Homeಮುಖಪುಟ"ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

“ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು”: ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

- Advertisement -
- Advertisement -

“ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು. ಹಾಗಾಗಿ ವಿಕಾಸಕ್ಕಾಗಿ ಬಿಜೆಪಿಗೆ ಮತ ಹಾಕಿ” ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಭಾಷಣವನ್ನು ಬೆದರಿಕೆ ಎಂದು ಕಾಂಗ್ರೆಸ್ ಆರೋಪಿಸಿದೆ. ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವಿಯಲ್ಲಿ ಮಾತನಾಡಿದ್ದ ಜೆ.ಪಿ ನಡ್ಡಾ, “ರಾಜ್ಯದ ಜನತೆ ಪ್ರಧಾನಿ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು” ಎಂದು ಹೇಳಿಕೆ ನೀಡಿದ್ದರು. ಅಂದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೆ ಕೇಂದ್ರದಿಂದ ಅನುದಾನ ನೀಡುವುದಿಲ್ಲ ಎಂಬ ಅರ್ಥವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

“ಮೋದಿಯ ಆಶೀರ್ವಾದ ಬೇಕೆಂದರೆ ಬಿಜೆಪಿಗೆ ಮತ ಹಾಕಿ” ಇದು ಜೆ.ಪಿ ನಡ್ಡಾ ಅವರು ಕನ್ನಡಿಗರಿಗೆ ಹಾಕುತ್ತಿರುವ ಬೆದರಿಕೆ. ಬಿಜೆಪಿ ಸರ್ವಾಧಿಕಾರವನ್ನು ಜಾರಿಗೊಳಿಸುತ್ತಿರುವುದಕ್ಕೆ ಈ ಮಾತುಗಳೇ ನಿದರ್ಶನ. ಆಶೀರ್ವಾದ ಮಾಡಬೇಕಿರುವುದು ಜನರೇ ಹೊರತು, ಮೋದಿಯಲ್ಲ. ಒಕ್ಕೂಟ ವ್ಯವಸ್ಥೆ & ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗೆ ಕಿಂಚಿತ್ ಗೌರವವಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

ಮಾನ್ಯ ನಡ್ಡಾ ಅವರೇ, “ಮೋದಿ ಬರುವುದಕ್ಕೂ ಮುನ್ನ ದೇಶವೂ ಇತ್ತು, ಕರ್ನಾಟಕವೂ ಇತ್ತು. ಮೋದಿಗೂ ಮುನ್ನವೇ ಕರ್ನಾಟಕ ಆರ್ಥಿಕವಾಗಿ ಸಬಲವಾಗಿತ್ತು, ಸಂಪದ್ಭರಿತವಾಗಿತ್ತು. ಕನ್ನಡಿಗರನ್ನು ಬೆದರಿಸಿ ಅವಮಾನಿಸುವುದನ್ನು ನಿಲ್ಲಿಸಿ. ಕನ್ನಡಿಗರ ‘ತೆರಿಗೆ ಆಶೀರ್ವಾದ’ದಿಂದ ನಿಮ್ಮ ಮೋದಿಯ ಆಟ ನಡೆಯುತ್ತಿರುವುದು ಎಂಬುದನ್ನು ಮರೆಯದಿರಿ” ಎಂದು ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.

ರಾಜ್ಯದಲ್ಲೂ, ಕೇಂದ್ರದಲ್ಲೂ ಬಿಜೆಪಿ ಅಧಿಕಾರದಲ್ಲಿತ್ತು. ನೆರೆ ಪರಿಹಾರದಲ್ಲಿ, ಬರ ಪರಿಹಾರದಲ್ಲಿ, GST ಪಾಲಿನಲ್ಲಿ, ಲಸಿಕೆ ಹಂಚಿಕೆಯಲ್ಲಿ, ಆಕ್ಸಿಜನ್ ನೀಡಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಯಿತು. ಜೊತಗೆ ಕರ್ನಾಟಕದ ಸರ್ಕಾರಿ ಸಂಸ್ಥೆಯನ್ನು ಮುಚ್ಚುವಲ್ಲಿ ಮತ್ತು ಮಹಾರಾಷ್ಟ್ರದ ಗಡಿ ತಂಟೆಯಲ್ಲಿ ಕನ್ನಡಿಗರಿಗೆ ಮೋದಿಯ ಆಶೀರ್ವಾದದ ಬದಲು ಶಾಪ ಸಿಕ್ಕಿದ್ದೇಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಪ್ರಜಾಪ್ರಭುತ್ವದಲ್ಲಿ‌ ಜನರೇ ಜನಾರ್ಧನರು, ಆಶೀರ್ವಾದ ನೀಡಲು ನರೇಂದ್ರ ಮೋದಿಯವರು ದೇವರಲ್ಲ, ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿರುವ ಪ್ರತಿನಿಧಿ ಎನ್ನುವುದು ನೆನಪಿರಲಿ ಜೆ.ಪಿ ನಡ್ಡಾರವರೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಜನತೆ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎನ್ನುವ ನಿಮ್ಮ ಹೇಳಿಕೆ ಬೆದರಿಕೆ ಎಂದಾದರೆ ಅದಕ್ಕೆ ನನ್ನ ಧಿಕ್ಕಾರ ಇದೆ. ಇದು‌ ನಿಮ್ಮ ಅಜ್ಞಾನ ಎಂದಾದರೆ ನಿಮಗೆ ದೇವರು ಸದ್ಬುದ್ಧಿಯ ಆಶೀರ್ವಾದವನ್ನು ಮಾಡಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಸಂವಿಧಾನದತ್ತವಾದ ಸಮಾನ ಸ್ಥಾನಮಾನ, ಗೌರವ ಮತ್ತು ಹಕ್ಕುಗಳನ್ನು ಹೊಂದಿರುತ್ತವೆ ಎಂಬುದು ನೆನಪಿರಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ನಿಮ್ಮ‌ ಸರ್ವಾಧಿಕಾರಿ ಧೋರಣೆಗೆ ಅವಕಾಶ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...