Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದೇಕೆ? ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 11 ಅಪರಾಧಿಗಳನ್ನು ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರ ಯಾವ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಳಿಸುವ ನಿರ್ಧಾರ ತೆಗೆದುಕೊಂಡಿದೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.

ಮಂಗಳವಾರ ಸುಪ್ರೀಂ ಕೋರ್ಟ್ ಕೂಡ ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್‌ ಸರ್ಕಾರವನ್ನು ಪ್ರಶ್ನಿಸಿತ್ತು. ಇಂತಹ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕಿತ್ತು ಎಂದು ಗುಜರಾತ್ ಸರ್ಕಾರವನ್ನು ಸುಪ್ರೀಂ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ ಪಕ್ಷ ಗುಜರಾತ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್, ”ಇದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಮಗುವನ್ನು ಕೊಲ್ಲಲಾಗಿತ್ತು. ಆಕೆಯನ್ನು ಎಂಥ ಸಂಕಷ್ಟಕ್ಕೆ ದೂಡಲಾಗಿತ್ತು ಎಂಬ ಕಲ್ಪನೆ ನಿಮಗಿದೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: 11 ಅಪರಾಧಿಗಳ ಬಿಡುಗಡೆ; ಗುಜರಾತ್ ಸರ್ಕಾರಕ್ಕೆ ಸುಪ್ರೀಂ ತರಾಟೆ

”ಆದಾಗ್ಯೂ, ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದ ಕಡತಗಳ ಮೇಲೆ ತಮಗೆ ವಿಶೇಷ ಅಧಿಕಾರ ಇದೆ ಎಂಬುದಾಗಿ ಕೇಂದ್ರ ಹಾಗೂ ಗುಜರಾತ್‌ ಸರ್ಕಾರಗಳು ಹೇಳುತ್ತಿವೆ” ಎಂದು ಟೀಕಿಸಿದರು.

”ಅದು ಎಂಥ ವಿಶೇಷ ಅಧಿಕಾರ? ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೆ?” ಎಂದು ಪ್ರಶ್ನಿಸಿದ ಅವರು, ”ಇದು ಮಹಿಳೆಯೊಬ್ಬಳ ಹಕ್ಕಿಗೆ ಸಂಬಂಧಿಸಿದ್ದು” ಎಂದು ವಾಗ್ಧಾಳಿ ನಡೆಸಿದರು.

ಈ ಬಗ್ಗೆ ಸುಪ್ರಿಯಾ ಶ್ರೀನೇತ್ ಅವರು ಮಾತನಾಡಿರುವ ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ ”ಬಿಲ್ಕಿಸ್ ಬಾನೋ ಅಪರಾಧಿಗಳನ್ನು ಏಕೆ ಕೈಬಿಡಲಾಯಿತು ಎಂಬುದಕ್ಕೆ ಮೋದಿ ಸರ್ಕಾರ ಉತ್ತರಿಸಬೇಕಾಗಿದೆ? ಇಂದು ಈ ದೇಶದ ಪ್ರತಿಯೊಬ್ಬ ಮಹಿಳೆಯೂ ಕೇಳುತ್ತಾಳೆ ಮೋದಿ ಸರ್ಕಾರ ಇಂತಹವರನ್ನು ಏಕೆ ಉಳಿಸುತ್ತಿದೆ?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.

ಮಂಗಳವಾರ ಸುಪ್ರೀಂ ಕೋರ್ಟ್‌ ಕೂಡ ಈ ವಿಚಾರವಾಗಿ ಗುಜರಾತ್ ಸರ್ಕಾರವನ್ನು ತರಾಟೆ ತೆಗೆದುಕೊಂಡಿತ್ತು. ”ನೀವು ಈ ಪ್ರಕರಣವನ್ನು ಸಾಮಾನ್ಯವಾದ ಸೆಕ್ಷನ್ 302 [ಕೊಲೆ] ಪ್ರಕರಣದಂತೆ ನೋಡಬೇಡಿ. ಸೇಬನ್ನು ಕಿತ್ತಳೆ ಹಣ್ಣುಗಳೊಂದಿಗೆ ಹೋಲಿಸಿದಂತೆ ಹತ್ಯಾಕಾಂಡವನ್ನು ಒಂದೇ ಕೊಲೆಯೊಂದಿಗೆ ಹೋಲಿಸಲಾಗುವುದಿಲ್ಲ. ಅಪರಾಧಗಳು ಸಾಮಾನ್ಯವಾಗಿ ಸಮಾಜ ಮತ್ತು ಸಮುದಾಯದ ವಿರುದ್ಧ ನಡೆಯುತ್ತವೆ. ಅಸಮಾನರನ್ನು ಸಮಾನವಾಗಿ ಪರಿಗಣಿಸಲಾಗುವುದಿಲ್ಲ” ಎಂದು ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಿಳಿಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...