Homeಕರ್ನಾಟಕ'ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ' ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

- Advertisement -
- Advertisement -

”ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿಷಕನ್ಯೆ, ಮತ್ತೆ ಅವರು ಚೀನಾ ಪಾಕಿಸ್ತಾನದ ಎಜೆಂಟ್” ಎಂದು ಕೊಪ್ಪಳದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಾಲಿಗೆ ಹರಿಬಿಟ್ಟಿದ್ದಾರೆ.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಯತ್ನಾಳ್, ”ಮೋದಿ ನಾಗರಹಾವು ಆದರೆ ಸೋನಿಯಾ ಗಾಂಧಿ ವಿಷಕನ್ಯೆನಾ?” ಎಂದು ಪ್ರಶ್ನೆ ಮಾಡಿದ್ದಾರೆ. ಜೊತೆಗೆ ”ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹುಚ್ಚ” ಎಂದು ಕರೆದಿದ್ದಾರೆ.

ಯತ್ನಾಳ್ ಹೇಳಿಕೆ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ”ಸೋನಿಯಾ ಗಾಂಧಿ ವಿಷಕನ್ಯೆ ಎಂಬ ಹೇಳಿಕೆ ಮೂಲಕ ಇಡೀ ಸ್ತ್ರೀ ಕುಲವನ್ನೇ ಅವಮಾನಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಬಿಜೆಪಿಯಿಂದ ತಕ್ಷಣ ಉಚ್ಛಾಟಿಸಬೇಕು” ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ”ಯತ್ನಾಳ ಅವರು ಭಾರತದ ಎಲ್ಲ ಮಹಿಳೆಯರನ್ನು ಅವಮಾನಿಸಿದ್ದಾರೆ. ಈ ಘಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇಶದ ಕ್ಷಮೆ ಕೋರಬೇಕು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಕ್ಷಣವೇ ಯತ್ನಾಳ ಅವರನ್ನು ಉಚ್ಛಾಟಿಸಬೇಕು” ಎಂದು ಒತ್ತಾಯಿಸಿದ್ದಾರೆ.

”ಸೋನಿಯಾ ಅವರು ಈ ದೇಶದ ಅಖಂಡತೆ ಮತ್ತು ಸಮಗ್ರತೆಗಾಗಿ ಅತ್ತೆ ಹಾಗೂ ಗಂಡನನ್ನು ಕಳೆದುಕೊಂಡರು. ಎರಡು ಬಾರಿ ದೇಶದ ಪ್ರಧಾನಿ ಹುದ್ದೆ ಅಲಂಕರಿಸುವ ಅವಕಾಶ ಸಿಕ್ಕರೂ ಡಾ.ಮನಮೋಹನ್ ಸಿಂಗ್ ಅವರಂತಹ ಶ್ರೇಷ್ಠ ಆರ್ಥಿಕ ತಜ್ಞನಿಗೆ ಅವಕಾಶ ಕಲ್ಪಿಸಿದರು. ಅಂತಹ ಧೀಮಂತ ಮಹಿಳೆಯ ಕುರಿತು ಯತ್ನಾಳ ಕೀಳುಮಟ್ಟದ ಹೇಳಿಕೆ ನೀಡಿರುವುದು ಅಕ್ಷಮ್ಯ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಮೋದಿ ವಿಷದ ಹಾವಿದಂತೆ’; ರಾಜಕೀಯ ಚರ್ಚೆಗೆ ಗ್ರಾಸವಾದ ಖರ್ಗೆ ಹೇಳಿಕೆ

”ಯತ್ನಾಳ್, ನಿನ್ನ ಹೇಳಿಕೆಗೆ ಈ ರಾಜ್ಯದ ಜನರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೇಗೆ ಪ್ರತಿಕ್ರಿಯಿಸುತ್ತಾರೋ ನನಗಂತೂ ಗೊತ್ತಿಲ್ಲ” ಎಂದು ಏಕವಚನದಲ್ಲೇ ಎಚ್ಚರಿಕೆ ಡಿಕೆ ಶಿವಕುಮಾರ್ ನೀಡಿದ್ದಾರೆ.

”ನರೇಂದ್ರ ಮೋದಿಯವರು ಗುರುವಾರ ವರ್ಚ್ಯುಯಲ್ ಸಭೆ ನಡೆಸಿದ್ದಾರೆ. 50 ಲಕ್ಷ ಜನರನ್ನು ಉದ್ದೇಶಿಸಿ ಮಾತನಾಡಿರುವುದಾಗಿ ಹೇಳಿಕೊಂಡಿದ್ದಾರೆ. ಈ ಸಭೆಗೆ ಅನುಮತಿ ನೀಡಲಾಗಿತ್ತೆ? ಸಭೆಯ ವೆಚ್ಚದ ವಿವರವನ್ನು ಯಾರ ಲೆಕ್ಕಕ್ಕೆ ಸೇರಿಸಲಾಗುತ್ತದೆ ಎಂಬುದನ್ನು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ಈ ಕುರಿತು ಕ್ರಮ ಕೈಗೊಳ್ಳಬೇಕು” ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

ಈ ಬಗ್ಗೆ ಕಾಂಗ್ರೆಸ್ ಘಟಕ ಸರಣಿ ಟ್ವೀಟ್ ಮಾಡಿದ್ದು, ”ಯತ್ನಾಳರ “ವಿಷಕನ್ಯೆ” ಹೇಳಿಕೆಗೆ ನರೇಂದ್ರ ಮೋದಿ ಅವರ ಅನುಮೋದನೆ ಇರಬಹುದೇನೋ, ಅವರದ್ದೂ ಇದೇ ಮನಸ್ಥಿತಿಯಲ್ಲವೇ! ಕಾಂಗ್ರೆಸ್ಸಿನ ವಿಧವೆ, ಜರ್ಸಿ ಹಸು, ವಿಷಕನ್ಯೆ, ಶ್ರೀಮತಿ ಸೋನಿಯಾ ಗಾಂಧಿಯವರ ಬಿಜೆಪಿ ಪ್ರಯೋಗಿಸುವ ಅತ್ಯಂತ ಕೀಳು ಪದಗಳು ಇನ್ನೆಷ್ಟಿವೆ? ಸಿಎಂ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ಯತ್ನಾಳ್ ಈ ಹೇಳಿಕೆ ನೀಡಿದರೆ?” ಎಂದು ಪ್ರಶ್ನಿಸಿದೆ.

”ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯು ಈ ದೇಶದ ಸಂಸ್ಕೃತಿಗೆ ದಕ್ಕೆ ತರುವಂತಹದ್ದು. ಅವರ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಸಿಎಂ ಬಸವರಾಜಬೊಮ್ಮಾಯಿ ಅವರು ಸೋನಿಯಾ ಗಾಂಧಿಯವರ ಹಾಗೂ ಈ ದೇಶದ ಸಮಸ್ತ ಮಹಿಳೆಯರಲ್ಲಿ ಮಂಡಿಯೂರಿ ಕ್ಷಮೆ ಕೇಳಬೇಕು. ಇದು ಸೋನಿಯಾ ಗಾಂಧಿಯವರೊಬ್ಬರ ಪ್ರಶ್ನೆಯಲ್ಲ, ಇಡೀ ಸ್ತ್ರೀಕುಲದ ಘನತೆಯ ಪ್ರಶ್ನೆ” ಕಾಂಗ್ರೆಸ್ ಆಗ್ರಹಿಸಿದೆ.

”ಬಾರ್ ಡ್ಯಾನ್ಸರ್, ಕಾಂಗ್ರೆಸ್‌ನ ವಿಧವೆ, ಜರ್ಸಿ ಹಸು, ವಿಷಕನ್ಯೆ.. ಬಿಜೆಪಿಗರಿಂದ ಈ ರೀತಿಯ ಕೀಳು ಮಟ್ಟದ ನಿಂದನೆಗೆ ಒಳಗಾಗುತ್ತಿರುವ ಶ್ರೀಮತಿ ಸೋನಿಯಾ ಗಾಂಧಿಯವರು ಮಾಡಿದ ಅಪರಾದವಾದರೂ ಏನು? ಅವರು ಭಾರತದ ಸಂಸ್ಕೃತಿ ಅಳವಡಿಸಿಕೊಂಡು ಬದುಕುತ್ತಿರುವುದು ತಪ್ಪೇ? ದೇಶಕ್ಕಾಗಿ ಪತಿಯನ್ನು ಕಳೆದುಕೊಂಡಿದ್ದು ತಪ್ಪೇ?” ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...