೆ. ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತೇನೆ ಎಂದಾಗ ರಾಜ್ಯದ ಎಲ್ಲಾ ಭಾಗದ ಲಿಂಗಾಯತ ಸಮುದಾಯದ ನಾಯಕರು ನನಗೆ ಕರೆ ಮಾಡಿ ನಿಮಗೆ ಬಿಜೆಪಿಯಲ್ಲಿ ಅನ್ಯಾಯವಾಗಿದ್ದು ಯಾಕೆ? ಎಂದು ಬೇಸರ ವ್ಯಕ್ತಪಡಿಸಿದರು. ಈ ಸಮುದಾಯ ಹಾಗೂ ಹುಬ್ಬಳ್ಳಿ ಧಾರವಾಡ ಭಾಗದ ಜನರ ಪ್ರೀತಿ ವಿಶ್ವಾಸಕ್ಕೆ ಋಣಯಾಗಿರುತ್ತೇನೆ. ರಾಜ್ಯದಲ್ಲಿ ಇಂದು ಬದಲಾವಣೆಯ ದಿನವಾಗಿದ್ದು, ನಾನು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...