Homeಕರ್ನಾಟಕ‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅಂದ್ರೆ ವಿಷದ ಹಾವಿದ್ದಂತೆ. ವಿಷ ಹೌದೋ, ಅಲ್ಲವೋ ಎಂದು ನೀವೇನಾದರೂ ನೆಕ್ಕಿ ನೋಡಲು ಹೋದರೆ ಸತ್ತು ಹೋಗ್ತೀರಿ” ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.

ರೋಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.‌ಪಾಟೀಲ ಅವರ ಪರ ಪಟ್ಟಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಖರ್ಗೆಯವರು ಮಾತನಾಡಿದ್ದಾರೆ.

ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಅವರು, “ಮೋದಿ ಒಬ್ಬ ಆಸೆಬುರುಕ ಮನುಷ್ಯ. ಯಾವುದಾದರೂ ಕುರ್ಚಿ ಖಾಲಿ ಇದ್ದರೆ ಅಲ್ಲಿ ಬಂದು ಕುಳಿತುಕೊಳ್ಳುತ್ತಾನೆ. ತಾನು ತಿನ್ನಲ್ಲ ತಿನ್ನಲ್ಲ, ತಿನ್ನೋಕೆ ಬಿಡಲ್ಲ ಎಂದು ಹೇಳುತ್ತಾನೆ. ಆದರೆ, ಶೇ 40ರಷ್ಟು ಲಂಚ ತಿಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ರಾಜಕೀಯ ಮಾಡುತ್ತಾನೆ. ಆತ ದೇಶವನ್ನು ತನ್ನ ವಿಚಾರಧಾರೆಯಿಂದ ಹಾಳು ಮಾಡಲು ಬಂದಿದ್ದಾನೆ” ಎಂದು ಕಟುವಾಗಿ ಟೀಕಿಸಿದ್ದಾರೆ.

“ಸಂಸತ್‌ನಲ್ಲಿ ಪ್ರಶ್ನೆ ಮಾಡಿದರೆ 56 ಇಂಚಿನ ಎದೆ ಬಗ್ಗೆ ಹೇಳುತ್ತಾರೆ. ನಾವು ಅವರ ದೇಹದಾರ್ಢ್ಯತೆ ಕೇಳುತ್ತಿಲ್ಲ. ಅವರು ಮಾಡಿರುವ ಜನಪರ, ಅಭಿವೃದ್ಧಿಪರ ಕೆಲಸಗಳನ್ನು ಅಳತೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನ ದಂಗೆ ಏಳುತ್ತಾರೆ ಎಂದು ಹೇಳುವ ಮೂಲಕ ಅಮಿತ್‌ ಶಾ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಇಲ್ಲಿಯವರೆಗೆ ದಂಗೆಗಳು ನಡೆದಿರುವುದು ಗುಜರಾತ್‌ನಲ್ಲಿ ಮಾತ್ರ” ಎಂದು ತಿಳಿಸಿದ್ದಾರೆ.

ಖರ್ಗೆಯವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ರಾಷ್ಟ್ರಸೇವೆಯನ್ನೇ ತನ್ನ ಜೀವನದ ಪರಮ ಧ್ಯೇಯವನ್ನಾಗಿಸಿಕೊಂಡು ಶ್ರಮಿಸುತ್ತಿರುವ, ಹಿಂದುಳಿದ ಸಮುದಾಯದ ನರೇಂದ್ರಮೋದಿಯವರನ್ನು ‘ಮೌತ್ ಕಿ ಸೌದಾಗರ್’ ‘ರಾವಣ’, ‘ನೀಚ ವ್ಯಕ್ತಿ’ ಎಂದೆಲ್ಲಾ ನಿಂದಿಸಿ, ಇದೀಗ ಸೋಲುವ ಹತಾಶೆಯಿಂದ ಖರ್ಗೆಯವರು ವಿಷಸರ್ಪ ಎನ್ನುವ ಮೂಲಕ ಕಾಂಗ್ರೆ ಸ್‌ನ ವಿಕೃತ ಮನಸ್ಥಿತಿಯನ್ನು ಸ್ವಯಂ ಬಯಲು ಮಾಡಿದ್ದಾರೆೆ” ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.

“ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ. ಖರ್ಗೆಯವರ ಹೇಳಿಕೆಗೆ ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು” ಎಂದು ಕೇಂದ್ರ ಸಚಿವ ಅನುರಾಗ್ ಒತ್ತಾಯಿಸಿದ್ದಾರೆ.

ತಮ್ಮ ಹೇಳಿಕೆಗೆ ಖರ್ಗೆಯವರು ಸ್ಪಷ್ಟನೆಯನ್ನು ನೀಡಿದ್ದಾರೆ. “ಬಿಜೆಪಿ ಪಾರ್ಟಿ ಹಾವು ಇದ್ದ ಹಾಗೆ. ಸ್ವಲ್ಪ ನೆಕ್ಕಿ ನೋಡುತ್ತೇವೆ ಅಂದರೂ ಸಾವು ಖಚಿತ ಎಂಬರ್ಥದಲ್ಲಿ ಹೇಳಿದೆ. ಪ್ರಧಾನಿ ಮೋದಿ ಅವರ ಬಗ್ಗೆ ಈ ಮಾತು ಹೇಳಿಲ್ಲ. ವೈಯಕ್ತಿಕವಾಗಿ ಯಾರ ಬಗ್ಗೆಯೂ ನನಗೆ ಅಸೂಯೆ ಇಲ್ಲ” ಎಂದು ತಿಳಿಸಿದ್ದಾರೆ.

“ಬಿಜೆಪಿಯವರ ಮಾಡಿದ ಭ್ರಷ್ಟಚಾರಗಳು ಅಷ್ಟಿಷ್ಟಲ್ಲ. ಅವುಗಳ ಬಗ್ಗೆ ಹೇಳಿದರೆ ಇಡಿ, ಐಟಿ ಅಸ್ತ್ರಗಳನ್ನು ಬಳಕೆ ಮಾಡಿ ಹೆದರಿಸುವುದು ಸರ್ವೇ ಸಾಮಾನ್ಯವಾಗಿದೆ. ಆದ್ದರಿಂದ ಮೋದಿ ಸರ್ಕಾರ ಒಂದು ವಿಷಯುಕ್ತ ಹಾವಿನಂತಿದೆ. ಬಿಜೆಪಿ ಐಡಿಯಾಲಾಜಿ ವಿಷದಂತಿದೆ. ಅದನ್ನು ನೀವು ಬೆಂಬಲಿಸುತ್ತೇವೆ ಅಂದರೆ ಸಾವು ಖಚಿತ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...