Homeಕರ್ನಾಟಕ40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

40% ಕಮೀಷನ್ ಬೇಡಿಕೆಯ ಆರೋಪಿಗೆ ಪ್ರಧಾನಿ ಮೋದಿ ಕರೆ ಮಾಡಿ ಭ್ರಷ್ಟಾಚಾರಕ್ಕೆ ಬೆಂಬಲ: ಕಾಂಗ್ರೆಸ್ ಆರೋಪ

- Advertisement -
- Advertisement -

ಇಂದು (ಶುಕ್ರವಾರ) ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಬಳಿಕ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ”40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿರುವ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ರಾಜೀನಾಮೆ ನೀಡಿರುವವರಿಗೆ ಕರೆ ಮಾಡಿ ನಿಮ್ಮ ಜೊತೆ ಸದಾ ಬೆಂಬಲವಾಗಿರುತ್ತೇವೆ” ಎಂದು ಹೇಳುವುದು ಯಾವ ಸಂದೇಶ ನೀಡಿದಂತಾಗುತ್ತದೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮುಂದಿನ ತಿಂಗಳು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದು ಚುನಾವಣಾ ರಾಜಕೀಯದ ನಿವೃತ್ತಿ ಘೋಷಿಸಿದ್ದರು. ತಮ್ಮ ಮಗನಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು, ಆದರೆ ಮಗನಿಗೂ ಟಿಕೆಟ್ ಕೈ ತಪ್ಪಿತು. ಇದೀಗ ಈಶ್ವರಪ್ಪ ಅವರಿಗೆ ಮೋದಿ ಕರೆ ಬಂದಿದೆ. ಈ ದೂರವಾಣಿ ಸಂಭಾಷಣೆಯಲ್ಲಿ ಮೋದಿ ಅವರು ಈಶ್ವರಪ್ಪರನ್ನು ಹೊಗಳಿದ ಮೋದಿ, ಪಕ್ಷ ಸದಾ ಜೊತೆಗಿರುತ್ತದೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ”ಬಿಜೆಪಿ ಟಿಕೆಟ್ ನಿರಾಕರಿಸಿದರೂ ಬಂಡಾಯವೆದ್ದ ಬಿಜೆಪಿ ನಾಯಕ ಈಶ್ವರಪ್ಪ ಅವರನ್ನು ಪ್ರಧಾನಿ ಮೋದಿ ಅಭಿನಂದಿಸುವುದು ಸ್ವೀಕಾರಾರ್ಹವಲ್ಲ! ಈ ವ್ಯಕ್ತಿ 40% ಕಮಿಷನ್ ಬೇಡಿಕೆಯ ಆರೋಪ ಹೊತ್ತಿದ್ದು, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ನಂತರ ಭ್ರಷ್ಟಾಚಾರ ಆರೋಪದ ಮೇಲೆ ರಾಜೀನಾಮೆ ನೀಡಬೇಕಾಯಿತು. ಇಂತಹ ಭ್ರಷ್ಟ ನಾಯಕರನ್ನು ಹೊಗಳುವ ಮೂಲಕ ಬಿಜೆಪಿ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳನ್ನು ಬೆಂಬಲಿಸುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸುತ್ತಿದೆ.” ಎಂದು ಹೇಳಿದೆ.

ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ 67 ಆರೋಪಿಗಳ ಖುಲಾಸೆ: ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ ಪತ್ರಿಕೆಗಳ ಕಳವಳ

”ಒಂದು ಕಡೆ ಈಶ್ವರಪ್ಪ ಮೇಲೆ ಕಮಿಷನ್ ಆರೋಪ. ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ. ಇನ್ನೊಂದೆಡೆ ಸ್ವತಃ ಕರೆ ಮಾಡಿ ಈಶ್ವರಪ್ಪರನ್ನು ಶ್ಲಾಘಿಸಿದ ಪ್ರಧಾನಿ ಮೋದಿ. ಪ್ರಧಾನಿ ಮೋದಿ ‘ಭ್ರಷ್ಟಾಚಾರ’ದ ಪರ ನಿಂತಿದ್ದಾರೆ ಎನ್ನುವುದಕ್ಕೆ ಇದಕ್ಕಿಂದ ಸಾಕ್ಷಿ ಬೇಕೆ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

”ಪ್ರಧಾನಿ ನರೇಂದ್ರ ಮೋದಿ ಅವರು ಈಶ್ವರಪ್ಪನವರಿಗೆ ಕರೆ ಮಾಡಿ ಶ್ಲಾಘಿಸಿದ್ದಾರೆ. ಈ ಶ್ಲಾಘನೆ ಏಕೆ? 40% ಕಮಿಷನ್ ಲೂಟಿ ಮಾಡಿದ್ದಕ್ಕಾ? ಸಂತೋಷ್ ಪಾಟೀಲರ ಜೀವ ತೆಗೆದಿದ್ದಕ್ಕಾ? ಭ್ರಷ್ಟಾಚಾರದ ಪೋಷಣೆ ಮಾಡಿದ್ದಕ್ಕಾ? ಕಮಿಷನ್ ಬಗ್ಗೆ ಪತ್ರ ಬರೆದರೂ ಪ್ರತಿಕ್ರಿಯೆ ನೀಡದ ಮೋದಿ ಕಮಿಷನ್ ಲೂಟಿಕೋರನಿಗೆ ಬೆಂಬಲಿಸಿದ್ದಾರೆ” ಎಂದು ಟ್ವೀಟ್ ಮಾಡಿದೆ.

”ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನವಹಿಸುತ್ತಾರೆ. ನೆರೆ ಸಂತ್ರಸ್ತರ ಗೋಳುಗಳನ್ನು ನಿರ್ಲಕ್ಷಿಸುತ್ತಾರೆ. ಇಂತಹ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಭ್ರಷ್ಟಾಚಾರಕ್ಕೆ ಮೋದಿಯೇ ಮಹಾಪೋಷಕರು” ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಕೂಡ ಟ್ವಿಟ್ಟರ್ ನಲ್ಲಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

”ಕರ್ನಾಟಕ ಬಿಜೆಪಿಯಲ್ಲಿ ಎಲ್ಲರೂ ಪಕ್ಷ ಬಿಟ್ಟು ಓಡಿ ಹೋಗುತ್ತಿದ್ದಾರೆ. ಈ ನಡುವೆ ಇದೀಗ ಖುದ್ದು ಪ್ರಧಾನಿ ಮೋದಿಯೇ ಈಶ್ವರಪ್ಪ ಅವರಿಗೆ ಕರೆ ಮಾಡಿ ಬೇಡಿಕೊಳ್ಳಬೇಕಾಗಿದೆ. 40% ಕಮಿಷನ್ ಆರೋಪ ಮಾಡಿ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು ಇದೇ ಈಶ್ವರಪ್ಪ ಅವರ ಕಾರಣಕ್ಕೆ ಎಂಬುದನ್ನು ದಯವಿಟ್ಟು ತಿಳಿಸಿ. ಇದಾದ ಬಳಿಕ ಕರ್ನಾಟಕ ಗುತ್ತಿಗೆದಾರರ ಸಂಘ ಶೇ.40 ಕಮಿಷನ್ ಕುರಿತು ಪ್ರಧಾನಿಗೆ ಪತ್ರ ಬರೆದಿತ್ತು. ಆದರೆ ಪ್ರಧಾನಿಯವರಿಗೆ ಭ್ರಷ್ಟಾಚಾರ ಎನ್ನುವುದು ಅವರಿಗೆ ಸಮಸ್ಯೆಯೇನೂ ಇಲ್ಲ, ಹಾಗಾಗಿಯೇ ಅವರು ತಲೆಕೆಡಿಸಿಕೊಳ್ಳಲಿಲ್ಲ. ಈ ಕರ್ನಾಟಕದ ಭ್ರಷ್ಟಾಚಾರದಲ್ಲಿ ಇಡಿ, ಸಿಬಿಐ, ಆದಾಯ ತೆರಿಗೆ ಯಾರೂ ತಮ್ಮ ಸಮಯವನ್ನು ವ್ಯರ್ಥ ಮಾಡಲಿಲ್ಲ” ಎಂದು ಸುಪ್ರಿಯಾ ಶ್ರೀನಾಟೆ ಟ್ವೀಟ್ ಮಾಡಿದ್ದಾರೆ.

”ಕರ್ನಾಟಕದಲ್ಲಿ ಬಂಡಾಯದ ಧ್ವನಿ ಎಷ್ಟು ಪ್ರಬಲವಾಗಿದೆ ಎಂದರೆ ಬಿಜೆಪಿಯ ಮುಂದೆ 40ಕ್ಕೂ ಹೆಚ್ಚು ಬಂಡಾಯಗಾರರು ಕಣದಲ್ಲಿದ್ದಾರೆ. ಈಗ ಈ ಭ್ರಷ್ಟರನ್ನು ಕರೆಸಿ ಸಮಾಧಾನ ಪಡಿಸಲಾಗುತ್ತಿದೆ. ಹಿಮಾಚಲದಲ್ಲಿಯೂ ಅದೇ ಕೆಲಸ ಮಾಡಿದೆ – ಫಲಿತಾಂಶ ನೆನಪಿದೆ, ಅಲ್ಲವೇ? ಈ 40% ಕಮಿಷನೇರ್‌ಗಳು 40 ಕ್ಕಿಂತ ಕಡಿಮೆ ಇರುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ.

”ಪ್ರಧಾನಿ ಮೋದಿ, ಭ್ರಷ್ಟ ಈಶ್ವರಪ್ಪಗೆ ಕರೆ ಮಾಡಿ ಬಂಡಾಯ ಏಳಬೇಡಿ ಎಂದು ಹೇಳಿದ್ದೀರಿ. ಆದರೆ ನಿಮ್ಮ ಕೆಲಸಗಾರ ಸಂತೋಷ್ ಪಾಟೀಲ್ ಕುಟುಂಬದೊಂದಿಗೆ ಮಾತನಾಡಿದ್ದೀರಾ? 40% ಕಮಿಷನ್ ನಿಂದಾಗಿ ಆತ್ಮಹತ್ಯೆ ಮಾಡಿಕೊಂಡವರು ಯಾರು? ನೀವು ನಿರ್ದಿಷ್ಟವಾಗಿ ಭ್ರಷ್ಟಾಚಾರವನ್ನು ದ್ವೇಷಿಸುವುದಿಲ್ಲ. ವಾಸ್ತವವಾಗಿ 40% ಜನರು ನಿಮ್ಮ ಆಶೀರ್ವಾದವನ್ನು ಹೊಂದಿದ್ದಾರೆ. ಮೋದಿ ಆಶೀರ್ವಾದ್ ಶೇ.40 ಕಮೀಷನ್‌ಗೆ” ಎಂದು  ಸುಪ್ರಿಯಾ ಶ್ರಿನೇಟ್ ರೀಟ್ವೀಟ್ ಮಾಡಿದ್ದಾರೆ.

ಮೋದಿ ಕರೆ ಬಳಿಕ ಈಶ್ವರಪ್ಪ ಹೇಳಿದ್ದೇನು?

”ಪ್ರಧಾನಿ ಮೋದಿ ಅವರ ಕರೆಯನ್ನು ನಾನು ನಿರೀಕ್ಷಿಸಿರಲಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ನಗರವನ್ನು ಗೆಲ್ಲಲು ಇದು ನನಗೆ ಸ್ಫೂರ್ತಿ ನೀಡುತ್ತದೆ ಮತ್ತು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವನ್ನು ಮರಳಿ ತರಲು ನಾವು ಎಲ್ಲಾ ಪ್ರಯತ್ನ ಮಾಡುತ್ತೇವೆ. ನಾನು ಮಾಡಿದ್ದು ವಿಶೇಷವೇನಲ್ಲ. ನಾನು ಪ್ರಧಾನಿ ಮೋದಿಯವರಿಗೂ ಅದನ್ನೇ ಹೇಳಿದ್ದೇನೆ” ಎಂದು ಈಶ್ವರಪ್ಪ ಹೇಳಿದರು.

”ಮಾಜಿ ಉಪಮುಖ್ಯಮಂತ್ರಿಯಾಗಿದ್ದ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರವನ್ನು ಪಕ್ಷದ ಕೇಂದ್ರ ನಾಯಕತ್ವಕ್ಕೆ ಇತ್ತೀಚೆಗೆ ತಿಳಿಸಿದ್ದರು. ಟಿಕೆಟ್ ಘೋಷಣೆಗೂ ಮುನ್ನವೇ ಹೈಕಮಾಂಡ್ ಟಿಕಟ್ ನೀಡದಿರುವ ಬಗ್ಗೆ ಈಶ್ವರಪ್ಪ ಅವರಿಗೆ ತಿಳಿಸಿದ್ದರು ಮತ್ತು ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಣೆ ಮಾಡಬೇಕು ಎಂದು ಹೇಳಿದ್ದರು” ಅದರಂತೆ ಅವರು ನಿವೃತ್ತಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...