Homeಮುಖಪುಟಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

ಸುಡಾನ್‌ ಸಂಘರ್ಷ: 200 ಜನ ಸಾವು, 1800 ಜನರಿಗೆ ಗಾಯ; ಸಂಕಷ್ಟದಲ್ಲಿ ಕರ್ನಾಟಕದ ಜನ

- Advertisement -
- Advertisement -

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ದೇಶದಾದ್ಯಂತ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ. ಒಂಡರ್ಮನ್‌ ನಗರ, ದಕ್ಷಿಣ ಡಾರ್ಫರ್‌, ನ್ಯಾಲಾ, ರಾಜಧಾನಿ ಖಾರ್ಟೂಮ್‌ ಸೇರಿ ವಿವಿಧ ನಗರಗಳನ್ನು ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ಶಸ್ತ್ರಸಜ್ಜಿತ ವಾಹನಗಳು, ಮಷೀನ್‌ಗನ್‌ ಜೋಡಿಸಲಾದ ಟ್ರಕ್‌ಗಳು ಜಮಾವಣೆಗೊಂಡಿವೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಈ ಸಂಘರ್ಷದಿಂದ ಸುಡಾನ್‌ ರಾಜಧಾನಿ ಖಾರ್ಟೂಮ್‌ನಲ್ಲಿ 50 ಲಕ್ಷಕ್ಕಿಂತಲೂ ಅಧಿಕ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಯುದ್ಧಭೀತಿಯಿಂದ ಯಾರೂ ಮನೆಯಿಂದ ಹೊರ ಬರಲಾರದೆ ಪರಿಸ್ಥಿತಿ ಎದುರಾಗಿದೆ. ಮುಸಲ್ಮಾನರ ಪವಿತ್ರ ತಿಂಗಳು ರಂಜಾನ್‌ ಕೂಡ ಆಗಿರುವುದರಿಂದ ಇಲ್ಲಿನ ಜನರು ವಿದ್ಯುತ್ ಮತ್ತು ನೀರಿನ ಪೂರೈಕೆ ಇಲ್ಲದೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಯಾವ ಜೋಶಿ?, ಯಾವ ಸಂತೋಷ್? ಅವರ್ಯಾರು ಸಿಎಂ ಆಗಲ್ಲ, ಲಿಂಗಾಯತರೇ ಆಗೋದು: ಯತ್ನಾಳ್ ಗುಡುಗು

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

 ಇನ್ನು ಕರ್ನಾಟಕದ 31 ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಮಂದಿ ಶಿವಮೊಗ್ಗ ಮತ್ತು 19 ಮಂದಿ ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ 31 ಜನರು ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸೂಡಾನ್‌ಗೆ ಆಯುರ್ವೇದ ಉತ್ಪನ್ನಗಳ ಮಾರಾಟಕ್ಕೆ ತೆರಳಿದ್ದ ಸಂತ್ರಸ್ತರಾದ ಎಸ್‌ ಪ್ರಭು ಎಂಬಿವವರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದು ಅವರ ಜೊತೆಗೆ ಐವರು ಚನ್ನಗಿರಿ, ಏಳು ಜನ, ಶಿವಮೊಗ್ಗ ಮತ್ತು 19 ಜನರು, ಮೈಸೂರಿನ ಹುಣಸೂರು ತಾಲೂಕಿನವರು ಸೇರಿದ್ದಾರೆ ಎಂದು ಹೇಳಿದ್ದಾರೆ.

”ಮೂರು ದಿನಗಳಿಂದ ನಾವು ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವಿಲ್ಲದೆ ಬಾಡಿಗೆ ಮನೆಯೊಳಗೆ ಸಿಕ್ಕಿಬಿದ್ದಿದ್ದೇವೆ. ಹೊರಗಿನಿಂದ ಪದೇ ಪದೇ ಗುಂಡಿನ ಸದ್ದು ಮತ್ತು ಶೆಲ್‌ಗಳ ಸದ್ದು ಕೇಳಿಸುತ್ತದೆ. ನಮ್ಮ ಸಮಸ್ಯೆಗೆ ಯಾರೂ ಸ್ಪಂದಿಸುತ್ತಿಲ್ಲ ಮತ್ತು ನಾವು ಭಾರತಕ್ಕೆ ಹೇಗೆ ಹಿಂತಿರುಗುತ್ತೇವೆ ಎಂದು ನಮಗೆ ಖಚಿತವಿಲ್ಲ ಎಂದು ಅವರು ಹೇಳಿದ್ದಾರೆ. ಅಲ್ಲದೇ, ಸುಡಾನ್‌ನಲ್ಲಿ ನೂರಾರು ಭಾರತೀಯರು ವಿವಿಧ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೂಡಾನ್‌ನಲ್ಲಿ ಕರ್ನಾಟಕದ ಜನರು ಆತಂಕದಲ್ಲಿರುವ ವಿಷಯ ತಿಳಿದು ಅವರ ರಕ್ಷಣೆಗೆ ಮನವಿ ಮಾಡಿರುವ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕರ್ನಾಟಕದ ಹಕ್ಕಿಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಕಳೆದ ಕೆಲವು ಸಮಯದಿಂದ ಆಹಾರವಿಲ್ಲದೆ ಸುಡಾನ್‌ನ ಅಂತರ್ಯುದ್ಧದಲ್ಲಿ ಸಿಲುಕಿ ತತ್ತರಿಸಿದ್ದಾರೆ. ಅವರನ್ನು ಮರಳಿ ಕರೆತರಲು ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...