Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ - ಈ ಬಾರಿ?

ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ – ಈ ಬಾರಿ?

- Advertisement -
- Advertisement -

ತುಮಕೂರು ಜಿಲ್ಲೆಗೆ ಸೇರಿರುವ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಮೂರು ಮುಖ್ಯ ಪಕ್ಷಗಳ ಜೊತೆಗೆ ಕೆ.ಆರ್.ಎಸ್ ಮತ್ತು ಬಂಡಾಯ ಅಭ್ಯರ್ಥಿಗಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ರಾಜಕೀಯ ಇತಿಹಾಸ

ಕುಣಿಗಲ್‌ನಲ್ಲಿ ಇದುವರೆಗೂ 15 ಚುನಾವಣೆಗಳು ನಡೆದಿವೆ. ಅದರಲ್ಲಿ ಕಾಂಗ್ರೆಸ್ ಪಕ್ಷ 10 ಬಾರಿ ಗೆದ್ದು ಬೀಗಿದೆ. ಜನತಾಪಕ್ಷ ಎರಡು ಬಾರಿ, ಜೆಡಿಎಸ್ ಎರಡು ಬಾರಿ ಜಯ ಕಂಡರೆ, ಪಕ್ಷೇತರ ಅಭ್ಯರ್ಥಿ ಒಮ್ಮೆ ಗೆಲುವು ದಾಖಲಿಸಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ಇಲ್ಲಿ ಬಿಜೆಪಿ ಖಾತೆ ತೆರೆಯಲು ಇದುವರೆಗೂ ಸಾಧ್ಯವಾಗಿಲ್ಲ.

1952 ಮತ್ತು 1957 ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ಎನ್ ಮೂಡಲಗಿರಿಗೌಡ ಗೆಲುವು ಸಾಧಿಸಿದರೆ, 1962ರಲ್ಲಿ ಪಕ್ಷೇತರ ಅಭ್ಯರ್ಥಿ ಅಂದಾನಯ್ಯ ಶಾಸಕರಾಗಿದ್ದರು. 1967ರಲ್ಲಿ ಕಾಂಗ್ರೆಸ್‌ನಿಂದ ಜಿ.ತಮ್ಮಣ್ಣ ಆರಿಸಿ ಬಂದರೆ 1972 ಮತ್ತು 1978 ರಲ್ಲಿ ಕಾಂಗ್ರೆಸ್‌ ಸೇರಿದ್ದ ಅಂದಾನಯ್ಯ ಜಯ ಕಂಡಿದ್ದರು.

1983 ಮತ್ತು 1985ರಲ್ಲಿ ಜನತಾ ಪಕ್ಷದ ವೈ.ಕೆ ರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಲಕ್ಕಪ್ಪ ಆಯ್ಕೆಯಾಗಿದ್ದರು. 1994 ಮತ್ತು 1999ರಲ್ಲಿ ಎಸ್‌.ಪಿ ಮುದ್ದಹನುಮೇಗೌಡ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ನಿಂಗಪ್ಪ ಗೆಲುವು ಸಾಧಿಸಿದ್ದರು.

2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಬಿ.ರಾಮಸ್ವಾಮಿಗೌಡ 48,160 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಬಿಜೆಪಿ ಅಭ್ಯರ್ಥಿ ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಅವರ ಸಹೋದರರಾದ ಜೆಡಿಎಸ್ ಅಭ್ಯರ್ಥಿ ಡಿ.ನಾಗರಾಜಯ್ಯ 32,545 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಸಹೋದರರಿಬ್ಬರ ಮತವಿಭಜನೆ ಕಾಂಗ್ರೆಸ್‌ಗೆ ಅನುಕೂಲವಾಗಿತ್ತು.

2013ರಲ್ಲಿ ಜೆಡಿಎಸ್‌ನ ಡಿ.ನಾಗರಾಜಯ್ಯ 44,575 ಮತಗಳನ್ನು ಪಡೆದು ಜಯ ದಾಖಲಿಸಿದರು. ಅವರ ಸಹೋದರ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಎರಡನೇ ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಬಿ.ರಾಮಸ್ವಾಮಿಗೌಡ 33,918 ಮತ ಪಡೆದು ಮೂರನೇ ಸ್ಥಾನ ಪಡೆದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಸಿ.ಎಂ.ರವಿಕಿರಣ್ 24,604 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದಿದ್ದು ಜೆಡಿಎಸ್ ಗೆಲುವಿಗೆ ಸಹಕಾರಿಯಾಯಿತು.

2018ರ ಚುನಾವಣೆಗೆ ವೇಳೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿತು. ಬಿ.ಬಿ.ರಾಮಸ್ವಾಮಿಗೌಡರ ಬದಲಿಗೆ ಡಿ.ಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಕಣಕ್ಕಳಿದು 58,697 ಮತಗಳನ್ನು ಪಡೆದು ಶಾಸಕರಾದರು. ಬಿಜೆಪಿಯ ಡಿ.ಕೃಷ್ಣಕುಮಾರ್ 53,097 ಮತಗಳನ್ನು ಪಡೆದರೆ ಅವರ ಸಹೋದರ ಜೆಡಿಎಸ್‌ನ ಡಿ.ನಾಗರಾಜಯ್ಯ 44,476 ಮತಗಳನ್ನು ಪಡೆದರು.

ಅಂದಾಜು ಜಾತಿವಾರು ಮತಗಳು

ಕುಣಿಗಲ್‌ನಲ್ಲಿ ಅಂದಾಜು 2 ಲಕ್ಷದಷ್ಟು ಮತಗಳಿದ್ದು, ಒಕ್ಕಲಿಗ ಸಮುದಾಯದ ಮತಗಳು ಅತ್ಯಧಿಕ ಸಂಖ್ಯೆಯಲ್ಲಿದ್ದು ಮೂರು ಪಕ್ಷದ ಅಭ್ಯರ್ಥಿಗಳು ಒಕ್ಕಲಿಗರೇ ಆಗಿದ್ದಾರೆ.

ಒಕ್ಕಲಿಗರು: 85,000
ಪರಿಶಿಷ್ಟ ಜಾತಿ: 35,000
ಮುಸ್ಲಿಂ: 28,000
ತಿಗಳ: 8,000
ಕುರುಬರು 8,000
ಲಿಂಗಾಯತ 7,000
ಇತರೆ: 29,000

ಹಾಲಿ ಶಾಸಕ ರಂಗನಾಥ್‌ರವರಿಗೆ ಕಾಂಗ್ರೆಸ್ ಟಿಕೆಟ್

ಹಾಲಿ ಶಾಸಕ ಡಾ.ರಂಗನಾಥ್‌ರವರು ರಸ್ತೆ, ಕುಡಿಯುವ ನೀರಿನಂತಹ ಒಂದಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ. ಒಂದಷ್ಟು ಅನುದಾನವನ್ನು ತಂದಿದ್ದಾರೆ. ಆದರೆ ತಮ್ಮ ಅನುಯಾಯಿಗಳಿಗೆ ಹೆಚ್ಚಿನ ಕೆಲಸ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅವರಿಗೆ ಟಿಕೆಟ್ ನೀಡಿದೆ.

ಡಾ.ರಂಗನಾಥ್

ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಬಿ.ಬಿ ರಾಮಸ್ವಾಮಿಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.

ಬಿಜೆಪಿ ಟಿಕೆಟ್‌ ಡಿ.ಕೃಷ್ಣಕುಮಾರ್ ಪಾಲು

ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಸತತ ಸೋಲು ಕಂಡಿರುವ ಅವರು ಇದು ಕೊನೆಯ ಚುನಾವಣೆ ಎಂದು ಟಿಕೆಟ್ ಪಡೆದಿದ್ದಾರೆ.

ಡಿ.ಕೃಷ್ಣಕುಮಾರ್

ಆದರೆ ಮಹಿಳೆಯರಿಗೆ ಬಾಗಿನ ಕೊಡುವುದು, ಬಾಡೂಟ ಹಾಕಿಸುವ ಕೆಲಸಗಳ ಮೂಲಕ ಬಿಜೆಪಿ ಟಿಕೆಟ್ ಬಯಸಿದ್ದ ಹಿಂದುತ್ವವಾದಿ ರಾಜೇಶ್ ಗೌಡರಿಗೆ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕೊನೆಗೆ ಬಿಜೆಪಿ ಮುಖಂಡರು ಅವರ ಮನವೊಲಿಸಿ ನಾಮಪತ್ರ ವಾಪಸ್ ಪಡೆಸಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಸ್‌ಪಿ ಮುದ್ದಹನುಮೇಗೌಡರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಸಿಗುತ್ತದೆ ಎಂದೂ ಹೇಳಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ವಂಚಿತರಾದರು. ಆಗ ಬಂಡಾಯವೆದ್ದು ಪಕ್ಷೇತರ ಸ್ಪರ್ಧೆ ಘೋಷಿಸಿದರು. ನಂತರ ಬಿಜೆಪಿಯ ಹಿರಿಯ ಮುಖಂಡರು ಅವರ ಮನವೊಲಿಸಿ 2024ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಬಂಡಾಯ ಶಮನಗೊಳಿಸಲಾಗಿದೆ.

ಜೆಡಿಎಸ್‌ನಿಂದ ಡಿ.ನಾಗರಾಜಯ್ಯನವರ ಪುತ್ರ ಕಣಕ್ಕೆ

ಕೃಷ್ಣಕುಮಾರ್‌ರವರ ಅಣ್ಣ ಡಿ.ನಾಗರಾಜಯ್ಯನವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿತ್ತು. 80 ವರ್ಷದ ಅವರು ತಮ್ಮ ಪುತ್ರನಿಗೆ ಟಿಕೆಟ್ ಧಾರೆಯೆರೆದರು. ಅವರ ಪುತ್ರ ಮಾಜಿ ಜಿ.ಪಂ ಅಧ್ಯಕ್ಷ ಡಾ.ಬಿ.ಎನ್ ರವಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಡಾ ರವಿ ಬಿ.ಎನ್

ಜಾಣಗೆರೆ ರಘು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ

ಭ್ರಷ್ಟಾಚಾರದ ವಿರುದ್ಧ ರಾಜಿರಹಿತ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಕಾರ್ಯದರ್ಶಿಯಾದ ರಘು ಜಾಣಗೆರೆಯವರು ಕೆಆರ್‌ಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹತ್ತಾರು ವರ್ಷಗಳಿಂದ ಕ್ಷೇತ್ರದಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅವರು ನಿರಂತರವಾಗಿ ದನಿ ಎತ್ತಿದ್ದಾರೆ. ಪೊಲೀಸರ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಚಿರಪರಿಚಿತರಾಗಿರುವ ಅವರು ಈ ಬಾರಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಣಕ್ಕಿಳಿದಿದ್ದಾರೆ.

ರಘು ಜಾಣಗೆರೆ

ಎಚ್.ಎ ಜಯರಾಮಯ್ಯ: ಆಮ್ ಆದ್ಮಿ ಪಕ್ಷ

ಕುಣಿಗಲ್‌ನಲ್ಲಿ ಆಮ್ ಆದ್ಮಿ ಪಕ್ಷವು ಸಹ ಸದ್ದು ಮಾಡುತ್ತಿದೆ. ಎಚ್.ಎ ಜಯರಾಮಯ್ಯ ಅಭ್ಯರ್ಥಿಯಾಗಿದ್ದು ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

2023ರ ಸಾಧ್ಯತೆಗಳು 

ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಳೆದ ಮೂರು ಚುನಾವಣೆಗಳಲ್ಲಿ ಸಹೋದರರು ಸ್ಪರ್ಧಿಸುತ್ತಿದ್ದರು. ಈ ಬಾರಿ ಅಪ್ಪ ಕೃಷ್ಣಕುಮಾರ್ ಮತ್ತು ಅಣ್ಣನ ಮಗ ಬಿ.ಎನ್ ರವಿ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮೂರು ಸೋಲಿನ ಅನುಕಂಪ ಹೊ೦ದಿರುವ ಡಿ.ಕೃಷ್ಣಕುಮಾರ್‌ರವರಿಗೆ ಗೆಲ್ಲಲು ಅವರ ಅಣ್ಣ ಅಡ್ಡಿಯಾಗಿದ್ದರು. ಈಗ ಅವರ ಪುತ್ರ ಕಣದಲ್ಲಿದ್ದಾರೆ. ಹಾಗಾಗಿ ಕುಣಿಗಲ್‌ನಲ್ಲಿ ಈ ಬಾರಿಯೂ ಬಿಜೆಪಿ ಖಾತೆ ತೆರೆಯುತ್ತದೆ ಎಂದು ಖಚಿತವಾಗಿ ಹೇಳಲು ಬರುವುದಿಲ್ಲ. ಕಾಂಗ್ರೆಸ್ ಬಂಡಾಯ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ. ಇದರ ನಡುವೆ ಕೆಆರ್‌ಎಸ್ ಪಕ್ಷದ ರಘು ಜಾಣಗೆರೆ ಮತ್ತು ಆಪ್‌ನ ಎಚ್.ಎ ಜಯರಾಮಯ್ಯ ಕೂಡ ಗಂಭೀರ ಸ್ಪರ್ಧೆಯೊಡ್ಡುತ್ತಿದ್ದಾರೆ. ಹಾಗಾಗಿ ಕುಣಿಗಲ್‌ನ ಫಲಿತಾಂಶ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...