Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....