Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...